Thursday, 19th September 2024

ಭಾರಿ ಅಗ್ನಿ ದುರಂತ: 10ಕ್ಕೂ ಹೆಚ್ಚು ಮಂದಿ ಸಾವು

ವೆಲ್ಲಿಂಗ್ಟನ್: ವೆಲ್ಲಿಂಗ್ಟನ್‌ನ ನಾಲ್ಕು ಅಂತಸ್ತಿನ ಹಾಸ್ಟೆಲ್‌ನಲ್ಲಿ ಮಂಗಳವಾರ ಭಾರಿ ಅಗ್ನಿ ದುರಂತ ಸಂಭವಿಸಿದೆ.

ದುರ್ಘಟನೆಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ನಗರ ಶೋಧ ಮತ್ತು ರಕ್ಷಣಾ ಸಿಬ್ಬಂದಿ ವೆಲ್ಲಿಂಗ್ಟನ್ ಹಾಸ್ಟೆಲ್‌ನ ಹೊಗೆಯಾಡುತ್ತಿರುವ ಭಗ್ನಾವಶೇಷಗಳಿಂದ ಬದುಕು ಳಿದವರಿಗಾಗಿ ಕಾರ್ಯಾಚರಣೆ ನಡಸುತ್ತಿದ್ದಾರೆ. ರಾತ್ರಿಯಿಡೀ ಸಂಭವಿಸಿದ ಭೀಕರ ಬೆಂಕಿ ಕೆನ್ನಾಲಿಗೆಗೆ 10 ಜನರು ಜೀವ ಕಳೆದುಕೊಂಡಿದ್ದಾರೆ.

ನ್ಯೂಜಿಲ್ಯಾಂಡ್​ ಪ್ರಧಾನಿ ಕ್ರಿಸ್ ಹಿಪ್ಕಿನ್ಸ್ ಅವರು ಈ ದುರ್ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ದೃಢ ಪಡಿಸಿದ್ದಾರೆ.

ನಾಲ್ಕು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ 12:30 ರ ಸುಮಾರಿಗೆ ಲೋಫರ್ಸ್ ಲಾಡ್ಜ್ ಹಾಸ್ಟೆಲ್‌ಗೆ ಅಗ್ನಿ ಶಾಮಕ ದಳಗಳನ್ನು ಕರೆಯ ಲಾಗಿದೆ. ಬೆಂಕಿ – ನಂದಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಟ್ಟಡದಲ್ಲಿ ಅಗ್ನಿ ಶಮನಕ್ಕೆ ಬೇಕಾದ ಸ್ಪ್ರಿಂಕ್ಲರ್‌ಗಳಿರಲಿಲ್ಲ ಎಂದು ಅಧಿಕಾರಿಗಳು ಇದೇ ವೇಳೆ ದೃಢಪಡಿಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ವೆಲ್ಲಿಂಗ್ಟನ್‌ನ ಲೋಫರ್ಸ್ ಲಾಡ್ಜ್ ಹಾಸ್ಟೆಲ್‌ನಲ್ಲಿ ಐವತ್ತೆರಡು ಜನರು ಇದ್ದರು ಎಂದು ಹೇಳಲಾಗುತ್ತಿದೆ. ಕಾಣೆ ಆದವರನ್ನು ಹುಡುಕಲಾಗುತ್ತಿದೆ ಎಂದು ವೆಲ್ಲಿಂಗ್ಟನ್ ಅಗ್ನಿಶಾಮಕ ಮತ್ತು ತುರ್ತು ಜಿಲ್ಲಾ ವ್ಯವಸ್ಥಾಪಕ ನಿಕ್ ಪ್ಯಾಟ್ ಹೇಳಿದ್ದಾರೆ. ಮಧ್ಯರಾತ್ರಿ 12:30ರ ಸುಮಾರಿಗೆ ಅಗ್ನಿ ದುರಂತದ ಮಾಹಿತಿ ಪಡೆದು ಇಲ್ಲಿಗೆ ಧಾವಿಸಿ ಕಾರ್ಯಾಚರಣೆ ಆರಂಭಿಸಲಾಯಿತು.