Friday, 13th December 2024

ನವೆಂಬರ್‌’ನಲ್ಲಿ ಅಫ್ಗಾನಿಸ್ತಾನದಲ್ಲಿ ಪೋಲಿಯೊ ಲಸಿಕೆ ಆರಂಭ

ಕಾಬೂಲ್‌: ತಾಲಿಬಾನ್‌, ಪೋಲಿಯೊ ಅಭಿಯಾನವನ್ನು ಬೆಂಬಲಿಸಲು ಒಪ್ಪಿಗೆ ನೀಡಿದ ನಂತರ ಅಫ್ಗಾನಿ ಸ್ತಾನದಲ್ಲಿ ಮುಂದಿನ ತಿಂಗಳು ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪೋಲಿಯೊ ಲಸಿಕೆ ಹಾಕುವುದನ್ನು ಆರಂಭಿಸಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುನಿಸೆಫ್‌ ಹೇಳಿವೆ.

ಕೊಳಚೆ ನೀರಿನ ಮೂಲಕ ಗುಣಪಡಿಸಲಾಗದ ಪೋಲಿಯೊ ಹರಡುತ್ತದೆ. ಇದು ಸಾಂಕ್ರಾಮಿಕ ರೋಗವಾ ಗಿದ್ದು ಚಿಕ್ಕ ಮಕ್ಕಳಲ್ಲಿ ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ. ನವೆಂಬರ್‌ 8 ರಿಂದ ಪೋಲಿಯೊ ಲಸಿಕಾ ಅಭಿಯಾನ ಆರಂಭವಾಗಲಿದೆ. 30 ಲಕ್ಷಕ್ಕಿಂತ ಹೆಚ್ಚಿನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಅಫ್ಗಾನಿಸ್ತಾನದಲ್ಲಿ ಲಸಿಕೆ ನೀಡುವ ನಿರ್ಧಾರವು ಪೋಲಿಯೊವನ್ನು ನಿರ್ಮೂಲನೆ ಮಾಡುವ ಪ್ರಯತ್ನಗಳಲ್ಲಿ ಒಂದು ದೊಡ್ಡ ಹೆಜ್ಜೆಯನ್ನಿಡಲು ನಮಗೆ ಅನುವು ಮಾಡಿಕೊಡುತ್ತದೆ.

ಡಿಸೆಂಬರ್‌ನಲ್ಲಿ ಪಾಕಿಸ್ತಾನದಲ್ಲಿ ಪೋಲಿಯೊ ಲಸಿಕೆಯ ಎರಡನೇ ಅಭಿಯಾನ ಆರಂಭಿಸಲು ಒಪ್ಪಿಗೆ ನೀಡಲಾಗಿದೆ.

2021ರ ಆಗಸ್ಟ್‌ನಲ್ಲಿ ಅಫ್ಗಾನಿಸ್ತಾನ ತಾಲಿಬಾನ್‌ ವಶವಾದ ನಂತರ ದೇಶದಲ್ಲಿ ಒಂದು ಪೋಲಿಯೊ ಪ್ರಕರಣ ವರದಿಯಾಗಿದೆ. 2020ರಲ್ಲಿ 56 ಪೋಲಿಯೊ ಪ್ರಕರಣ ವರದಿಯಾಗಿದ್ದವು.