ರಾವಲ್ಪಿಂಡಿ: ಭಾರತೀಯ ಸೇನೆಯು (Indian army) ಆಪರೇಷನ್ ಸಿಂದೂರ್ (Operation Sindoor) ವೇಳೆ ಗುರಿಯಾಗಿಸಿಕೊಂಡಿದ್ದ ಪಾಕಿಸ್ತಾನದ (pakistan) ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ (Noor Khan airbase) ದುರಸ್ತಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಇದರ ಮೇಲೆ ಅಫ್ಘಾನ್ ತಾಲಿಬಾನ್ ಪಡೆಗಳು (Afghan Taliban forces) ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಯಿತು. ತಾಲಿಬಾನ್ ಪಡೆಗಳು ನೂರ್ ಖಾನ್ ವಾಯುನೆಲೆಯಲ್ಲಿರುವ ಪಾಕಿಸ್ತಾನದ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಕ್ವೆಟ್ಟಾದಲ್ಲಿರುವ 12ನೇ ವಿಭಾಗೀಯ ಪ್ರಧಾನ ಕಚೇರಿ ಮತ್ತು ಖೈಬರ್ ಪಖ್ತುನ್ಖ್ವಾದಲ್ಲಿರುವ ಪಾಕಿಸ್ತಾನಿ ಮಿಲಿಟರಿ ಸ್ಥಳಗಳನ್ನು ಗುರಿಯಾಗಿಸಿಕೊಂಡು ಸಶಸ್ತ್ರ ಡ್ರೋನ್ ದಾಳಿಗಳನ್ನು ನಡೆಸಿದ್ದವು.
ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತೀಯ ಸೇನಾ ಪಡೆಯು ಗುರಿಯಾಗಿಸಿಕೊಂಡಿದ್ದ ಪಾಕಿಸ್ತಾನಿ ಮಿಲಿಟರಿ ತಾಣಗಳಲ್ಲಿ ನೂರ್ ಖಾನ್ ವಾಯುನೆಲೆಯೂ ಸೇರಿತ್ತು. ಭಾರತ ಮತ್ತು ಪಾಕಿಸ್ತಾನ ಘರ್ಷಣೆಯ ಒಂಬತ್ತು ತಿಂಗಳ ಬಳಿಕವೂ ಇಲ್ಲಿ ಪುನರ್ನಿರ್ಮಾಣ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇತ್ತೀಚೆಗೆ ತಾಲಿಬಾನ್ ಪಡೆ ಇದರ ಮೇಲೆ ದಾಳಿ ನಡೆಸಿದ್ದರಿಂದ ದುರಸ್ತಿ ಕಾರ್ಯ ಮತ್ತಷ್ಟು ವಿಳಂಬವಾಗಿದೆ.
prahlad Joshi: ರಾಯಭಾರಿಗಳ ಜತೆ ಮಾತುಕತೆ, ಎಲ್ಲ ಭಾರತೀಯರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಸಚಿವ ಪ್ರಹ್ಲಾದ ಜೋಶಿ
ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಫ್ಘಾನಿಸ್ತಾನದ ರಾಷ್ಟ್ರೀಯ ರಕ್ಷಣಾ ಸಚಿವಾಲಯ, ತಾಲಿಬಾನ್ ಪಡೆಗಳು ಕ್ವೆಟ್ಟಾದಲ್ಲಿರುವ 12 ನೇ ವಿಭಾಗದ ಪ್ರಧಾನ ಕಚೇರಿ ಮತ್ತು ಖೈಬರ್ ಪಖ್ತುಂಖ್ವಾದಲ್ಲಿರುವ ಇತರ ಪಾಕಿಸ್ತಾನಿ ಮಿಲಿಟರಿ ಸ್ಥಳಗಳ ಮೇಲೆ ಡ್ರೋನ್ ದಾಳಿ ನಡೆಸಿವೆ ಎಂದು ಹೇಳಿದೆ.
ಇದಕ್ಕೂ ಮೊದಲು ಪೂರ್ವ ಅಫ್ಘಾನ್ ನಗರವಾದ ಜಲಾಲಾಬಾದ್‌ನಲ್ಲಿ ಪಾಕಿಸ್ತಾನಿ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ. ವಿಮಾನದಿಂದ ಪ್ಯಾರಾಚೂಟ್ ಮಾಡಿ ಹಾರಿದ ಪೈಲಟ್ ಅನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನವು ಶುಕ್ರವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮತ್ತು ತಾಲಿಬಾನ್ ಪರಮೋಚ್ಚ ನಾಯಕ ಹಿಬತುಲ್ಲಾ ಅಖುಂಡ್ಜಾದಾ ನೆಲೆಸಿರುವ ದಕ್ಷಿಣ ನಗರ ಕಂದಹಾರ್ ಮೇಲೆ ವಾಯುದಾಳಿ ನಡೆಸಿತ್ತು. ಇದರಿಂದ 133 ತಾಲಿಬಾನ್ ಹೋರಾಟಗಾರರು ಸಾವನ್ನಪ್ಪಿದ್ದಾರೆ, 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನದ ದಾಳಿಗೆ ಪ್ರತೀಕಾರವಾಗಿ ಗುರುವಾರ ತಡರಾತ್ರಿ ತಾಲಿಬಾನ್ ಅಧಿಕಾರಿಗಳು ಗಡಿ ನಿಯಂತ್ರಣ ರೇಖೆಯ ಬಳಿ ದಾಳಿ ನಡೆಸಿದರು. ಇದರಿಂದ ಕನಿಷ್ಠ 55 ಪಾಕಿಸ್ತಾನಿ ಸೈನಿಕರನ್ನು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.