ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದನ್ನು ನಿಲ್ಲಿಸ ಲಾಗಿದೆ. ಕಾಬೂಲ್ ಸೇರಿದಂತೆ ದೇಶದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಾಹನ ಚಲಾಯಿಸುವುದನ್ನು ಕಾಣಬಹುದು. ಸರ್ಕಾರ ಇದರ ಮೇಲೆ ನಿರ್ಬಂಧ ವಿಧಿಸಿದ್ದು, ಚಾಲನಾ ಪರವಾನಗಿ ವಿತರಿಸುವುದನ್ನು ನಿಲ್ಲಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.
ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದು ವರಿದಿದೆ. ಮಹಿಳೆಯರಿಗೆ ಆರನೇ ತರಗತಿಗಿಂತ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗುವುದನ್ನು ನಿಷೇಧಿ ಸಿತ್ತು. ಶಿಕ್ಷಕರ ಕೊರತೆಯ ಕಾರಣ ಈ ರೀತಿ ಮಾಡಲಾಗಿದೆ. ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಬಯಸುವ ಹೆಣ್ಣುಮಕ್ಕಳಿಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.