Thursday, 12th December 2024

ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆ ?

ಕೋಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಈ ವರದಿಯು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರ ನೇತೃತ್ವದಲ್ಲಿ ‘ಸರ್ವಪಕ್ಷ ಸರ್ಕಾರ’ ರಚನೆ ಮಾಡುವ ನಿರ್ಧಾರಕ್ಕೆ ಬಲ ಬಂದಿದೆ. ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಮಹಿಂದಾ ರಾಜಪಕ್ಸ ಅವರ ಬಳಿಕ ಮನವಿ ಮಾಡಿ ದ್ದರು. ಇದಕ್ಕೆ ರಾಜಪಕ್ಸ ಸಮ್ಮತಿ ಸೂಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದೇಶದ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಮಹಿಂದಾ ರಾಜಪಕ್ಸ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಸಚಿವ ಸಂಪುಟದಲ್ಲಿ ಘೋಷಿಸಲಾಗಿದೆ.

ದೇಶ ಆರ್ಥಿಕವಾಗಿ ದಿವಾಳಿಯಾದ ಕಾರಣ ಪ್ರವಾಸಿಗರ ಸಂಖ್ಯೆಯೂ ಕ್ಷೀಣಿಸಿದೆ. ಕಾರ್ಖಾನೆಗಳ ಮುಚ್ಚುವಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.