Sunday, 15th December 2024

ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ

ಕ್ಯಾಲಿಫೋರ್ನಿಯಾ: ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತಕ್ಕೀಡಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ವತ್ರೆಗೆ ದಾಖಲಿಸಲಾಗಿದೆ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಮಂಗಳವಾರ ಈ ಘಟನೆ ಸಂಭವಿಸಿದೆ. ಕಾರು ಬ್ಲ್ಯಾಕ್‌ಹಾರ್ಸ್ ರಸ್ತೆಯಲ್ಲಿರುವ ಹಾಥಾರ್ನ್ ಬೌಲೆವಾರ್ಡ್‌ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 7.12ರ ಸುಮಾರಿಗೆ ವುಡ್ಸ್​ ಕಾರು ಅಪಘಾತಕ್ಕೀಡಾ ಯಿತು. ಕಾರು ಟೈಗರ್ ವುಡ್ಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಈ ವೇಳೆ ಕಾರಿನಲ್ಲಿದ್ದ ಟೈಗರ್ ವುಡ್ಸ್ ಗಂಭೀರವಾಗಿ ಗಾಯ ಗೊಂಡಿದ್ದರು. ಗಾಯಗೊಂಡ ಟೈಗರ್ ವುಡ್ಸ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವುಡ್ಸ್ ಈ ಹಿಂದೆ 2 ಬಾರಿ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಂಡಿದ್ದರು.

2009ರಲ್ಲಿ ಇದಕ್ಕಿಂತಲೂ ಭೀಕರವಾಗಿ ಅಪಘಾತ ನಡೆದಿತ್ತು.