Thursday, 19th September 2024

ಈಜಿಪ್ಟ್: ರೈಲುಗಳ ಮುಖಾಮುಖಿ ಡಿಕ್ಕಿ, 32 ಮಂದಿ ಸಾವು

ಈಜಿಪ್ಟ್ : ಸೊಹಾಗ್ ನಗರದ ಉತ್ತರ ಭಾಗದಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿಯಾಗಿ 32 ಮಂದಿ ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. 36 ಆಂಬ್ಯುಲೆನ್ಸ್ ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆ ಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

32 ಪ್ರಯಾಣಿಕರು ಮೃತಪಟ್ಟಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಗಾಯಾಳುಗಳ ಸಂಖ್ಯೆ 66ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಮೂರು ಬೋಗಿಗಳು ಹಳಿ ತಪ್ಪಿವೆ.  ಹಳಿಯ ಮೇಲೆ ಬಿದ್ದ ಬೋಗಿಗಳ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *