Friday, 22nd November 2024

ಗಾಜಾದಿಂದ ಇಸ್ರೇಲ್ ಕಡೆಗೆ ರಾಕೆಟ್‌ ದಾಳಿ: ನಾಲ್ವರ ಸಾವು, ಹಲವರಿಗೆ ಗಾಯ

ಟೆಲ್ ಅವಿವ್: ಪ್ಯಾಲೇಸ್ಟಿನಿಯನ್ ಭಯೋತ್ಪಾದಕರು ಶನಿವಾರ ಇಸ್ರೇಲ್​ ಪ್ರದೇಶಗಳ ಮೇಲೆ ರಾಕೆಟ್‌ ದಾಳಿ ನಡೆಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಗಾಜಾ ಪಟ್ಟಿಯಿಂದ ಇಸ್ರೇಲ್‌ನ ಅನೇಕ ವಸತಿ ಪ್ರದೇಶಗಳ ಮೇಲೆ ರಾಕೆಟ್‌ಗಳನ್ನು ಹಾರಿಸಲಾಗಿದೆ. ರಾಜಧಾನಿ ಟೆಲ್ ಅವಿವ್‌ ಸೇರಿದಂತೆ ಅನೇಕ ಕಡೆ ಸೈರನ್‌ ಸಹಾಯದಿಂದ ವೈಮಾನಿಕ ದಾಳಿಯ ಬಗ್ಗೆ ಎಚ್ಚರಿಕೆ ನೀಡಲಾ ಗಿದೆ. ಗಾಜಾ ಪಟ್ಟಿಯಲ್ಲಿರುವ ಪ್ಯಾಲೆಸ್ತೀನ್ ಉಗ್ರಗಾಮಿಗಳು ದಕ್ಷಿಣ ಇಸ್ರೇಲ್‌ಗೆ ಭಾರಿ ಒಳನುಸುಳುವಿಕೆ ನಡೆಸಿದ್ದಾರೆ.

ಬಾಂಬ್ ದಾಳಿಯು ಸುಮಾರು 30 ನಿಮಿಷಗಳ ಕಾಲ ನಡೆಯಿತು. ದಕ್ಷಿಣ ಇಸ್ರೇಲ್‌ನ ಕಟ್ಟಡವೊಂದರ ಮೇಲೆ ರಾಕೆಟ್ ಬಿದ್ದ ಪರಿಣಾಮ 70 ವರ್ಷದ ಮಹಿಳೆ ಸೇರಿ ನಾಲ್ಬರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್‌ನ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ) ತಿಳಿಸಿದೆ.

ಗಾಜಾ ಪಟ್ಟಿಯಿಂದ ಸುಮಾರು 70 ಕಿ.ಮೀ ಗಳಷ್ಟು ದೂರದಲ್ಲಿರುವ ಟೆಲ್ ಅವಿವ್‌ನಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಇನ್ನು 2007 ರಲ್ಲಿ ಪ್ಯಾಲೆಸ್ತೀನಿನಲ್ಲಿ ಹಮಾಸ್‌ ಅಧಿಕಾರಕ್ಕೆ ಬಂದ ಬಳಿಕ ಗಾಜಾ ಪಟ್ಟಿಯ ಮೇಲೆ ಹಲವು ದಿಗ್ಬಂಧನಗಳನ್ನು ವಿಧಿಸಿದೆ. ಪ್ಯಾಲೇಸ್ಟಿನಿ ಉಗ್ರರು ಮತ್ತು ಇಸ್ರೇಲ್ ಹಲವಾರು ವಿನಾಶಕಾರಿ ಯುದ್ಧಗಳನ್ನು ನಡೆಸಿದೆ.