Friday, 13th December 2024

ರಷ್ಯಾ ಅಧ್ಯಕ್ಷರಿಂದ ಹೊಸ ವರ್ಷದ ಶುಭ ಹಾರೈಕೆ

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಹೊಸ ವರ್ಷದಲ್ಲಿ ಉಭಯ ದೇಶಗಳು ರಚನಾತ್ಮಕ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುತ್ತವೆ. ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನಗಳನ್ನು ಸಂಘಟಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ರಷ್ಯಾ ಮತ್ತು ಭಾರತವು ಕಾರ್ಯತಂತ್ರದ ಸಹಭಾಗಿತ್ವದ ಸಂಬಂಧಗಳಿಂದ ಸಂಪರ್ಕ ಹೊಂದಿವೆ, ಇದು 2020ರಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ಸೇರಿದಂತೆ ತೊಂದರೆಗಳು ಮತ್ತು ಸಮಸ್ಯೆಗಳ ಹೊರತಾಗಿಯೂ ವಿಶ್ವಾಸದಿಂದ ಅಭಿವೃದ್ಧಿ ಹೊಂದುತ್ತಿದೆ’ ಎಂದು ತಿಳಿಸಿದ್ದಾರೆ.