ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸ್ಪೇನ್‌ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ; 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಸಾವಿನ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ. ನೂರಾರು ಪ್ರಯಾಣಿಕರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ ಘಟನೆಯು ದೇಶಾದ್ಯಂತ ತೀವ್ರ ಆಘಾತವನ್ನು ಉಂಟುಮಾಡಿದೆ.

ಸ್ಪೇನ್‌ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ

ಟೊಲೆಡೊ: ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ ( Spain Train Collision) ಸಂಭವಿಸಿದ್ದು, ದುರಂತದಲ್ಲಿ ಸಾವಿನ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ. ನೂರಾರು ಪ್ರಯಾಣಿಕರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ ಘಟನೆಯು ದೇಶಾದ್ಯಂತ ತೀವ್ರ ಆಘಾತವನ್ನು ಉಂಟುಮಾಡಿದೆ. ಬುಧವಾರ ಬೆಳಗ್ಗೆ ಸುಮಾರು 8:54 ಕ್ಕೆ ಸ್ಪೇನ್‌ನ ಟೊಲೆಡೊ ಪ್ರಾಂತ್ಯದ ಉರ್ಡಾ ಮತ್ತು ಲಾಸ್ ಯೆಬೆನೆಸ್ ಪಟ್ಟಣಗಳ ನಡುವೆ ಈ ಭೀಕರ ರೈಲು ದುರಂತ ಸಂಭವಿಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ತಾಂತ್ರಿಕ ದೋಷ ಅಥವಾ ಸಿಗ್ನಲಿಂಗ್ ವೈಫಲ್ಯದಿಂದಾಗಿ ಒಂದೇ ಹಳಿ ಮೇಲೆ ಎರಡು ರೈಲುಗಳು ಬಂದಿವೆ. ಹಳಿಯ ಮೇಲೆ ಮುಂದೆ ಚಲಿಸುತ್ತಿದ್ದ Iryo ಕಂಪನಿಗೆ ಸೇರಿದ ರೈಲಿಗೆ, ಹಿಂಬದಿಯಿಂದ ಅತಿ ವೇಗವಾಗಿ ಬಂದ Renfe AVE ಹೈಸ್ಪೀಡ್ ರೈಲು ಜೋರಾಗಿ ಡಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ರೈಲಿನ ಎರಡು ಬೋಗಿಗಳು ಹಳಿತಪ್ಪಿ ಸಂಪೂರ್ಣವಾಗಿ ಜಖಂಗೊಂಡಿವೆ.

ವಿಡಿಯೋ ನೋಡಿ



ಘಟನಾ ಸ್ಥಳಕ್ಕೆ ತಕ್ಷಣವೇ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ವೈದ್ಯಕೀಯ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ಅಪಘಾತದ ಸ್ಥಳದ ಸಮೀಪವಿರುವ ಕ್ರೀಡಾಂಗಣಗಳನ್ನು ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳಾಗಿ ಮಾರ್ಪಡಿಸಲಾಗಿದ್ದು, ಗಾಯಗೊಂಡ ನೂರಾರು ಪ್ರಯಾಣಿಕರಿಗೆ ಅಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. • ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ.

ಈ ಭೀಕರ ಅಪಘಾತದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ರೈಲು ಮಾರ್ಗಗಳಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮ್ಯಾಡ್ರಿಡ್, ಸಿಯುಡಾಡ್ ರಿಯಲ್ ಮತ್ತು ಆಂಡಲೂಸಿಯಾ ಪ್ರದೇಶಗಳ ನಡುವಿನ ಹೈಸ್ಪೀಡ್ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ರೈಲು ಹಳಿಗಳನ್ನು ದುರಸ್ತಿ ಮಾಡಲು ಮತ್ತು ಬೋಗಿಗಳನ್ನು ತೆರವುಗೊಳಿಸಲು ಹಲವು ಗಂಟೆಗಳ ಕಾಲಾವಕಾಶ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಮಕೂರಿನಲ್ಲಿ ಭೀಕರ ಅಪಘಾತ; ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರು ಯುವತಿಯರ ದುರ್ಮರಣ!

ಇದೇ ವರ್ಷದ ಜನವರಿ ತಿಂಗಳಲ್ಲಿ ಆಡಮುಜ್ ಬಳಿ ನಡೆದಿದ್ದ ಭೀಕರ ರೈಲು ಅಪಘಾತದಲ್ಲಿಯೂ 46 ಜನರು ಸಾವನ್ನಪ್ಪಿದ್ದರು. ಆ ಕರಾಳ ಘಟನೆಯ ನೆನಪು ಮಾಸುವ ಮುನ್ನವೇ ಟೊಲೆಡೊ ಬಳಿ ಮತ್ತೊಂದು ಅಷ್ಟೇ ಭೀಕರ ದುರಂತ ಸಂಭವಿಸಿರುವುದು ಸ್ಪೇನ್‌ನ ರೈಲ್ವೆ ಸುರಕ್ಷತೆಯ ಬಗ್ಗೆ ತೀವ್ರ ಆತಂಕವನ್ನು ಮೂಡಿಸಿದೆ. ಪ್ರಸ್ತುತ ಸ್ಪೇನ್ ಸರ್ಕಾರವು ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷ ಅಥವಾ ಮಾನವ ಸಹಜ ತಪ್ಪು ಅಪಘಾತಕ್ಕೆ ಕಾರಣವೇ ಎಂದು ತನಿಖೆ ನಡೆಸಲಾಗುತ್ತಿದೆ.

Vishakha Bhat Heggar

View all posts by this author