ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Modi Meets Yunus: ಬಿಮ್‌ಸ್ಟೆಕ್ ಶೃಂಗಸಭೆ: ಪ್ರಧಾನಿ ಮೋದಿ- ಮುಹಮ್ಮದ್ ಯೂನಸ್ ದ್ವಿಪಕ್ಷೀಯ ಮಾತುಕತೆ

PM Modi Meets Yunus:ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಆರನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರನ್ನು ಭೇಟಿಯಾಗಿದ್ದಾರೆ. ಉಭಯ ನಾಯಕರು ಕೆಲ ಹೊತ್ತು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ.

ಪ್ರಧಾನಿ ಮೋದಿ- ಯೂನಸ್ ಮಹತ್ವದ ಮಾತುಕತೆ

Profile Rakshita Karkera Apr 4, 2025 1:53 PM

ಬ್ಯಾಂಕಾಕ್‌: ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಆರನೇ ಬಿಮ್‌ಸ್ಟೆಕ್ ಶೃಂಗಸಭೆ(PM Modi Meets Yunus)ಯಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ ಮುಹಮ್ಮದ್ ಯೂನಸ್(Muhammad Yunus) ಅವರನ್ನು ಭೇಟಿಯಾಗಿದ್ದಾರೆ. ಉಭಯ ನಾಯಕರು ಕೆಲ ಹೊತ್ತು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಭೆಯನ್ನು ನಡೆಸಲು ಬಾಂಗ್ಲಾದೇಶ ವಿನಂತಿಸಿದ ನಂತರ ಪ್ರಧಾನಿ ಮೋದಿ ಮತ್ತು ಯೂನಸ್‌ ಮಾತುಕತೆ ನಡೆಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದ ಪ್ರಕರಣಗಳು ಮತ್ತು ಶೇಖ್ ಹಸೀನಾ ಅವರಿಗೆ ಆಶ್ರಯ ನೀಡುವ ಭಾರತದ ನಿರ್ಧಾರದ ಕುರಿತಾದ ಭಿನ್ನಾಭಿಪ್ರಾಯಗಳಿಂದಾಗಿ ಎರಡೂ ರಾಷ್ಟ್ರಗಳು ಸಂಬಂಧ ಹಲಸಿತ್ತು. ಇದೀಗ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸುಧಾರಿಸುವ ಪ್ರಯತ್ನಕ್ಕೆ ಯೂನಸ್‌ ಮುಂದಾಗಿದ್ದಾರೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಶೇಖ್ ಹಸೀನಾ ಸರ್ಕಾರವನ್ನು ಪದಚ್ಯುತಗೊಳಿಸಿ ಬಳಿಕ ನೊಬೆಲ್ ಪ್ರಶಸ್ತಿ ವಿಜೇತ ಯೂನಸ್ ಬಾಂಗ್ಲಾದೇಶದ ಅಧಿಕಾರ ವಹಿಸಿಕೊಂಡ ನಂತರ ಇಬ್ಬರು ನಾಯಕರ ನಡುವಿನ ಮೊದಲ ಸಭೆ ಇದಾಗಿದೆ. ಚೀನಾದ ಜೊತೆ ಬಾಂಗ್ಲಾದೇಶದ ನಿಕಟತೆ ಹೆಚ್ಚುತ್ತಿರುವ ಮಧ್ಯೆ ಈ ಸಭೆ ಮಹತ್ವದ್ದಾಗಿದ್ದು, ಈ ಬೆಳವಣಿಗೆಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಮೋದಿ ಮತ್ತು ಯೂನಸ್‌ ದ್ವಿಪಕ್ಷೀಯ ಸಭೆ ವಿಡಿಯೊ ಇಲ್ಲಿದೆ



ಈ ಸುದ್ದಿಯನ್ನೂ ಓದಿ: Sheikh Hasina: ಬಾಂಗ್ಲಾದೇಶ ಹತ್ಯಾಕಾಂಡದ ಹಿಂದಿರುವ ಮಾಸ್ಟರ್‌ಮೈಂಡ್‌ ಮೊಹಮ್ಮದ್‌ ಯೂನಸ್‌?

ಭಾರತದ ಈಶಾನ್ಯ ರಾಜ್ಯಗಳ ಕುರಿತು ಯೂನಸ್ ಅವರ ಇತ್ತೀಚಿನ ಹೇಳಿಕೆಗಳು ಎರಡೂ ದೇಶಗಳ ನಡುವೆ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದ್ದವು. ಇದಾದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರಿಗೆ ಪತ್ರ ಬರೆಯುವ ಮೂಲಕ ಶುಭ ಕೋರಿದ್ದರು. ತಮ್ಮ ಪತ್ರದಲ್ಲಿ, ಪ್ರಧಾನಿ ಮೋದಿ ಅವರು 1971 ರ ವಿಮೋಚನಾ ಯುದ್ಧದ ಐತಿಹಾಸಿಕ ಮಹತ್ವವನ್ನು ಒತ್ತಿಹೇಳಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಬಲವಾದ ಮತ್ತು ಶಾಶ್ವತ ಸಂಬಂಧಗಳ ಕುರಿತು ಉಲ್ಲೇಖಿಸಿದ್ದಾರೆ. ಇದಲ್ಲದೆ, ಬಾಂಗ್ಲಾದೇಶದೊಂದಿಗಿನ ಸಂಬಂಧಗಳನ್ನು ಬಲಪಡಿಸಲು ಭಾರತ 'ಬದ್ಧವಾಗಿದೆ' ಎಂದು ಪ್ರಧಾನಿ ಯೂನಸ್ ಅವರಿಗೆ ತಿಳಿಸಿದ್ದರು.

ಪತ್ರದಲ್ಲಿ ಭಾರತ ಹಾಗೂ ಬಾಂಗ್ಲಾದೇಶದ ಸಂಬಂಧದ ಬಗ್ಗೆ ಉಲ್ಲೇಖಿಸಿರುವ ಮೋದಿ, ಬಾಂಗ್ಲಾದೇಶದೊಂದಿಗಿನ ಸಂಬಂಧಗಳನ್ನು ಬಲಪಡಿಸಲು ಭಾರತ 'ಬದ್ಧವಾಗಿದೆ' ಆದರೆ ಪರಸ್ಪರ ನಂಬಿಕೆ ವಿಶ್ವಾಸ ಅಗತ್ಯ ಎಂದು ಹೇಳಿದ್ದಾರೆ.ಬಾಂಗ್ಲಾದೇಶದ ರಾಷ್ಟ್ರೀಯ ದಿನದಂದು ನಿಮಗೆ ಮತ್ತು ಬಾಂಗ್ಲಾದೇಶದ ಜನರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ದಿನವು ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯ ಅಡಿಪಾಯವನ್ನು ಹಾಕಿದ ನಮ್ಮ ಹಂಚಿಕೆಯ ಇತಿಹಾಸ ಮತ್ತು ತ್ಯಾಗಗಳಿಗೆ ಸಾಕ್ಷಿಯಾಗಿದೆ. ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಪರಸ್ಪರ ಸಂವೇದನೆಯನ್ನು ಆಧರಿಸಿ ಈ ಪಾಲುದಾರಿಕೆಯನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ" ಎಂದು ಅವರು ಹೇಳಿದ್ದರು.