ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ahmed Sharif Chaudhry: ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ; ಮತ್ತೆ ಭಾರತಕ್ಕೆ ಗೊಡ್ಡು ಬೆದರಿಕೆ ಹಾಕಿದ ಪಾಕ್‌

ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ಉದ್ವಿಗ್ನತೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇದೀಗ ಪಾಕಿಸ್ತಾನ ಮತ್ತೆ ತನ್ನ ನರಿ ಬುದ್ಧಿಯನ್ನು ತೋರಿಸಿದೆ. ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, (Ahmed Sharif Chaudhry) ಭಯೋತ್ಪಾದಕ ಹಫೀಜ್ ಸಯೀದ್‌ನಂತೆ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ;ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌

Profile Vishakha Bhat May 23, 2025 10:12 AM

ಇಸ್ಲಾಮಾಬಾದ್:‌ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ಉದ್ವಿಗ್ನತೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇದೀಗ ಪಾಕಿಸ್ತಾನ ಮತ್ತೆ ತನ್ನ ನರಿ ಬುದ್ಧಿಯನ್ನು ತೋರಿಸಿದೆ. ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, (Ahmed Sharif Chaudhry) ಭಯೋತ್ಪಾದಕ ಹಫೀಜ್ ಸಯೀದ್‌ನಂತೆ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿದ್ದಾರೆ.

ಪಾಕಿಸ್ತಾನದ ವಿಶ್ವವಿದ್ಯಾನಿಲಯವೊಂದರಲ್ಲಿ ಭಾಷಣ ಮಾಡುವಾಗ ಅಹ್ಮದ್ ಷರೀಫ್ ಚೌಧರಿ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಸಿಂಧೂ ನದಿ ನೀರಿನ ಒಪ್ಪಂದವನ್ನು ರದ್ದುಗೊಳಿಸಿದೆ. ಪಾಕಿಸ್ತಾನ ಹಲವು ಬಾರಿ ಈ ಕುರಿತು ಮಾತನಾಡುವಂತೆ ಭಾರತಕ್ಕೆ ಮನವು ಮಾಡಿತ್ತು. ಆದರೆ ಭಾರತ ನದಿ ನೀರಿನ ಹಂಚಿಕೆಗೆ ನಿರಾಕರಿಸಿದೆ. ಇದೀಗ ಪಾಕ್‌ ಸೇನಾ ವಕ್ತಾರ ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಈ ಹಿಂದೆ ಪಾಕಿಸ್ತಾನ ಜಕಾರಣಿ ಬಿಲಾವಲ್ ಭುಟ್ಟೋ ಝರ್ದಾರಿ (Bilawal Bhutto Zardari) ಸಿಂಧೂ ನದಿ ಇಸ್ಲಾಮಾಬಾದ್‌ಗೆ ಸೇರಿದೆ ಮತ್ತು ಹಾಗೆಯೇ ಮುಂದುವರಿಯುತ್ತದೆ ಎಂದು ಹೇಳಿದ್ದರು. ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಝರ್ದಾರಿ, ʼʼಭಾರತವು ತನ್ನ ದೌರ್ಬಲ್ಯಗಳನ್ನು ಮರೆಮಾಚಲು ಮತ್ತು ಜನರನ್ನು ಮೂರ್ಖರನ್ನಾಗಿಸಲು ಇಸ್ಲಾಮಾಬಾದ್ ಅನ್ನು ದೂಷಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸುಳ್ಳು ಆರೋಪಗಳನ್ನು ಮಾಡಿ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ್ದಾರೆʼʼ ಎಂದು ಆರೋಪಿಸಿದ್ದರು.

ಈ ಸುದ್ದಿಯನ್ನೂ ಓದಿ: Spy Agent Arrest: ದೆಹಲಿ ಮೇಲೆ ದಾಳಿ ಮಾಡುವ ಪಾಕಿಸ್ತಾನದ ಸಂಚು ವಿಫಲ; ಇಬ್ಬರು ISI ಏಜೆಂಟ್‌ಗಳ ಬಂಧನ

ಭಾರತ ಮತ್ತು ಪಾಕಿಸ್ತಾನ ಈ ಎರಡು ರಾಷ್ಟ್ರಗಳು 1960ರಲ್ಲಿ ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಿದ್ದವು. ಇದಕ್ಕೆ ಸಾಕ್ಷಿಯಾಗಿ ವಿಶ್ವ ಬ್ಯಾಂಕ್ ಕೂಡ ಸಹಿ ಹಾಕಿತ್ತು. ಈ ಒಪ್ಪಂದದ ಪ್ರಕಾರ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರನ್ನು ಎರಡೂ ದೇಶಗಳ ನಡುವೆ ಸಮಾನವಾಗಿ ಹಂಚಲು ತೀರ್ಮಾನಿಸಲಾಯಿತು. ಮೂರು ಪೂರ್ವ ನದಿಗಳಾದ ಬಿಯಾಸ್, ರಾವಿ ಮತ್ತು ಸಟ್ಲೆಜ್‌ನಿಂದ ಭಾರತಕ್ಕೆ ಮತ್ತು ಮೂರು ಪಶ್ಚಿಮ ನದಿಗಳಾದ ಚೆನಾಬ್, ಸಿಂಧೂ ಮತ್ತು ಝೀಲಂನಿಂದ ಪಾಕಿಸ್ತಾನಕ್ಕೆ ಸಿಂಧೂ ನದಿಯ ನೀರನ್ನು ಹಂಚಲಾಯಿತು. ಇದೀಗ ಭಾರತ ಪಾಕಿಸ್ತಾನಕ್ಕೆ ನೀರು ಹರಿಸದಿರಲು ನಿರ್ಧರಿಸಿದೆ.