ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಾಕಿಸ್ತಾನದಲ್ಲಿ ನಿಲ್ಲಿಸಿದ ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಸಿಲಿಂಡರ್ ಸ್ಫೋಟ: 10 ಮಂದಿ ಸಾವು

Oxygen Cylinder Explodes: ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು ರೋಗಿ ಸೇರಿ 10 ಜನರು ಮೃತಪಟ್ಟಿರುವ ದುರ್ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಸಿಂಧ್ ಪ್ರಾಂತ್ಯದ ಥಾರ್ಪಾರ್ಕರ್ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಆರಿಫ್ ಅಜೀಜ್ ತಿಳಿಸಿದ್ದಾರೆ.

ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಸಿಲಿಂಡರ್ ಸ್ಫೋಟ: 10 ಮಂದಿ ಸಾವು

ಸಾಂದರ್ಭಿಕ ಚಿತ್ರ -

Priyanka P
Priyanka P Oct 29, 2026 5:28 PM

ಇಸ್ಲಾಮಾಬಾದ್, ಅ. 29: ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯೊಂದರಲ್ಲಿ ನಿಲ್ಲಿಸಲಾಗಿದ್ದ ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು (blast) ರೋಗಿ ಸೇರಿ 10 ಜನರು ಮೃತಪಟ್ಟಿರುವ ದುರ್ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಸಿಂಧ್ ಪ್ರಾಂತ್ಯದ ಥಾರ್ಪಾರ್ಕರ್ ಜಿಲ್ಲೆಯಲ್ಲಿ ಅಕ್ಟೋಬರ್‌ 28ರ ರಾತ್ರಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಆರಿಫ್ ಅಜೀಜ್ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಆಸ್ಪತ್ರೆಯ ಸಿಬ್ಬಂದಿ, ರೋಗಿಗಳು ಮತ್ತು ಅವರ ಸಂಬಂಧಿಕರು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ಸ್ಫೋಟ ಸಂಭವಿಸಿದಾಗ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಗುತ್ತಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಖಲೀಲ್ ಅಬ್ರೋ ವಿವರಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಫೋಟೊಗಳಲ್ಲಿ ಒಂದು ಬಾಗಿಲು ತೆರೆದಿರುವಂತೆ ಬೆಂಕಿ ವಾಹನವನ್ನು ಆವರಿಸುತ್ತಿರುವುದು ಕಂಡುಬಂದಿದೆ.

ಈ ದುರ್ಘಟನೆಗೆ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತದ ಕಾರಣವನ್ನು ಕಂಡುಹಿಡಿಯಲು ತ್ವರಿತ, ಪಾರದರ್ಶಕ ತನಿಖೆಗೆ ಕರೆ ನೀಡಿದ್ದಾರೆ. ಇಂತಹ ಘಟನೆಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಬಿಹಾರದಲ್ಲಿ ಪಟಾಕಿ ತಯಾರಿಕಾ ಮನೆಯಲ್ಲಿ ಭೀಕರ ಸ್ಫೋಟ: ನಾಲ್ವರ ದುರ್ಮರಣ

ಆಗಸ್ಟ್‌ನಲ್ಲಿ ಪಾಕಿಸ್ತಾನ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ನರ್ಸರಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮವಾಗಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ನವಜಾತ ಶಿಶುಗಳು ಮೃತಪಟ್ಟಿದ್ದವು. ರಕ್ಷಿಸಲ್ಪಟ್ಟ ಏಕೈಕ ಮಗು ವಾರಗಳ ನಂತರ ಸಾವನ್ನಪ್ಪಿತು, ಇದರಿಂದಾಗಿ ಸಾವಿನ ಸಂಖ್ಯೆ 15ಕ್ಕೆ ಏರಿತ್ತು.

ಪಂಜಾಬ್‌ನಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಗುಂಡಿನ ದಾಳಿ

ಪಂಜಾಬ್‌ನ ತಾರ್ನ್ ತರನ್ ಜಿಲ್ಲೆಯ ಖೇಮಕರಣ ಪಟ್ಟಣದ ಅಸಲ್ ಉತ್ತರ್ ಗ್ರಾಮದ ಸಮೀಪ ಬುಧವಾರ (ಅಕ್ಟೋಬರ್‌ 28) ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ನಡೆದ ಈ ಘಟನೆಯ ದೃಶ್ಯ ಸ್ಥಳೀಯ ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.