ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಉಕ್ರೇನ್‌ ಒಳಿತನ್ನೇ ಪುಟಿನ್‌ ಬಯಸುತ್ತಾರೆ; ಯುದ್ಧ ಕೊನೆಗೊಳಿಸುವ ಸೂಚನೆ ನೀಡಿದ ಟ್ರಂಪ್‌

Donald Trump: ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ಫ್ಲೋರಿಡಾದ ಮಾರ್-ಎ-ಲಾಗೊ ನಿವಾಸದಲ್ಲಿ ನಡೆದ ಬಳಿಕ ರಷ್ಯಾ ಹಾಗೂ ಉಕ್ರೇನ್‌ ನಡುವೆ ನಡೆಯುತ್ತಿರುವ ಯುದ್ಧವನ್ನು ಸದ್ಯದಲ್ಲಿಯೇ ನಿಲ್ಲಿಸುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಡೊನಾಲ್ಡ್‌ ಟ್ರಂಪ್‌

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ಫ್ಲೋರಿಡಾದ ಮಾರ್-ಎ-ಲಾಗೊ ನಿವಾಸದಲ್ಲಿ ನಡೆದ ಬಳಿಕ ರಷ್ಯಾ ಹಾಗೂ ಉಕ್ರೇನ್‌ ಯುದ್ಧವನ್ನು ಸದ್ಯದಲ್ಲಿಯೇ ನಿಲ್ಲಿಸುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಶಾಂತಿ ಮಾತುಕತೆಗಳು "ಹಿಂದಿಗಿಂತಲೂ ಹತ್ತಿರದಲ್ಲಿವೆ ಎಂದು ಅವರು ಹೇಳಿದ್ದಾರೆ. ಫೆಬ್ರವರಿ 2022 ರಿಂದ ಹತ್ತಾರು ಸಾವಿರ ಜನರನ್ನು ಬಲಿತೆಗೆದುಕೊಂಡಿರುವ ಯುದ್ಧವನ್ನು ಕೊನೆಗೊಳಿಸಲು ಸಾಧ್ಯವೇ ಎಂಬುದು ವಾರಗಳಲ್ಲಿ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು.

ನಾವು ಎರಡೂ ಕಡೆಯವರೊಂದಿಗೆ ಬಹಳ ಹತ್ತಿರವಾಗಿದ್ದೇವೆ. ಯುದ್ಧವನ್ನು ಕೊನೆಗೊಳಿಸುವ ಕರಡು ಒಪ್ಪಂದ ಬಹುತೇಕ 95% ಪೂರ್ಣಗೊಂಡಿದೆ. ಎರಡೂ ಕಡೆಯವರು ಆ ಯುದ್ಧವನ್ನು ಕೊನೆಗೊಳಿಸುವಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ ಎಂದು ಟ್ರಂಪ್‌ ಹೇಳಿದ್ದಾರೆ. ಝೆಲೆನ್ಸ್ಕಿ ಜೊತೆ ಸಭೆ ನಡೆಸುವ ಮೊದಲು ಟ್ರಂಪ್‌ ಪುಟಿನ್‌ಗೆ ದೂರವಾಣಿ ಕರೆ ಮಾಡಿ ಯುದ್ಧ ಕೊನೆಗೊಳಿಸುವ ಸಂಬಂಧ ಮಾತನಾಡಿದ್ದರು. ಯುದ್ಧ ಮುಗಿಸುವ ಸಂಬಂಧ ಟ್ರಂಪ್‌ ಉಕ್ರೇನ್‌ ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದಾರೆ.

ಉಕ್ರೇನ್ ಯಶಸ್ವಿಯಾಗುವುದನ್ನು ರಷ್ಯಾ ಬಯಸುತ್ತದೆ. ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಉಕ್ರೇನ್‌ ಬಗ್ಗೆ ತುಂಬಾ ಉದಾರ ಮನೋಭಾವನೆ ಹೊಂದಿದ್ದಾರೆ" ಎಂದು ಟ್ರಂಪ್‌ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಕದನ ವಿರಾಮ ಒಪ್ಪಂದ ಕುರಿತು ಅವರೊಂದಿಗೆ ನಾನು ಮಾತನಾಡಿದಾಗಲೆಲ್ಲಾ, ಪುಟಿನ್‌ ಅವರು ಉಕ್ರೇನ್‌ ಬಗ್ಗೆ ಹೊಂದಿರುವ ಭಾವನೆ ನನ್ನ ಮನಸ್ಸನ್ನು ತಟ್ಟಿದೆ" ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಲೈಂಗಿಕ ಹಗರಣ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌; ಟ್ರಂಪ್‌ ಫೋಟೋ ಸೇರಿ ಕನಿಷ್ಠ 16 ದಾಖಲೆಗಳು ನಾಪತ್ತೆ!

ರಷ್ಯಾ-ಉಕ್ರೇನ್‌ ಶಾಂತಿ ಸ್ಥಾಪನೆ ಕುರಿತು ಮಾತನಾಡಲು, ಈ ಹಿಂದೆ ಶ್ವೇತಭವನದಲ್ಲಿ ಡೊನಾಲ್ಡ್‌ ಟ್ರಂಪ್‌ ಮತ್ತು ವೊಲೊಡಿಮಿರ್‌ ಝೆಲೆನ್ಸ್ಕಿ ಭೇಟಿಯಾಗಿದ್ದರು. ಈ ವೇಳೆ ಟ್ರಂಪ್-ಝೆಲೆನ್ಸ್ಕಿ ಜಗಳ ಇಡೀ ಜಗತ್ತಿನ ಗಮನ ಸೆಳೆದಿತ್ತು. "ಉಕ್ರೇನ್‌ ಅಧ್ಯಕ್ಷರಿಗೆ ಯುದ್ಧ ಕೊನೆಯಾಗುವುದು ಬೇಕಿಲ್ಲ" ಎಂಬ ಅಮೆರಿಕ ಅಧ್ಯಕ್ಷರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು.