Friday, 22nd November 2024

ಇಸ್ರೇಲ್ ನೂತನ ಪ್ರಧಾನಿ ನಫ್ತಾಲಿ ಬೆನ್ನೆಟ್ಟ್ಗೆ ಪ್ರಧಾನಿ ಮೋದಿ ಶುಭ ಹಾರೈಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು  ಇಸ್ರೇಲ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ನಫ್ತಾಲಿ ಬೆನ್ನೆಟ್ಟ್ ಅವರಿಗೆ ಶುಭ ಹಾರೈಕೆ ಮಾಡಿದ್ದಾರೆ.

ಭಾರತ ಮತ್ತು ಇಸ್ರೇಲ್ ಉಭಯ ದೇಶಗಳ ನಡುವಿನ ಸಂಬಂಧವನ್ನು ಗಾಢವಾಗಿಸಲು ನೂತನ ಪ್ರಧಾನಿ ನಫ್ತಾಲಿ ಬೆನ್ನೆಟ್ಟ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಮುಂದಿನ ವರ್ಷ ರಾಜತಾಂತ್ರಿಕ ಸಂಬಂಧಗಳ ಉನ್ನತೀಕರಣದ 30 ವರ್ಷ ಗಳನ್ನು ನಾವು ಆಚರಿಸುತ್ತಿದ್ದಂತೆ, ನಿಮ್ಮನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ನೆತನ್ಯಾಹು ನಾಯಕತ್ವ ಮತ್ತು ಭಾರತ-ಇಸ್ರೇಲ್ ಕಾರ್ಯತಂತ್ರದ ಸಹಭಾಗಿತ್ವಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಇಸ್ರೇಲ್ ರಾಜ್ಯದ ಪ್ರಧಾನ ಮಂತ್ರಿಯಾಗಿ ನಿಮ್ಮ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದೀರಿ. ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ನಿಮ್ಮ ನಾಯಕತ್ವ ಮತ್ತು ವೈಯಕ್ತಿಕ ಗಮನಕ್ಕಾಗಿ ನನ್ನ ಆಳವಾದ ಕೃತಜ್ಞತೆಯನ್ನು ತಿಳಿಸುತ್ತೇನೆ ಎಂದಿದ್ದಾರೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೇತನ್ಯಾಹು ಅವರನ್ನು ಭಾನುವಾರ ಪದಚ್ಯುತಗೊಳಿಸಲಾಗಿದ್ದು, ನಫ್ತಾಲಿ ಬೆನೆಟ್‌ ಅವರು ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ನೇತನ್ಯಾಹು ಬೆಂಬಲಿಗರ ಗದ್ದಲದ ನಡುವಯೇ, ಅವರ ಪದಚ್ಯುತಿಗೆ 120 ಸದಸ್ಯ ಬಲದ ಇಸ್ರೇಲ್‌ ಸಂಸತ್‌ ಅನುಮೋದನೆ ನೀಡಿತು. ಇದರೊಂದಿಗೆ ಕಳೆದ 12 ವರ್ಷಗಳಿಂದಲೂ ಪ್ರಧಾನಿಯಾಗಿದ್ದ ನೇತನ್ಯಾಹು ಅವರ ಅಧಿಕಾರ ಕೊನೆಗೊಂಡಂತಾಗಿದೆ.