ಇಸ್ಲಾಮಾಬಾದ್: ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟನ್ನು ಉಂಟು ಮಾಡಿರುವ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ನಿಲ್ಲಿಸಲು ಇದೀಗ ಪಾಕಿಸ್ತಾನ ಮುಂದಾಗಿದೆ. ಕಳೆದ ಫೆಬ್ರವರಿ ತಿಂಗಳಾಂತ್ಯಕ್ಕೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇದನ್ನು ಈಗ ಶಮನಗೊಳಿಸಲು ಪಾಕಿಸ್ತಾನ ಪ್ರಮುಖ ಮಧ್ಯವರ್ತಿಯಾಗಿ ನಿಂತಿದೆ. ಈಗಾಗಲೇ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಭಾನುವಾರ ಸಂಘರ್ಷ ನಿಲ್ಲಿಸುವ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾರ್ಚ್ 23ರಂದು ಇರಾನ್ ಜೊತೆಗಿನ ಸಂಘರ್ಷ ಕೊನೆಗೊಳಿಸುವ ಕುರಿತು ಮಾತುಕತೆಗಳು ನಡೆಯುತ್ತಿದೆ ಎಂದು ಹೇಳಿದ್ದರು. ಆದರೆ ಇರಾನ್‌ನ ವಿದೇಶಾಂಗ ಸಚಿವಾಲಯವು ವಾಷಿಂಗ್ಟನ್‌ನೊಂದಿಗೆ ಮಾತುಕತೆಗೆ ನಿರಾಕರಿಸಿದೆ ಎಂದು ಇಸ್ಲಾಮಿಕ್ ಗಣರಾಜ್ಯದ ಮಾಧ್ಯಮಗಳು ವರದಿ ಮಾಡಿವೆ.
ನಷ್ಟ ಪರಿಹಾರ ಸಿಗುವ ತನಕ ಯುದ್ಧ ಮುಂದುವರಿಯಲಿದೆ; ಅಮೆರಿಕದ ಕದನ ವಿರಾಮಕ್ಕೆ ಷರತ್ತು ವಿಧಿಸಿದ ಇರಾನ್
ಇದಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮ ಖಾತೆಯಾದ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ಇರಾನ್ ಅಧಿಕಾರಿಗಳೊಂದಿಗೆ ಡೊನಾಲ್ಡ್ ಟ್ರಂಪ್ ಅವರು ಮಾತನಾಡಿದ್ದಾರೆ. ಇರಾನ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಸಂಘರ್ಷ ನಿಲ್ಲಿಸಲು ಸಾಧ್ಯವಿದೆ ಎಂದು ಅವರು ನಂಬಿದ್ದಾರೆ ಎಂದು ಹೇಳಿದರು.
ಇಸ್ಲಾಮಾಬಾದ್‌ನಲ್ಲಿ ಸಭೆ ?
ಇರಾನ್, ಇಸ್ರೇಲ್ ಮತ್ತು ಯುಎಸ್ ನಡುವಿನ ಸಂಘರ್ಷ ಕೊನೆಗೊಳಿಸಲು ಈಜಿಪ್ಟ್, ಟರ್ಕಿ ಮತ್ತು ಪಾಕಿಸ್ತಾನ ಸೇರಿದಂತೆ ಪ್ರಾದೇಶಿಕ ಮಧ್ಯವರ್ತಿಗಳು ಮುಂದಾಗಿದ್ದಾರೆ. ಈ ಕುರಿತು ಇಸ್ಲಾಮಾಬಾದ್ ಪ್ರಮುಖ ಮಧ್ಯವರ್ತಿಯಾಗಿ ಗುರುತಿಸಿಕೊಂಡಿದ್ದು, ಈ ಕುರಿತು ಅಮೆರಿಕ ಮತ್ತು ಇರಾನ್ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಇಸ್ಲಾಮಾಬಾದ್ ನಲ್ಲಿ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
110 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾ ಮಿಲಿಟರಿ ವಿಮಾನ ಪತನ; 80 ಮಂದಿ ಸಾವಿನ ಶಂಕೆ
ಕಳೆದ ವಾರಾಂತ್ಯದಲ್ಲಿ ಎರಡೂ ರಾಷ್ಟ್ರಗಳು ಸಂಘರ್ಷ ಕೊನೆಗೊಳಿಸಲು ಸಂದೇಶಗಳನ್ನು ವಿನಿಮಯ ಮಾಡಿಕೊಂಡರು ಎಂದು ಈಜಿಪ್ಟ್ ಅಧಿಕಾರಿಯೊಬ್ಬರು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದು, ಇದು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನಡೆದಿದೆ ಎಂದು ಅವರು ಹೇಳಿದ್ದಾರೆ.