#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Modi in Paris: ಮರ್ಸೆಲ್ಲೆ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ; ವೀರ್‌ ಸಾವರ್ಕರ್‌ಗೆ ಸ್ಮರಣೆ

ನರೇಂದ್ರ ಮೋದಿ(Narendra Modi) ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್(Emmanuel Macron) ಅವರೊಂದಿಗೆ ಮರ್ಸೆಲ್ಲೆಗೆ ಆಗಮಿಸಿ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟ ಉಭಯ ನಾಯಕರು ಮಹಾಯುದ್ಧಗಳಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಿದ್ದಾರೆ.

ಪ್ಯಾರಿಸ್‌ನಲ್ಲಿ ವೀರ್‌ ಸಾವರ್ಕರ್‌ ಸ್ಮರಿಸಿದ ಪ್ರಧಾನಿ ಮೋದಿ

ಮರ್ಸೆಲ್ಲೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಸ್ವಾಗತ

Profile Rakshita Karkera Feb 12, 2025 10:14 AM

ಪ್ಯಾರಿಸ್‌: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ಯಾರಿಸ್‌ನಲ್ಲಿ ನಡೆದ AI ಶೃಂಗಸಭೆ(Paris AI Action Summit)ಯನ್ನು ಉದ್ದೇಶಿಸಿ ಮಾತನಾಡಿದ ನಂತರ ಮರ್ಸಿಲ್ಲೆಗೆ ಆಗಮಿಸಿದ್ದಾರೆ(Modi in Paris). ನರೇಂದ್ರ ಮೋದಿ(Narendra Modi) ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್(Emmanuel Macron) ಅವರೊಂದಿಗೆ ಮರ್ಸೆಲ್ಲೆಗೆ ಆಗಮಿಸಿ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟ ಉಭಯ ನಾಯಕರು ಮಹಾಯುದ್ಧಗಳಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಅವರು ಸ್ವಾತಂತ್ರ್ಯ ಹೋರಾಟಗಾರ ವೀರ್‌ ಸಾವರ್ಕರ್‌ ಅವರನ್ನು ಸ್ಮರಿಸಿದ್ದು, ಮರ್ಸೆಲ್ಲೆಯಲ್ಲಿ ಇಳಿದಿದ್ದೇನೆ. ಭಾರತದ ಸ್ವಾತಂತ್ರ್ಯದ ಅನ್ವೇಷಣೆಯಲ್ಲಿ, ಈ ನಗರವು ವಿಶೇಷ ಮಹತ್ವವನ್ನು ಹೊಂದಿದೆ. ಮಹಾನ್ ವೀರ್ ಸಾವರ್ಕರ್ ಧೈರ್ಯದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಇಲ್ಲೇ. ಅವರನ್ನು ಬ್ರಿಟಿಷ್ ಕಸ್ಟಡಿಗೆ ಒಪ್ಪಿಸಬಾರದು ಎಂದು ಒತ್ತಾಯಿಸಿದ ಮಾರ್ಸಿಲ್ಲೆಯ ಜನರು ಮತ್ತು ಆ ಕಾಲದ ಫ್ರೆಂಚ್ ಕಾರ್ಯಕರ್ತರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವೀರ್ ಸಾವರ್ಕರ್ ಅವರ ಶೌರ್ಯವು ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಪೋಸ್ಟ್‌ ಮಾಡಿದ್ದಾರೆ.



ಅಧ್ಯಕ್ಷ ಮ್ಯಾಕ್ರನ್ ಮತ್ತು ನಾನು ಸ್ವಲ್ಪ ಸಮಯದ ಹಿಂದೆ ಮಾರ್ಸಿಲ್ಲೆ ತಲುಪಿದ್ದೇವೆ. ಈ ಭೇಟಿಯು ಭಾರತ ಮತ್ತು ಫ್ರಾನ್ಸ್ ಅನ್ನು ಮತ್ತಷ್ಟು ಸಂಪರ್ಕಿಸುವ ಗುರಿಯನ್ನು ಹೊಂದಿರುವ ಪ್ರಮುಖ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ. ಉದ್ಘಾಟನೆಗೊಳ್ಳುತ್ತಿರುವ ಭಾರತೀಯ ದೂತಾವಾಸವು ಜನರಿಂದ ಜನರ ಸಂಪರ್ಕವನ್ನು ಇನ್ನಷ್ಟು ಬಲಪಡಿಸುತ್ತದೆ. ಮೊದಲ ಮತ್ತು ಎರಡನೆಯ ಮಹಾಯುದ್ಧಗಳಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ನಾನು ಗೌರವ ಸಲ್ಲಿಸುತ್ತೇನೆ.



ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ಯಾರಿಸ್‌ನಲ್ಲಿ ನಡೆದ AI ಶೃಂಗಸಭೆ(Paris AI Action Summit)ಯನ್ನು ಉದ್ದೇಶಿಸಿ ಮಾತನಾಡಿದ್ದು, ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿದೆ. ಈ ಶತಮಾನದಲ್ಲಿ AI ಮಾನವೀಯತೆಯ ಕೋಡ್‌ಗಳನ್ನು ಬರೆಯುತ್ತಿದೆ. ಅಲ್ಲದೇ ನಾವೀನ್ಯತೆ ಮತ್ತು ಪಾರದರ್ಶಕತೆಯನ್ನು ಉತ್ತೇಜಿಸುವ ತಾಂತ್ರಿಕ ಆಡಳಿತಕ್ಕಾಗಿ ಅವರು ಆಗ್ರಹಿಸಿದರು. ಕೃತಕ ಬುದ್ಧಿಮತ್ತೆಯಿಂದ (ಎಐ) ಉದ್ಯೋಗ ನಷ್ಟವಾಗಲಿದೆ ಎನ್ನುವ ಆತಂಕ ಎಲ್ಲರಲ್ಲೂ ಕಾಡುತ್ತಿದೆ. ಆದರೆ ತಂತ್ರಜ್ಞಾನದ ಆವಿಷ್ಕಾರದಿಂದ ಯಾರೂ ಕೆಲಸ ಕಳೆದುಕೊಳ್ಳುವುದಿಲ್ಲ ಬದಲಾಗಿ ಕೆಲಸ ಮಾಡುವ ರೀತಿ ಬದಲಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.