Tuesday, 10th December 2024

“ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

ಲಾಸ್ ಎಂಜಲಿಸ್(ಯುಎಸ್‌ಎ): ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ “ದಿ ಎಲಿಫೆಂಟ್ ವಿಸ್ಪರರ್ಸ್” ಅತ್ಯುತ್ತಮ ಕಿರು ಸಾಕ್ಷ್ಯಚಿತ್ರವಾಗಿ ಹೊರಹೊಮ್ಮಿದ್ದು, ಪ್ರತಿಷ್ಟಿತ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಈ ವಿಭಾಗದಲ್ಲಿ ಆಸ್ಕರ್ ಪಡೆದ ಭಾರತದ ಮೊದಲ ಸಾಕ್ಷ್ಯಚಿತ್ರ ಎಂಬ ಖ್ಯಾತಿಗೂ ಪಾತ್ರವಾಗಿದೆ.

ಸಾಕ್ಷ್ಯಚಿತ್ರದ ಕಥಾವಸ್ತು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದು ಅನಾಥ ಆನೆಯನ್ನು ದತ್ತು ತೆಗೆದುಕೊಳ್ಳುವ ಕುಟುಂಬದ ಸುತ್ತ ಸುತ್ತುತ್ತದೆ. ಆನೆ ಮರಿಯ ಆರೈಕೆಗಾಗಿ ತಮ್ಮ ಜೀವನ ವನ್ನೇ ಮುಡಿಪಾಗಿಟ್ಟ ದಂಪತಿಯ ಕಥೆ ಇದರಲ್ಲಿದೆ. ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾ ಭಾವ ಸಂಬಂಧವನ್ನು ಮನಸ್ಸಿಗೆ ನಾಟುವಂತೆ ಚಿತ್ರಿಸಲಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಯನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನ ಮಾಡಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಿಸಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಾರ್ತಿಕಿ, ಡಾಕ್ಯುಮೆಂಟರಿ ಮೇಕರ್ ಆಗಿ ಕೂಡ ಕೆಲಸ ಮಾಡಿದ್ದಾರೆ.