Wednesday, 11th December 2024

ಅಮೆರಿಕದ ಸೇನೆಗೆ ಲೈಂಗಿಕ ಅಲ್ಪಸಂಖ್ಯಾತರ ನೇಮಕ: ಹೊಸ ನಿಯಮ ಜಾರಿ

ವಾಷಿಂಗ್ಟನ್ : ಅಮೆರಿಕದ ಸೇನೆಗೆ ಎಲ್ಲಾ ಲೈಂಗಿಕ ಅಲ್ಪಸಂಖ್ಯಾತರು ಸೇವೆ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಅಮೆರಿಕಾ ರಕ್ಷಣಾ ಇಲಾಖೆ ಹೊಸ ನಿಯಮ ಜಾರಿಗೊಳಿಸಿದೆ.

ಲೈಂಗಿಕ ಅಲ್ಪಸಂಖ್ಯಾತರನ್ನು ಸೇನೆಗೆ ಸೇರ್ಪಡೆ ಮಾಡಿಕೊಳ್ಳಲು ಡೊನಾಲ್ಡ್ ಟ್ರಂಪ್ ಅವರು ವಿಧಿಸಿದ್ದ ನಿರ್ಬಂಧವನ್ನು ಅಮೆರಿಕದ ರಕ್ಷಣಾ ಇಲಾಖೆ ತೆಗೆದು ಹಾಕಿದೆ. ಸೇನಾ ಮಾನದಂಡಗಳನ್ನು ಪೂರೈಸುವ ಎಲ್ಲಾ ಲೈಂಗಿಕ ಅಲ್ಪಸಂಖ್ಯಾತರು ಸೇವೆ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಹೊಸ ನಿಯಮ ಜಾರಿಗೊಳಿಸಿದೆ.

ರಕ್ಷಣಾ ಇಲಾಖೆಯ ಮುಖ್ಯ ವಕ್ತಾರ ಜಾನ್ ಕಿರ್ಬಿ, ಅಮೆರಿಕಾದ ಸೇನಾಪಡೆಯಲ್ಲಿ ಸೇವೆ ಸಲ್ಲಿಸಲು ಎಲ್ಲಾ ಲೈಂಗಿಕ ಅಲ್ಪಸಂಖ್ಯಾ ತರು ಅಮೆರಿಕದ ಸೇನಾಪಡೆಯಲ್ಲಿ ಸೇವೆ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಹೇಳಿದ್ದಾರೆ.