Friday, 13th December 2024

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಿದ್ಧಾರ್ಥ್‌ ಮಲ್ಯ

ಲಂಡನ್‌: ಮದ್ಯದ ದೊರೆ, ಆರ್​ಸಿಬಿ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್‌ ಮಲ್ಯ ಅವರ ಪುತ್ರ ಸಿದ್ಧಾರ್ಥ್‌ ಮಲ್ಯತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಇದೀಗ ಈ ಜೋಡಿ ಲಂಡನ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದೆ.

ಬಹುಕಾಲದ ಗೆಳತಿ ಜಾಸ್ಮಿನ್‌ಗೆ 2023ರ ಆರಂಭದಲ್ಲಿ ಸಿದ್ಧಾರ್ಥ್ ಪ್ರಪೋಸ್ ಮಾಡಿದ್ದರು. ಕ್ಯಾಲಿಫೋರ್ನಿಯಾದಲ್ಲಿನ ಹ್ಯಾಲೋವಿನ್ ಪಾರ್ಟಿಯಲ್ಲಿ ಸಿದ್ದಾರ್ಥ್ ಹಾಗೂ ಜಾಸ್ಮಿನ್ ಇಬ್ಬರು ಜತೆಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಸಿದ್ದಾರ್ಥ್ ತಮ್ಮ ಪ್ರೀತಿಯನ್ನು ಹೇಳಿಕೊಂಡಿದ್ದರು. ಇದಕ್ಕೆ ಜಾಸ್ಮಿನ್ ಗ್ರೀನ್ ಸಿಗ್ನಲ್ ನೀಡಿದ್ದರು. ಬಳಿಕ ಈ ಜೋಡಿ ಕಳೆದ ವರ್ಷವೇ ನಿಶ್ಚಿತಾರ್ಥ ಮಾಡಿಕೊಂಡಿತ್ತು.