ಬಿಷ್ಕೆಕ್: ಉಕ್ರೇನ್‌ನ (Ukraine war) ವಸತಿ ಪ್ರದೇಶಗಳಿಗೆ ರಾತ್ರೋರಾತ್ರಿ ರಷ್ಯಾದ ಕ್ಷಿಪಣಿ ಮತ್ತು ಡ್ರೋನ್ ಗಳು ದಾಳಿ (Russian missile attack) ನಡೆಸಿದ್ದು ಭಾರತೀಯನೊಬ್ಬ ಸೇರಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ (Ukrainian President) ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky) ಅವರು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin) ಅವರನ್ನು ಭೇಟಿ ಮಾಡಿದ ಬಳಿಕ ಝೆಲೆನ್ಸ್ಕಿ ಮಂಗಳವಾರ ಪೋಸ್ಟ್ ಹಂಚಿಕೊಂಡಿದ್ದಾರೆ.
ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಂತೆ ಮನವಿ ಮಾಡಿದರು.
ಇದರ ಬಳಿಕ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಉಕ್ರೇನ್‌ನಾದ್ಯಂತ ರಷ್ಯಾದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ 12 ಜನರಲ್ಲಿ ಒಬ್ಬ ಭಾರತೀಯ ಪ್ರಜೆಯೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ.
ರಷ್ಯಾದ ಪಡೆಗಳು ದಾಳಿಗಾಗಿ ಹಲವು ಜೆಟ್-ಚಾಲಿತ ಡ್ರೋನ್‌ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಬಳಸಿವೆ. ಮುಖ್ಯವಾಗಿ ವಸತಿ ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡಿವೆ ಎಂದು ತಿಳಿಸಿದ್ದಾರೆ.
ಬಿಷ್ಕೆಕ್‌ನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು, ಮಾನವೀಯತೆಯ ಹಿತದೃಷ್ಟಿಯಿಂದ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಂತೆ ಪುಟಿನ್ ಅವರನ್ನು ಒತ್ತಾಯಿಸಿ, ಭಾರತ ಸದಾ ಶಾಂತಿ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಎಂದು ತಿಳಿಸಿದರು.
ಕೈವ್‌ನ ರೈಲ್ವೆ ಡಿಪೋದ ಮೇಲೆ ನಡೆದ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದು, ಕೈವ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು 350 ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬೋರಿಸ್ಪಿಲ್‌ನಲ್ಲಿ ಐದು ಅಂತಸ್ತಿನ ವಸತಿ ಕಟ್ಟಾ ಹಾನಿಗೊಳಗಾಗಿದ್ದು, 50 ಜನರನ್ನು ಸ್ಥಳಾಂತರಿಸಲಾಗಿದೆ. ನಾಲ್ಕು ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಒಡೆಸಾ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲೂ ದಾಳಿಯಾಗಿದ್ದು, ಸಾವಿರಾರು ಕುಟುಂಬಗಳು ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿ ಉಳಿದಿವೆ. ರೊಮೇನಿಯಾದೊಂದಿಗಿನ ಗಡಿ ಚೆಕ್‌ಪಾಯಿಂಟ್ ಮತ್ತು ರಫ್ತು ಮೂಲಸೌಕರ್ಯ ಹಾನಿಗೊಳಗಾಗಿದೆ ಖೆರ್ಸನ್, ಖಾರ್ಕಿವ್, ಚೆರ್ನಿಹಿವ್, ಝೈಟೊಮಿರ್, ಸುಮಿ ಸೇರಿದಂತೆ ಹಲವು ಪ್ರದೇಶಗಳ ಮೇಲೆ ರಷ್ಯಾ ದಾಳಿ ನಡೆಸಿದೆ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.
ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಖಡಕ್ ಸಂದೇಶ ನೀಡಿದ ಮೋದಿ; ಉಗ್ರ ಪೋಷಕ ದೇಶಕ್ಕೆ ಮಾತಿನಲ್ಲಿ ಚಾಟಿ
ಕಳೆದ ನಾಲ್ಕು ದಿನಗಳಲ್ಲಿ ಸುಮಾರು 1,500 ಡ್ರೋನ್‌ಗಳನ್ನು ಉಡಾಯಿಸಲಾಗಿದ್ದು, ಅವುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜೆಟ್ ಚಾಲಿತವಾಗಿವೆ. ಆಗಸ್ಟ್ 29 ರಂದು ಕೈವ್ ಬಳಿಯ ಯುದ್ಧಸಾಮಗ್ರಿ ಡಿಪೋದ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ 38 ಜನರು ಸಾವನ್ನಪ್ಪಿದ್ದು, 52 ಮಂದಿ ಗಾಯಗೊಂಡಿದ್ದರು. ಎಂದು ಝೆಲೆನ್ಸ್ಕಿ ಹೇಳಿದ್ದಾರೆ.