Saturday, 5th October 2024

ಕಾಬೂಲ್​: ಗುರುದ್ವಾರದಲ್ಲಿ ಸರಣಿ ಸ್ಫೋಟ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಗುರುದ್ವಾರ ದಲ್ಲಿ ಶನಿವಾರ ಸರಣಿ ಸ್ಫೋಟ ಸಂಭವಿಸಿದ್ದು, ಘಟನೆಯನ್ನು ಭಾರತ ತೀವ್ರ ಖಂಡಿಸಿದೆ.

ಸರಣಿ ದಾಳಿ ಜತೆಗೆ ಗುಂಡಿನ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್​ ನಫಿ ಟಕೌರ್​ ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಪ್ರಾರ್ಥನೆ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ದಾಳಿ ವೇಳೆ ಹಲವು ಭಕ್ತರು ಇದ್ದರು. ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.