Terrorist Attack: ಪಾಕಿಸ್ತಾನದಲ್ಲಿ ಶಾಲಾ ಬಸ್‌ಗೆ ಆತ್ಮಾಹುತಿ ಕಾರ್ ಬಾಂಬ್ ಡಿಕ್ಕಿ; ನಾಲ್ವರು ಮಕ್ಕಳು ಸಾವು
ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನದಲ್ಲಿ ಶಾಲಾ ಬಸ್‌ಗೆ ಆತ್ಮಾಹುತಿ ಕಾರ್ ಬಾಂಬ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ 38 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಲೂಚಿಸ್ತಾನ್ ಪ್ರಾಂತ್ಯದ ಖುಜ್ದಾರ್ ಜಿಲ್ಲೆಯಲ್ಲಿ ಬಸ್ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಈ ದಾಳಿ ನಡೆದಿದೆ.


ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ನೈಋತ್ಯ ಬಲೂಚಿಸ್ತಾನದಲ್ಲಿ ಶಾಲಾ (Terrorist Attack) ಬಸ್‌ಗೆ ಆತ್ಮಾಹುತಿ ಕಾರ್ ಬಾಂಬ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ 38 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಲೂಚಿಸ್ತಾನ್ ಪ್ರಾಂತ್ಯದ ಖುಜ್ದಾರ್ ಜಿಲ್ಲೆಯಲ್ಲಿ ಬಸ್ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಸ್ಥಳೀಯ ಉಪ ಆಯುಕ್ತ ಯಾಸಿರ್ ಇಕ್ಬಾಲ್ ತಿಳಿಸಿದ್ದಾರೆ. ಸ್ಫೋಟದ ಹೊಣೆಯನ್ನು ಯಾವುದೇ ಗುಂಪು ಈ ವರೆಗೆ ಹೊತ್ತುಕೊಂಡಿಲ್ಲ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರನ್ನು ಹೆಚ್ಚಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ಜನಾಂಗೀಯ ಬಲೂಚ್ ಪ್ರತ್ಯೇಕತಾವಾದಿಗಳ ಮೇಲೆ ಶಂಕೆ ಇದೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಅವರು ದಾಳಿಯನ್ನು ತೀವ್ರವಾಗಿ ಖಂಡಿಸಿದರು ಮತ್ತು ಮಕ್ಕಳ ಸಾವಿಗೆ ಸಂತಾಪ ಸೂಚಿಸಿದರು. ದುಷ್ಕರ್ಮಿಗಳನ್ನು ಯಾವುದೇ ದಯೆಗೆ ಅರ್ಹರಲ್ಲದ "ಮೃಗಗಳು" ಎಂದು ಹೇಳಿದ್ದಾರೆ. ಬಲೂಚಿಸ್ತಾನ್ ಪ್ರದೇಶದಲ್ಲಿ ಬಹಳ ಹಿಂದಿನಿಂದಲೂ ದಂಗೆ ನಡೆಯುತ್ತಿದ್ದು, ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಸೇರಿದಂತೆ ಹಲವಾರು ಪ್ರತ್ಯೇಕತಾವಾದಿ ಗುಂಪುಗಳು ದಾಳಿ ನಡೆಸುತ್ತಿವೆ. ಯುನೈಟೆಡ್ ಸ್ಟೇಟ್ಸ್ 2019 ರಲ್ಲಿ BLA ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿತು.
ಜಬ್ಬಾರ್ ಮಾರುಕಟ್ಟೆಯಲ್ಲಿ ಕಾರ್ ಬಾಂಬ್ ಸ್ಫೋಟ
ಅಫ್ಘಾನಿಸ್ತಾನದ ಗಡಿಯಲ್ಲಿರುವ ಬಲೂಚಿಸ್ತಾನದ ಕಿಲ್ಲಾ ಅಬ್ದುಲ್ಲಾ ನಗರದ ಮಾರುಕಟ್ಟೆಯ ಬಳಿ ನಡೆದ ಕಾರ್ ಬಾಂಬ್ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿ, 20 ಜನರು ಗಾಯಗೊಂಡ ಕೆಲವೇ ದಿನಗಳ ನಂತರ ಈ ದಾಳಿ ನಡೆದಿದೆ. ಜಬ್ಬಾರ್ ಮಾರುಕಟ್ಟೆ ಬಳಿ ಸಂಭವಿಸಿದ ಸ್ಫೋಟವು ಕಟ್ಟಡಕ್ಕೆ ಭಾರಿ ಹಾನಿಯನ್ನುಂಟುಮಾಡಿತು ಮತ್ತು ಆ ಪ್ರದೇಶದಲ್ಲಿ ವ್ಯಾಪಕ ಭೀತಿಯನ್ನು ಉಂಟುಮಾಡಿತ್ತು.
ಈ ಸುದ್ದಿಯನ್ನೂ ಓದಿ: Baloch Liberation Army: ಪಾಕಿಸ್ತಾನದ 14 ಸೈನಿಕರ ಹತ್ಯೆ ಮಾಡಿದ ಬಲೂಚ್ ಲಿಬರೇಷನ್ ಆರ್ಮಿ; ವಿಡಿಯೊ ರಿಲೀಸ್
ಮೇ 6 ರಂದು, ಬಲೂಚಿಸ್ತಾನದಲ್ಲಿ ಪಾಕಿಸ್ತಾನಿ ಸೇನೆಯ ವಾಹನದ ಮೇಲೆ ಬಿಎಲ್‌ಎ ದಾಳಿ ನಡೆಸಿತ್ತು. ದಾಳಿಯಲ್ಲಿ 7 ಪಾಕಿಸ್ತಾನಿ ಸೈನಿಕರು ಮೃತಪಟ್ಟಿದ್ದರು. ಬಲೂಚ್‌ನ ನೈಋತ್ಯ ಪ್ರಾಂತ್ಯದಲ್ಲಿ ಬಿಎಲ್‌ಎ ಸದಸ್ಯರು ತಮ್ಮ ಸೈನಿಕರ ವಾಹನವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿತ್ತು.