ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Donald Trump: ಭಾರತ- ಪಾಕ್‌ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್‌ ಪ್ರಶಸ್ತಿ ಕೊಡಲೇ ಬೇಕು; ಟ್ರಂಪ್‌

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪದೇ ಪದೇ ನೊಬೆಲ್‌ ಪ್ರಶಸ್ತಿಯ ಬೇಡಿಕೆಯನ್ನು ಇಡುತ್ತಲೇ ಇದ್ದಾರೆ. ಇದೀಗ ಟ್ರಂಪ್‌ ಮತ್ತೊಮ್ಮೆ ನೊಬೆಲ್‌ಗಾಗಿ ಮನವಿ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ಭಾರತ-ಪಾಕಿಸ್ತಾನ ಸಂಘರ್ಷ ಸೇರಿದಂತೆ ಏಳು ಯುದ್ಧವನ್ನು ನಾವು ನಿಲ್ಲಿಸಿದ್ದೇವೆ ಎಂದು ಅವರು ಹೇಳಿದ್ದರು.

ಭಾರತ,ಪಾಕ್‌ ಯುದ್ಧ ನಿಲ್ಲಿಸಿದ್ದೇನೆ ನಾನು! ಟ್ರಂಪ್‌

-

Vishakha Bhat Vishakha Bhat Sep 21, 2025 3:05 PM

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ (Donald Trump) ಟ್ರಂಪ್‌ ಪದೇ ಪದೇ ನೊಬೆಲ್‌ ಪ್ರಶಸ್ತಿಯ ಬೇಡಿಕೆಯನ್ನು ಇಡುತ್ತಲೇ ಇದ್ದಾರೆ. ಇದೀಗ ಟ್ರಂಪ್‌ ಮತ್ತೊಮ್ಮೆ ನೊಬೆಲ್‌ಗಾಗಿ ಮನವಿ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ಭಾರತ-ಪಾಕಿಸ್ತಾನ ಸಂಘರ್ಷ ಸೇರಿದಂತೆ ಏಳು ಯುದ್ಧವನ್ನು ನಾವು ನಿಲ್ಲಿಸಿದ್ದೇವೆ ಎಂದು ಅವರು ಹೇಳಿದ್ದರು. ನಾವು ಶಾಂತಿ ಒಪ್ಪಂದಗಳನ್ನು ರೂಪಿಸುತ್ತಿದ್ದೇವೆ ಮತ್ತು ನಾವು ಯುದ್ಧಗಳನ್ನು ನಿಲ್ಲಿಸುತ್ತಿದ್ದೇವೆ. ಆದ್ದರಿಂದ ನಾವು ಭಾರತ ಮತ್ತು ಪಾಕಿಸ್ತಾನ, ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಯುದ್ಧಗಳನ್ನು ನಿಲ್ಲಿಸಿದ್ದೇವೆ" ಎಂದು ಟ್ರಂಪ್ ಶನಿವಾರ ಅಮೇರಿಕನ್ ಕಾರ್ನರ್‌ಸ್ಟೋನ್ ಇನ್‌ಸ್ಟಿಟ್ಯೂಟ್ ಸ್ಥಾಪಕರ ಭೋಜನಕೂಟದಲ್ಲಿ ಹೇಳಿದರು.

ಭಾರತ ಹಾಗೂ ಪಾಕಿಸ್ತಾನ ಯುದ್ಧ ಹೇಗೆ ನಿಂತಿತು ಎಂಬುದು ನಿಮಗೆ ತಿಳಿದಿರುವ ವಿಷಯ. ನಾನು ಅವರೊಂದಿಗೆ ವ್ಯಾಪಾರದ ಬಹಿಷ್ಕಾರದ ಎಚ್ಚರಿಕೆ ನೀಡಿದ್ದೆ. ನನ್ನ ಮಾತನ್ನು ಉಭಯ ದೇಶಗಳ ನಾಯಕರು ಗೌರವಿಸಿದರು. ನನಗೆ ಇಬ್ಬರೂ ನಾಯಕರ ಬಗ್ಗೆ ಅಪಾರ ಗೌರವವಿದೆ. ಇಷ್ಟೇ ಅಲ್ಲ, ನಾನು ಥೈಲ್ಯಾಂಡ್, ಕಾಂಬೋಡಿಯಾ, ಅರ್ಮೇನಿಯಾ, ಅಜೆರ್ಬೈಜಾನ್, ಕೊಸೊವೊ ಮತ್ತು ಸೆರ್ಬಿಯಾ, ಇಸ್ರೇಲ್ ಮತ್ತು ಇರಾನ್, ಈಜಿಪ್ಟ್ ಮತ್ತು ಇಥಿಯೋಪಿಯಾ, ರುವಾಂಡಾ ಮತ್ತು ಕಾಂಗೋ ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಮುಂದಿರುವ ಸವಾಲೆಂದರೆ, ರಷ್ಯಾ-ಉಕ್ರೇನ್ ಸಂಘರ್ಷವನ್ನು ಪರಿಹರಿಸುವುದು. ನಾನು ಅಧ್ಯಕ್ಷ ಪುಟಿನ್ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇನೆ. ಅವರ ಜೊತೆ ಮಾತುಕತೆನ್ನೂ ನಡೆಸಿದ್ದೆ ಎಂದು ಟ್ರಂಪ್‌ ಹೇಳಿದ್ದಾರೆ. ಈ ಹಿಂದೆ "ಜಾಗತಿಕ ಶಾಂತಿ ಸ್ಥಾಪನೆ ಪ್ರಯತ್ನದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ, ಪ್ರಸಕ್ತ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಬೇಕು" ಎಂದು ಇಸ್ರೇಲ್‌ ಪ್ರಧಾನಮಂತ್ರಿ ಬೆಂಜಮಿನ್‌ ನೆತನ್ಯಾಹು ಮನವಿ ಮಾಡಿದ್ದರು.

ಈ ಸುದ್ದಿಯನ್ನೂ ಓದಿ: H-1B Visa: ಅಮೆರಿಕದ ಮತ್ತೊಂದು ಹೊಡೆತ; H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌, ಭಾರತೀಯರಿಗಾಗುವ ನಷ್ಟವೇನು?

ರಿಕ ರಾಜಧಾನಿ ವಾಷಿಂಗ್ಟನ್‌ ಡಿಸಿಯಲ್ಲಿರುವ ಶ್ವೇತಭವನದಲ್ಲಿ ನಡೆದ ಭೋಜನಕೂಟ ಸಮಯದಲ್ಲಿ, ಡೊನಾಲ್ಡ್‌ ಟ್ರಂಪ್‌ ಅವರನ್ನು ಬೆಂಜಮಿನ್‌ ನೆತನ್ಯಾಹು ಅವರು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದರು. ಅಲ್ಲದೇ ಈ ಕುರಿತು ನೊಬೆಲ್‌ ಸಮಿತಿಗೆ ಕಳುಹಿಸಿದ ನಾಮನಿರ್ದೇಶನ ಮನವಿ ಪತ್ರದ ಪ್ರತಿಯನ್ನು ಕೂಡ ಡೊನಾಲ್ಡ್‌ ಟ್ರಂಪ್‌ ಅವರಿಗೆ ನೀಡಿದದ್ದರು.