ಇಸ್ತಾಂಬುಲ್: ಇಸ್ರೇಲ್‌ನ ವಿದೇಶಿ ಗುಪ್ತಚರ ಸೇವೆ ಮೊಸಾದ್ ಪರವಾಗಿ ಬೇಹುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಶಂಕೆಯ ಮೇಲೆ ಟರ್ಕಿ ಅಧಿಕಾರಿಗಳು 33 ಜನರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಇಸ್ತಾಂಬುಲ್ ಪ್ರಾಸಿಕ್ಯೂಟರ್ ಕಚೇರಿಯ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳ ತನಿಖಾ ಬ್ಯೂರೊ ತನಿಖೆ ನಡೆಸುತ್ತಿದೆ.
ಬಂಧಿತ ಶಂಕಿತರು ಮೊಸಾದ್ ಪರವಾಗಿ ಕಣ್ಗಾವಲು, ಹಲ್ಲೆ ಮತ್ತು ಅಪಹರಣದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
57 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದ ದಾಳಿಗಳಲ್ಲಿ ಶಂಕಿತರನ್ನು ಸೆರೆಹಿಡಿಯಲಾಗಿದೆ. ಉಳಿದ 13 ಶಂಕಿತರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿವೆ.
ಲೆಬನಾನ್, ಟರ್ಕಿ ಮತ್ತು ಕತಾರ್ ಸೇರಿದಂತೆ ಎಲ್ಲ ಕಡೆಗಳಲ್ಲಿ ಹಮಾಸ್ ಉಗ್ರರನ್ನು ಸದೆಬಡಿಯಲು ಸಿದ್ಧವಾಗಿದ್ದೇವೆ ಎಂದು ಇಸ್ರೇಲ್‌ನ ದೇಶೀಯ ಭದ್ರತಾ ಸಂಸ್ಥೆಯ ಮುಖ್ಯಸ್ಥ ಶಿನ್ ಬೆಟ್ ಹೇಳಿಕೆ ನೀಡಿದ ವಾರಗಳ ನಂತರ ಈ ಬಂಧನದ ವರದಿ ಬಂದಿದೆ.