ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Modi: ಆಪರೇಷನ್ ಸಿಂದೂರ್ ನೃತ್ಯದೊಂದಿಗೆ ಪ್ರಧಾನಿ ಮೋದಿಗೆ ಗ್ರ್ಯಾಂಡ್‌ ವೆಲ್‌ಕಮ್‌

ನಾಲ್ಕು ದಿನಗಳ ಬ್ರೆಜಿಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬ್ರೆಜಿಲ್‌ನ ರಿಯೊ ಡಿ ಜನೈರೊದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಂದರ್ಭದಲ್ಲಿ ಭಾರತೀಯ ವಲಸಿಗರು ಆತ್ಮೀಯ ಸ್ವಾಗತ ನೀಡಿದರು. ಈ ಸಂದರ್ಭದಲ್ಲಿ ಅವರು ವರ್ಣಚಿತ್ರಗಳನ್ನು ಮತ್ತು ಭಯೋತ್ಪಾದಕರ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ನೃತ್ಯದ ಮೂಲಕ ಪ್ರದರ್ಶನ ನೀಡಿದರು. ಪ್ರಧಾನಿ ಮೋದಿ ಅವರು ಬ್ರೆಜಿಲ್ ನಲ್ಲಿ ನಡೆಯಲಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿಗೆ ಗ್ರ್ಯಾಂಡ್‌ ವೆಲ್‌ಕಮ್‌

ಬ್ರೆಜಿಲ್: ನಾಲ್ಕು ದಿನಗಳ ಬ್ರೆಜಿಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi ) ಅವರು ಶನಿವಾರ ಬ್ರೆಜಿಲ್‌ನ (Brazil) ರಿಯೊ ಡಿ ಜನೈರೊದ (rio de janeiro) ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಂದರ್ಭದಲ್ಲಿ ಭಾರತೀಯ ವಲಸಿಗರು ಆತ್ಮೀಯ ಸ್ವಾಗತ ನೀಡಿದರು. ಈ ಸಂದರ್ಭದಲ್ಲಿ ಅವರು ವರ್ಣಚಿತ್ರಗಳನ್ನು ಮತ್ತು ಭಯೋತ್ಪಾದಕರ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ (Operation Sindoor) ಕಾರ್ಯಾಚರಣೆಯನ್ನು ನೃತ್ಯದ ಮೂಲಕ ಪ್ರದರ್ಶನ ನೀಡಿದರು. ಪ್ರಧಾನಿ ಮೋದಿ ಅವರು ಬ್ರೆಜಿಲ್ ನಲ್ಲಿ ನಡೆಯಲಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬ್ರೆಜಿಲ್‌ನ ರಿಯೊ ಡಿ ಜನೈರೊದ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದಾಗ ಭಾರತೀಯ ವಲಸಿಗರು ಅವರನ್ನು ಸ್ವಾಗತಿಸಿದರು. ವರ್ಣಚಿತ್ರಗಳನ್ನು ಪ್ರದರ್ಶಸಿ ಪಾಕಿಸ್ತಾನ ಪೋಷಿಸುತ್ತಿರುವ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಭಯೋತ್ಪಾದನಾ ವಿರೋಧಿ ಅಭಿಯಾನವಾದ ಆಪರೇಷನ್ ಸಿಂಧೂರ್‌ನ ನೃತ್ಯ ಪ್ರದರ್ಶನವನ್ನು ಈ ಸಂದರ್ಭದಲ್ಲಿ ನೀಡಿದರು.



ಅನೇಕ ಭಾರತೀಯ ವಲಸಿಗರು ಈ ಸಂದರ್ಭದಲ್ಲಿ ಪ್ರಧಾನಿ ಅವರನ್ನು ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದರು. ಅನೇಕರು ಇದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿ (ಐಸಿಸಿಆರ್) ನಿರ್ದೇಶಕಿ ಜ್ಯೋತಿ ಕಿರಣ್, ಪ್ರಧಾನಿ ಮೋದಿಯವರ ಭೇಟಿಗಾಗಿ ಭಾರತೀಯ ಸಮುದಾಯದ ಜನರು ಉತ್ಸುಕರಾಗಿದ್ದಾರೆ ಎಂದು ಹೇಳಿದರು.



ಐಸಿಸಿಆರ್‌ನ ಈ ಕೇಂದ್ರವು ಭಾರತ ಮತ್ತು ಬ್ರೆಜಿಲ್ ನಡುವಿನ ಸಂಪರ್ಕವನ್ನು ಬಲಪಡಿಸಲು ಶ್ರಮಿಸುತ್ತದೆ. ಯೋಗ ಮತ್ತು ಒಡಿಸ್ಸಿ ನೃತ್ಯ ತರಗತಿಗಳ ಜೊತೆಗೆ ಅಡುಗೆ ತರಗತಿಗಳು ಮತ್ತು ಇತರ ಉಪ-ಸಾಂಸ್ಕೃತಿಕ ಚಟುವಟಿಕೆಗಳನ್ನು ಸಹ ನಡೆಸುತ್ತಿದೆ ಎಂದು ತಿಳಿಸಿದರು.

ಇದನ್ನೂಓದಿ: Elon Musk: ಅಮೆರಿಕದ ರಾಜಕೀಯದಲ್ಲಿ ಭಾರೀ ಬದಲಾವಣೆ; ಹೊಸ ಪಕ್ಷ ಘೋಷಿಸಿದ ಎಲಾನ್‌ ಮಸ್ಕ್‌!

ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿ

ಬ್ರೆಜಿಲ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಶಾಂತಿ ಮತ್ತು ಭದ್ರತೆಯನ್ನು ಬಲಪಡಿಸುವುದು, ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಬಳಕೆ, ಹವಾಮಾನ, ಜಾಗತಿಕ ಆರೋಗ್ಯ ಮತ್ತು ಆರ್ಥಿಕ ವಿಷಯಗಳು ಸೇರಿದಂತೆ ಹಲವು ಪ್ರಮುಖ ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಅವರು ಶೃಂಗಸಭೆಯ ಹೊರತಾಗಿ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.