ಇಸ್ಲಾಮಾಬಾದ್ : ನ್ಯೂಯಾರ್ಕ್ ನಲ್ಲಿ ಸೆ.25ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ (ಸಾರ್ಕ್) ದೇಶಗಳ ವಿದೇಶಾಂಗ ಸಚಿವರ ಮಟ್ಟದ ಸಭೆ ರದ್ದುಗೊಂಡಿದೆ.
ಅಫ್ಘಾನಿಸ್ತಾನವನ್ನು ಪ್ರತಿನಿಧಿಸಲು ತಾಲಿಬಾನ್ ನಾಯಕರಿಗೆ ಸಾರ್ಕ್ ಸಭೆಯಲ್ಲಿ ಅವಕಾಶ ನೀಡ ಬೇಕೆಂದು ಪಾಕಿಸ್ತಾನ ಪಟ್ಟು ಹಿಡಿದೆ. ಆದರೆ ಈ ಪ್ರಸ್ತಾಪಕ್ಕೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಾರ್ಕ್ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಅಫ್ಘಾನಿಸ್ತಾನದ ಹಿಂದಿನ ಅಶ್ರಫ್ ಘನಿ ಸರ್ಕಾರದಲ್ಲಿ ವಿಶ್ವಸಂಸ್ಥೆ ರಾಯಭಾರಿಯಾಗಿದ್ದವರು. ಈ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇತ್ತು. ಆದರೆ ಇದೀಗ ತಾಲಿಬಾನ್ ನೇಮಿಸಿರುವ ವಿಶ್ವಸಂಸ್ಥೆಯ ಹೊಸ ರಾಯಭಾರಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಪಾಕಿಸ್ತಾನ ಒತ್ತಾಯಿಸಿದೆ.