Friday, 13th December 2024

ಲಸಿಕೆ ತೆಗೆದುಕೊಂಡಿದ್ದ ಪಾಕಿಸ್ತಾನ ಪ್ರಧಾನಿಗೆ ಕೊರೋನಾ ಪಾಸಿಟಿವ್

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೋವಿಡ್ 19 ಲಸಿಕೆ ತೆಗೆದುಕೊಂಡ ಎರಡು ದಿನದ ನಂತರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿರುವುದಾಗಿ ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ನಿವಾಸದಲ್ಲಿ ಸ್ವಯಂ ಐಸೊಲೇಷನ್ ಗೆ ಒಳಗಾಗಿರುವುದಾಗಿ ಸಚಿವ ಫೈಸಲ್ ಸುಲ್ತಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಶುಕ್ರವಾರ ಇಮ್ರಾನ್ ಖಾನ್ ಮೊದಲ ಲಸಿಕೆ ಪಡೆದಿದ್ದು, ಜನರು ಪೂರ್ಣಪ್ರಮಾಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸು ವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಪಾಕಿಸ್ತಾನದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭಗೊಂಡಿದ್ದು, ಇಮ್ರಾನ್ ಖಾನ್ (67) ಕೂಡ ರೋಗ ಪ್ರತಿನಿರೋಧಕ ಹೆಚ್ಚಿಸಿಕೊಳ್ಳಲು ಲಸಿಕೆ ಪಡೆದಿರುವುದಾಗಿ ವರದಿ ತಿಳಿಸಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily