ನವದೆಹಲಿ, ಮಾ.28: ಫೆಬ್ರವರಿ 28ಕ್ಕೆ ಆರಂಭವಾದ ಇರಾನ್ ಯುದ್ಧ (Iran War) ಮುಂದುವರಿಯುತ್ತಲೇ ಇದೆ. ಈ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ದೂರವಾಣಿ ಮುಖಾಂತರ ಮಾತನಾಡಿದ್ದರು. ಈ ಕರೆಯಲ್ಲಿ ಎಲಾನ್ ಮಸ್ಕ್ (Elon Musk) ಕೂಡ ಭಾಗಿಯಾಗಿದ್ದರು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಫೆಬ್ರವರಿ 28 ರಂದು ಇಸ್ರೇಲ್ ಮತ್ತು ಇರಾನ್ ಮೇಲೆ ಅಮೆರಿಕದ ಮಿಲಿಟರಿ ದಾಳಿ ಪ್ರಾರಂಭವಾದ ನಂತರ ಉಭಯ ನಾಯಕರ ನಡುವಿನ ಮೊದಲ ಸಂವಾದ ಇದಾಗಿದ್ದು, ಇರಾನ್ ಜೊತೆಗಿನ ಯುದ್ಧದ ಬಗ್ಗೆ ಚರ್ಚಿಸಲು ಟ್ರಂಪ್ ಮಂಗಳವಾರ (ಮಾ.24) ಪ್ರಧಾನಿ ಮೋದಿಗೆ ಕರೆ ಮಾಡಿದ್ದರು.
ಈ ವೇಳೆ ಬಿಲಿಯನೇರ್ ಎಲಾನ್ ಮಸ್ಕ್ ಕೂಡ ಅಮೆರಿಕದ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಭಾಗವಹಿಸಿದ್ದರು. ಯುದ್ಧಕಾಲದ ಬಿಕ್ಕಟ್ಟಿನ ಸಂದರ್ಭದಲ್ಲಿ ಎರಡು ರಾಷ್ಟ್ರಗಳ ಮುಖ್ಯಸ್ಥರ ನಡುವಿನ ಕರೆಯಲ್ಲಿ ಖಾಸಗಿ ನಾಗರಿಕರೊಬ್ಬರು ಕಾಣಿಸಿಕೊಂಡಿದ್ದು ಅಸಾಮಾನ್ಯವಾಗಿತ್ತು ಎಂದು ಹೆಸರು ಬಹಿರಂಗಪಡಿಸದ ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
"ಥ್ಯಾಂಕ್ ಯೂ ಇಂಡಿಯಾ"; ಕ್ಷಿಪಣಿ ಮೇಲೆ ಭಾರತದ ಹೆಸರು ಹಾಕಿ ಇಸ್ರೇಲ್ ಮೇಲೆ ದಾಳಿ ಮಾಡಿದ ಇರಾನ್!
ಅಮೆರಿಕದ ಇಬ್ಬರು ಅಧಿಕಾರಿಗಳು ದೃಢಪಡಿಸಿದಂತೆ, ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಅಧ್ಯಕ್ಷರೊಂದಿಗೆ ಉತ್ತಮ ಸಂಬಂಧಕ್ಕೆ ಮರಳಿದ್ದಾರೆ ಎಂದು ಮಸ್ಕ್ ಅವರ ಸೇರ್ಪಡೆ ಸೂಚಿಸುತ್ತದೆ ಎಂದು ವರದಿ ಹೇಳಿದೆ.
ಪ್ರಧಾನಿ ಮೋದಿ ಅವರೊಂದಿಗೆ ಟ್ರಂಪ್ ಫಲಪ್ರದ ಸಂಭಾಷಣೆ ನಡೆಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ನಡುವೆ ಉತ್ತಮ ಸಂಬಂಧವಿದೆ. ಇದು ಫಲಪ್ರದ ಸಂಭಾಷಣೆಯಾಗಿತ್ತು ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಟ್ರಂಪ್ ಮತ್ತು ಮಸ್ಕ್ ಸರ್ಕಾರದಿಂದ ಹೊರಬಂದ ನಂತರ ಅವರ ನಡುವೆ ಭಿನ್ನಾಭಿಪ್ರಾಯ ಮೂಡಿತು. ಎರಡು ದೇಶಗಳ ನಡುವಿನ ನಾಯಕರ ಮಾತುಕತೆ ವೇಳೆ ಮಸ್ಕ್ ಕೂಡ ಏಕೆ ಭಾಗಿಯಾಗಿದ್ದರು, ಅವರು ಮಾತನಾಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ವರದಿ ಹೇಳಿದೆ.
ಫೆಬ್ರವರಿ 28 ರಂದು ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭವಾದ ನಂತರ ಟ್ರಂಪ್ ಮತ್ತು ಪ್ರಧಾನಿ ಮೋದಿ ನಡುವಿನ ಮೊದಲ ಸಂಭಾಷಣೆ ಇದಾಗಿದೆ. ಸಂಭಾಷಣೆಯ ಸಮಯದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊರ್ಮುಜ್ ಜಲಸಂಧಿಯು ಮುಕ್ತ, ಸುರಕ್ಷಿತ ಮತ್ತು ಪ್ರವೇಶಿಸಬಹುದಾದಂತಿರುವುದನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. ಇದು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಆರ್ಥಿಕ ಯೋಗಕ್ಷೇಮಕ್ಕೆ ಅತ್ಯಗತ್ಯ ಎಂದು ಹೇಳಿದರು.
ಹೊರ್ಮುಜ್ ಬಿಕ್ಕಟ್ಟು: ತೈಲದಿಂದ ದಿನಕ್ಕೆ ಇರಾನ್ ಗಳಿಸುತ್ತಿರುವ ಆದಾಯ ಎಷ್ಟು ಗೊತ್ತೇ?
ಮೋದಿಯನ್ನು ಪ್ರೀತಿಸುತ್ತೇನೆ, ಶೀಘ್ರದಲ್ಲೇ ಭಾರತಕ್ಕೆ ಬರುತ್ತೇನೆ ಎಂದಿದ್ದ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರೀತಿಸುತ್ತಾರೆ. ಶೀಘ್ರದಲ್ಲೇ ಅವರು ಭಾರತಕ್ಕೆ ಭೇಟಿ ನೀಡುವ ಯೋಜನೆ ಮಾಡುತ್ತಿದ್ದಾರೆ ಎಂದು ಟ್ರಂಪ್ ಅವರ ಆಪ್ತ, ಅಮೆರಿಕದ ಬಲಪಂಥೀಯ ಕಾರ್ಯಕರ್ತೆ ಲಾರಾ ಲೂಮರ್ ಇತ್ತೀಚೆಗೆ ಹೇಳಿದ್ದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಮೊದಲ ಅವಧಿಯಲ್ಲಿ 2020ರ ಫೆಬ್ರವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದು, ಅಹಮದಾಬಾದ್‌ನಲ್ಲಿ ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಗ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ದೆಹಲಿ ಮತ್ತು ಆಗ್ರಾಕ್ಕೂ ಅವರು ಈ ಸಂದರ್ಭದಲ್ಲಿ ಭೇಟಿ ನೀಡಿದ್ದರು.