ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಥಾಯ್ಲೆಂಡ್‌ನಲ್ಲಿ ಭಾರಿ ಅಗ್ನಿ ಅವಘಡ: 11 ಮಂದಿ ಸಜೀವ ದಹನ, 36ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Thailand Fire Accident: ಥಾಯ್ಲೆಂಡ್‌ನ ಪ್ರವಾಸಿ ದ್ವೀಪ ಫುಕೆಟ್‌ನಲ್ಲಿ ಸೋಮವಾರ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 11 ಜನ ಸಜೀವ ದಹನವಾಗಿದ್ದು, 36ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ದಕ್ಷಿಣ ಥಾಯ್ಲೆಂಡ್‌ನ ಫುಕೆಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ

ಬ್ಯಾಂಕಾಕ್‌, ನ. 16: ದಕ್ಷಿಣ ಥಾಯ್ಲೆಂಡ್‌ನ (Thailand) ಪ್ರಮುಖ ಪ್ರವಾಸಿ ದ್ವೀಪ ಫುಕೆಟ್‌ನ ಪಟಾಂಗ್‌ ಪ್ರದೇಶದಲ್ಲಿ ಸೋಮವಾರ (ನವೆಂಬರ್‌ 16) ಮುಂಜಾನೆ 3:17ರ ವೇಳೆಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 11 ಜನ ಮೃತಪಟ್ಟಿದ್ದು, 36ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ. ವಾಹನ ಬಾಡಿಗೆ ನೀಡುವ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಪಕ್ಕದ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡಗಳಿಗೂ ವ್ಯಾಪಿಸಿದೆ. ಘಟನೆ ನಡೆದಾಗ ಕಟ್ಟಡದ ವಿವಿಧ ಮಹಡಿಗಳಲ್ಲಿ ಜನರು ನಿದ್ರಿಸುತ್ತಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಥೈಲ್ಯಾಂಡ್ ಹಾಗೂ ಮ್ಯಾನ್ಮಾರ್ ದೇಶದ ನಾಗರಿಕರಿದ್ದಾರೆ. ಅದೃಷ್ಟವಶಾತ್ ಯಾವುದೇ ವಿದೇಶಿ ಪ್ರವಾಸಿಗರಿಗೆ ಅಪಾಯವಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

11 ಮಂದಿ ಮೃತ 36ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ರಕ್ಷಣಾ ಕಾರ್ಯಾಚರಣೆಯ ವೇಳೆ ಮೂರನೇ ಮಹಡಿಯಲ್ಲಿ ಒಬ್ಬರು ಮತ್ತು ಐದನೇ ಮಹಡಿಯಲ್ಲಿ ಹತ್ತು ಮಂದಿ ಸೇರಿ ಒಟ್ಟು 11 ಮಂದಿಯ ಮೃತದೇಹಗಳು ಪತ್ತೆಯಾಗಿವೆ. ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಮತ್ತು ಗಾಜಿನ ಚೂರು ತಗುಲಿ 36ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಡಿಯೊ ನೋಡಿ:



ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್‌ ಸರ್ಕ್ಯೂಟ್‌ ಬೆಂಕಿ ಅವಘಡಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಸಿಸಿಟಿವಿ ದೃಶ್ಯಗಳು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದಷ್ಟೇ ಬ್ಯಾಂಕಾಕ್‌ನ ಬಾರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 27ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಇದೀಗ ಮತ್ತೊಂದು ದುರಂತ ಸಂಭವಿಸಿರುವುದು ಥೈಲ್ಯಾಂಡ್‌ನ ವಾಣಿಜ್ಯ ಕಟ್ಟಡಗಳ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿಅವಘಡ: 27 ಮಂದಿ ಸಾವು, 60ಕ್ಕೂ ಅಧಿಕ ಜನರಿಗೆ ಗಾಯ