ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Modi-Putin: ತೈಲ ಒಪ್ಪಂದದ ಮಾತುಕತೆ; ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್‌

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಚೀನಾದ ಟಿಯಾಂಜಿನ್‌ನಲ್ಲಿ ನಡೆದ ದ್ವಿಪಕ್ಷೀಯ ಸಭೆಯ ಸ್ಥಳಕ್ಕೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ನಂತರ ಇದು ಬಂದಿದೆ.

ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್‌

-

Vishakha Bhat Vishakha Bhat Sep 1, 2025 12:17 PM

ಬೀಜಿಂಗ್‌: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಚೀನಾದ ಟಿಯಾಂಜಿನ್‌ನಲ್ಲಿ ನಡೆದ ದ್ವಿಪಕ್ಷೀಯ ಸಭೆಯ ಸ್ಥಳಕ್ಕೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ನಂತರ ಇದು ಬಂದಿದೆ. ಪುಟಿನ್ ಅವರೊಂದಿಗಿನ ತಮ್ಮ ಪ್ರಯಾಣದ ಚಿತ್ರವನ್ನು ಹಂಚಿಕೊಂಡ ಪ್ರಧಾನಿ ಮೋದಿ, SCO ಶೃಂಗಸಭೆಯ ಸ್ಥಳದಲ್ಲಿ ನಡೆದ ಕಾರ್ಯಕಲಾಪಗಳ ನಂತರ, ಅಧ್ಯಕ್ಷ ಪುಟಿನ್ ಮತ್ತು ನಾನು ನಮ್ಮ ದ್ವಿಪಕ್ಷೀಯ ಸಭೆಯ ಸ್ಥಳಕ್ಕೆ ಒಟ್ಟಿಗೆ ಪ್ರಯಾಣಿಸಿದೆವು ಎಂದು ಬರೆದುಕೊಂಡಿದ್ದರು.

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಪರಸ್ಪರ ಕೈಕುಲುಕಿ ಅಪ್ಪಿಕೊಂಡರು. ಭೇಟಿಯ ನಂತರ, ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ X (ಹಿಂದೆ ಟ್ವಿಟರ್) ನಲ್ಲಿ ಆತ್ಮೀಯ ವಿನಿಮಯದ ಛಾಯಾಚಿತ್ರವನ್ನು ಹಂಚಿಕೊಂಡರು, "ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾಗಲು ಯಾವಾಗಲೂ ಸಂತೋಷ ಎಂದು ಹೇಳಿದ್ದಾರೆ. ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು.



ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಕಳೆದ ಕೆಲ ತಿಂಗಳಿನಿಂದ ಭಾರತ, ಚೀನಾ, ರಷ್ಯಾ ಸೇರಿ ವಿಶ್ವದ ಹಲವು ಅಭಿವೃದ್ಧಿ ಹೊಂದಿದ, ಅಭಿವೃದ್ಧಿ ಹೊಂದುತ್ತಿರುವ ದೇಶಗಳ ವಿರುದ್ಧ ತೆರಿಗೆ ಯುದ್ಧ ಆರಂಭಿಸಿದ್ದಾರೆ. ಅದರ ಬೆನ್ನಲ್ಲೇ ನಡೆಯುತ್ತಿರುವ ಶಾಂಘೈ ಶೃಂಗಸಭೆಯನ್ನು ಗ್ಲೋಬಲ್‌ ಸೌತ್‌ ದೇಶಗಳು ತಮ್ಮ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಬಳಸಿಕೊಂಡಿವೆ. ಅದರ ನಡುವೆಯೇ ತೆರಿಗೆ ದಾಳಿಗೆ ಒಳಗಾದ ಎರಡು ದೇಶಗಳ ನಾಯಕರಾದ ಮೋದಿ ಮತ್ತು ಕ್ಸಿ ಭಾನುವಾರ ಜಾಗತಿಕ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಆಮದುಗಳ ಮೇಲೆ 50% ಸುಂಕವನ್ನು ವಿಧಿಸುವುದಾಗಿ ಘೋಷಿಸಿದ ನಂತರ, ಈ ಸಭೆಯ ಸಮಯವು ಮಹತ್ವದ್ದಾಗಿದೆ.

ಈ ಸುದ್ದಿಯನ್ನೂ ಓದಿNarendra Modi: ಒಂದೇ ವೇದಿಕೆಯಲ್ಲಿ ಮೋದಿ-ಪುಟಿನ್-ಜಿನ್ ಪಿಂಗ್‌; ಮಹತ್ವದ ಚರ್ಚೆ ಸಾಧ್ಯತೆ

ಪಾಕಿಸ್ತಾನಕ್ಕೆ ಟಾಂಗ್‌

ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾಗವಹಿಸಿದ್ದ ಚೀನಾದ ಟಿಯಾಂಜಿನ್‌ನಲ್ಲಿ ನಡೆದ 25 ನೇ ಎಸ್‌ಸಿಒ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆ ಯಾವುದೇ ಒಂದು ದೇಶದ ಭದ್ರತೆಗೆ ಮಾತ್ರವಲ್ಲ, ಇಡೀ ಮಾನವೀಯತೆಗೆ ಬೆದರಿಕೆಯಾಗಿದೆ" ಎಂದು ಒತ್ತಿ ಹೇಳಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಭಾರತ ಭಯೋತ್ಪಾದನೆಯ ಭಾರವನ್ನು ಎದುರಿಸುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ನಲ್ಲಿ ಭಯೋತ್ಪಾದನೆಯ ಕೆಟ್ಟ ಮುಖವನ್ನು ನಾವು ನೋಡಿದ್ದೇವೆ. ಈ ದುಃಖದ ಸಮಯದಲ್ಲಿ ನಮ್ಮೊಂದಿಗೆ ನಿಂತ ಸ್ನೇಹಪರ ದೇಶಕ್ಕೆ ನಾನು ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ ಎಂದಯ ಹೇಳಿದ್ದಾರೆ.