ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Donald Trump: ಏನು ಮಾಡದ ಒಬಾಮಾಗೆ ನೊಬೆಲ್‌, 8 ಯುದ್ಧ ನಿಲ್ಲಿಸಿದರೂ ನನಗಿಲ್ಲ; ಮತ್ತೆ ಕ್ಯಾತೆ ತೆಗೆದ ಟ್ರಂಪ್‌

ನೊಬೆಲ್‌ ಶಾಂತಿ ಪುರಸ್ಕಾರ ಇಂದು ಇನ್ನೇನು ಕೆಲವೇ ಗಂಟೆಗಳಲ್ಲಿ ಘೋಷಣೆಗೊಳ್ಳಿದೆ. ಇದೀಗ ಮತ್ತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಮಗೆ ನೊಬೆಲ್‌ ನೀಡಬೇಕು ಎಂದು ಹೇಳಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರನ್ನು ಟೀಕಿಸಿದ್ದಾರೆ.

‌ವಾಷಿಂಗ್ಟನ್‌: ನೊಬೆಲ್‌ (Nobel) ಶಾಂತಿ ಪುರಸ್ಕಾರ ಇಂದು ಇನ್ನೇನು ಕೆಲವೇ ಗಂಟೆಗಳಲ್ಲಿ ಘೋಷಣೆಗೊಳ್ಳಿದೆ. ಇದೀಗ ಮತ್ತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ತಮಗೆ ನೊಬೆಲ್‌ ನೀಡಬೇಕು ಎಂದು ಹೇಳಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರನ್ನು ಟೀಕಿಸಿದ ಟ್ರಂಪ್‌, ಏನನ್ನೂ ಮಾಡದೆ" ಮತ್ತು "ನಮ್ಮ ದೇಶವನ್ನು ನಾಶಮಾಡಿದ್ದಕ್ಕಾಗಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಒಬಾಮಾ ಒಳ್ಳೆಯ ಅಧ್ಯಕ್ಷರಾಗಿಲಿಲ್ಲ ಎಂದು ಕಿಡಿ ಕಾರಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಗಾಜಾದಲ್ಲಿ ಶಾಂತಿ ಸ್ಥಾಪಿಸುವಲ್ಲಿ ಮತ್ತು "ಎಂಟು ಯುದ್ಧಗಳನ್ನು" ಕೊನೆಗೊಳಿಸುವಲ್ಲಿ ತಮ್ಮ ಪಾತ್ರವನ್ನು ಹೇಳಿದರು.

ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳುಗಳಲ್ಲಿ ಒಬಾಮಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದ್ದಕ್ಕೆ ಟ್ರಂಪ್‌ ಬೇಸರ ವ್ಯಕ್ತಪಡಿಸಿದ್ದಾರೆ. ಏನೂ ಮಾಡದ ಕಾರಣ ಒಬಾಮಾಗೆ ಬಹುಮಾನ ಸಿಕ್ಕಿತು. ಆದರೆ ಆತ ನಮ್ಮ ದೇಶವನ್ನೇ ಹಾಳು ಮಾಡಿದ. ಅಧಿಕಾರ ವಹಿಸಿಕೊಂಡ ಎಂಟು ತಿಂಗಳ ನಂತರ 2009 ರಲ್ಲಿ ಒಬಾಮಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಯಿತು. ನಾರ್ವೇಜಿಯನ್ ನೊಬೆಲ್ ಸಮಿತಿಯು "ಅಂತರರಾಷ್ಟ್ರೀಯ ರಾಜತಾಂತ್ರಿಕತೆ ಮತ್ತು ಜನರ ನಡುವಿನ ಸಹಕಾರವನ್ನು ಬಲಪಡಿಸಲು ಅವರ ಅಸಾಧಾರಣ ಪ್ರಯತ್ನಗಳನ್ನು" ಸಮರ್ಥನೆಯಲ್ಲಿ ಉಲ್ಲೇಖಿಸಿತ್ತು.

ಜಗತ್ತಿನ ಪ್ರಮುಖ ಹಾಗೂ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ನೊಬೆಲ್‌ ಪ್ರಶಸ್ತಿ ಗಳಿಸಿದ್ದು, ಆರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜ್ಞಾನಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ರಸಾಯನ ವಿಜ್ಞಾನ, ಭೌತ ವಿಜ್ಞಾನ, ವೈದ್ಯ ವಿಜ್ಞಾನ, ಶಾಂತಿ, ಅರ್ಥಶಾಸ್ತ್ರ ಹಾಗೂ ಸಾಹಿತ್ಯ ಕ್ಷೇತ್ರಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿ ಆಯಾಯ ವಿಷಯದಲ್ಲಿ ನಿಪುಣತೆ ಹೊಂದಿರುವ ಮಹಾನ್ ಸಾಧಕರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ.

ಈ ಸುದ್ದಿಯನ್ನೂ ಓದಿ: Nobel Prize: ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಮುಡಿಗೆ ಸಾಹಿತ್ಯ ಕ್ಷೇತ್ರದ ನೊಬೆಲ್‌ ಗರಿ

1901ರಿಂದ ನೊಬೆಲ್‌ ಪ್ರಶಸ್ತಿ ಪ್ರದಾನಕ್ಕೆ ಚಾಲನೆ ದೊರೆತಿದ್ದು, ಸ್ವೀಡಿಷ್ ವಿಜ್ಞಾನಿ ಆಲ್ಫ್ರೆಡ್‌ ನೊಬೆಲ್‌ ಯಾವೆಲ್ಲ ಕ್ಷೇತ್ರಗಳಲ್ಲಿ ಈ ಪ್ರಶಸ್ತಿಯನ್ನು ನೀಡಬೇಕು ಎನ್ನುವ ಬಗ್ಗೆ ವಿಲ್ ಬರೆದಿದ್ದರು. ಈ ಪ್ರಶಸ್ತಿ ಪ್ರದಾನ ಮಾಡುವುದಕ್ಕೆ ಬರೋಬ್ಬರಿ 13 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿರಿಸಿದ್ದಾರೆ.