Thursday, 12th December 2024

ಹೆಲಿಕಾಪ್ಟರ್ ಪತನ: ಐದು ಮಂದಿ ಪೆರು ಸೈನಿಕರ ಸಾವು

ಲಿಮಾ: ಕುಸ್ಕೊ ಪ್ರಾಂತ್ಯದಲ್ಲಿ ಸೇನೆಯ ಹೆಲಿಕಾಪ್ಟರ್ ಪತನಗೊಂಡು ಐದು ಮಂದಿ ಪೆರು ಸೇನೆಯ ಸೈನಿಕರು ಮೃತಪಟ್ಟಿದ್ದಾರೆ.

ಶನಿವಾರ ದುರಂತ ಸಂಭವಿಸಿದ್ದು, ಒಟ್ಟು 12 ಸೈನಿಕರನ್ನು ಹೊತ್ತ ಹೆಲಿ ಕಾಪ್ಟರ್ ಅಕ್ರಮ ಮಾದಕವಸ್ತು ಕಳ್ಳಸಾಗಣೆ ವಿರುದ್ಧ ಜಾಗೃತ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

‘ಸಶಸ್ತ್ರ ಪಡೆಗಳ ಸಿಬ್ಬಂದಿ ಸಾವಿಗೆ ವಿಷಾಧ ವ್ಯಕ್ತಪಡಿಸಿದ ಸೇನೆ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವುದಾಗಿ ಪ್ರಕಟಣೆ ಯಲ್ಲಿ ತಿಳಿಸಿದೆ.