ಇಸ್ಲಾಮಾಬಾದ್: ಅನಾರೋಗ್ಯದಿಂದ ಬಳಲುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕಿಸ್ತಾನ ಪೀಪಲ್ಸ್ ಪಕ್ಷದ ಸಹ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಅಲಿ ಅವರ ದೇಹದಲ್ಲಿ ಸಕ್ಕರೆ ಮಟ್ಟ ಕುಸಿತಕಂಡಿತ್ತು. ಹಾಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಲಿ ಅವರ ದೀರ್ಘಕಾಲದ ಸಹವರ್ತಿ ಡಾ.ಅಸೀಮ್ ಹುಸೇನ್ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ
ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳನ್ನು ಎದುರಿಸುತ್ತಿರುವ ಜರ್ದಾರಿ ಅವರು ಕಳೆದ ವರ್ಷ ಡಿಸೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಅವರ ಅನಾರೋಗ್ಯದ ಕಾರಣಕ್ಕಾಗಿ ಇಸ್ಲಾಮಾಬಾದ್ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಜರ್ದಾರಿ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ.