Sunday, 15th December 2024

ಪೋಪ್ ಫ್ರಾನ್ಸಿಸ್ ರೋಮ್‌ನ ಆಸ್ಪತ್ರೆಗೆ ದಾಖಲು

ರೋಮ್: ಉಸಿರಾಟದ ಸೋಂಕಿನಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್ (86) ಅವರನ್ನು ಬುಧವಾರ ರೋಮ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಇತ್ತೀಚಿನ ದಿನಗಳಲ್ಲಿ ಪೋಪ್ ಫ್ರಾನ್ಸಿಸ್ ಅವರು ಕೆಲವು ಉಸಿರಾಟದ ತೊಂದರೆಗಳ ಬಗ್ಗೆ ದೂರು ನೀಡಿದ್ದಾರೆ’ ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ ಬ್ರೂನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೋಪ್ ಫ್ರಾನ್ಸಿಸ್‌ರನ್ನು ವೈದ್ಯಕೀಯ ತಪಾಸಣೆಗಾಗಿ ರೋಮ್‌ನ ಜೆಮೆಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದು ‘ಉಸಿ ರಾಟದ ಸೋಂಕು… ಅದಕ್ಕೆ ಕೆಲವು ದಿನಗಳ ಸೂಕ್ತ ಆಸ್ಪತ್ರೆ ವೈದ್ಯಕೀಯ ಚಿಕಿತ್ಸೆ ಅಗತ್ಯವಿರುತ್ತದೆ’ ಎಂದು ವೈದ್ಯರು ತಿಳಿಸಿದ್ದಾರೆ.