ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Donald Trump: "ಇದು ಮೋದಿ ಯುದ್ಧ"; ಟ್ರಂಪ್‌ ಆಪ್ತ ಹೀಗೆ ಹೇಳಿದ್ದೇಕೆ?

ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ಸುಂಕ ವಿಧಿಸಿದ ಕೆಲವೇ ಗಂಟೆಗಳಲ್ಲಿ, ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ ರಷ್ಯಾ-ಉಕ್ರೇನ್ ಸಂಘರ್ಷವನ್ನು ಮೋದಿಯ ಯುದ್ಧ ಎಂದು ಕರೆದಿದ್ದಾರೆ.

ವಾಷಿಂಗ್ಟನ್‌: ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ಸುಂಕ ವಿಧಿಸಿದ ಕೆಲವೇ ಗಂಟೆಗಳಲ್ಲಿ, ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ ರಷ್ಯಾ-ಉಕ್ರೇನ್ ಸಂಘರ್ಷವನ್ನು ಮೋದಿಯ ಯುದ್ಧ ಎಂದು ಕರೆದಿದ್ದಾರೆ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವುದರಿಂದ ಅವರಿಗೆ ಪರೋಕ್ಷವಾಗಿ ಮಿಲಿಟರಿ ಸಹಾಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಮಾಸ್ಕೋದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸಿದರೆ ಭಾರತವು ಅಮೆರಿಕದ ಸುಂಕದಲ್ಲಿ ಶೇ.25 ರಷ್ಟು ಕಡಿತವನ್ನು ಕಾಣಬಹುದು ಎಂದು ಹೇಳಿದರು.

ಪಾಶ್ಚಿಮಾತ್ಯ ಒತ್ತಡದ ಹೊರತಾಗಿಯೂ ಭಾರತವು ರಷ್ಯಾದ ಕಚ್ಚಾ ತೈಲವನ್ನು ನಿರಂತರವಾಗಿ ಖರೀದಿಸುತ್ತಿರುವುದಕ್ಕೆ ಶಿಕ್ಷೆ ವಿಧಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸರಕುಗಳ ಮೇಲೆ ಶೇ. 50 ರಷ್ಟು ಸುಂಕವನ್ನು ಬುಧವಾರ ಜಾರಿಗೆ ತಂದ ಹಿನ್ನೆಲೆಯಲ್ಲಿ ಪೀಟರ್‌ ಅವರಿಂದ ಈ ಹೇಳಿಕೆ ಬಂದಿದೆ. ಅಮೆರಿಕ ಭಾರತದೊಂದಿಗೆ ಮಾತುಕತೆ ನಡೆಸುತ್ತಿದೆಯೇ ಮತ್ತು ಸುಂಕಗಳನ್ನು ಸರಿಹೊಂದಿಸುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ , ಶ್ವೇತಭವನದ ಸಲಹೆಗಾರ ಪೀಟರ್ ನವರೊ, "ಇದು ನಿಜವಾಗಿಯೂ ಸುಲಭ. ಭಾರತವು ರಷ್ಯಾದ ತೈಲವನ್ನು ಖರೀದಿಸುವುದನ್ನು ನಿಲ್ಲಿಸಿದರೆ, ನಾಳೆ ಶೇ. 25 ರಷ್ಟು ರಿಯಾಯಿತಿ ಪಡೆಯಬಹುದು ಎಂದು ಅವರು ಹೇಳಿದರು.

ಮಾಸ್ಕೋದ ಯುದ್ಧ ಪ್ರಯತ್ನಕ್ಕೆ ಭಾರತ ಹಣಕಾಸು ನೆರವು ನೀಡುತ್ತಿದೆ ಎಂದು ನವರೊ ಆರೋಪಿಸಿದ್ದಾರೆ. ರಿಯಾಯಿತಿಯಲ್ಲಿ ರಷ್ಯಾದ ತೈಲವನ್ನು ಖರೀದಿಸುವ ಮೂಲಕ, ರಷ್ಯಾ ತನ್ನ ಯುದ್ಧ ಯಂತ್ರಕ್ಕೆ ಹಣಕಾಸು ಒದಗಿಸಲು ಪಡೆಯುವ ಹಣವನ್ನು ಹೆಚ್ಚು ಉಕ್ರೇನಿಯನ್ನರನ್ನು ಕೊಲ್ಲಲು ಬಳಸುತ್ತದೆ ಎಂದು ಅವರು ಆರೋಪಿಸಿದ್ದಾರೆ. ಅಮೆರಿಕಕ್ಕೆ ಆಮದಾಗುವ ಭಾರತದ ಸರಕುಗಳ ಮೇಲೆ ವಿಧಿಸಿರುವ ಶೇ.50 ಸುಂಕವು ಆಗಸ್ಟ್‌ 27ರಿಂದ ಜಾರಿಯಾಗಿದೆ.

ಈ ಸುದ್ದಿಯನ್ನೂ ಓದಿ: Narendra Modi: ಒಂದೇ ವೇದಿಕೆಯಲ್ಲಿ ಮೋದಿ-ಪುಟಿನ್-ಜಿನ್ ಪಿಂಗ್‌; ಮಹತ್ವದ ಚರ್ಚೆ ಸಾಧ್ಯತೆ

ರಷ್ಯಾದ ತೈಲ ಖರೀದಿ ಮೂಲಕ ಭಾರತ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಫಂಡಿಂಗ್‌ ಮಾಡುತ್ತಿದೆ ಅನ್ನೋದು ಟ್ರಂಪ್‌ ನಂಬಿಕೆಯಾಗಿದೆ. ಹೀಗಾಗಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವಂತೆ ಹಲವು ಬಾರಿ ಟ್ರಂಪ್‌ ಹೇಳಿದರು. ಅಲ್ಲದೇ ಅಮೆರಿಕದ ರಾಜತಾಂತ್ರಿಕರೂ ಭಾರತಕ್ಕೆ ತೈಲ ಖರೀದಿ ನಿಲ್ಲಿಸುವಂತೆ ಎಚ್ಚರಿಸಿದರು. ಆದರೆ ರಷ್ಯಾದ ಸ್ನೇಹ ಬಿಟ್ಟುಕೊಡದ ಭಾರತ, ತೈಲ ಖರೀದಿಯನ್ನ ಮುಂದುವರಿಸಿದೆ. ಹೀಗಾಗಿ ಆಗಸ್ಟ್‌ 27ರಿಂದ ಜಾರಿಗೆ ಬರುವಂತೆ ಹೆಚ್ಚುವರಿ ಶೇ. 25 ರಷ್ಟು ಸುಂಕ ವಿಧಿಸಿದ್ದಾರೆ.