Tahawwur Rana: 26/11 ಮುಂಬೈ ದಾಳಿ ರೂವಾರಿ ತಹವ್ವುರ್ ರಾಣಾ ಹಸ್ತಾಂತರಕ್ಕೆ ಟ್ರಂಪ್ ಅನುಮೋದನೆ
2008ರ 26/11 ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಶಿಕ್ಷೆಗೊಳಗಾಗಿರುವ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು. ಇದೀಗ ಪ್ರಧಾನಿ ಮೋದಿ ಅಮೆರಿಕ ಭೇಟಿ ವೇಳೆ ಟ್ರಂಪ್ ಈ ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಆಮೂಲಕ ರಾಣಾನನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.

ಮುಂಬೈ ದಾಳಿ ರೂವಾರಿ ತಹವ್ವುರ್ ರಾಣಾ

ವಾಷಿಂಗ್ಟನ್: ಮುಂಬೈ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು (Tahawwur Rana) ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಡೊನಾಲ್ಡ್ ಟ್ರಂಪ್(Donald Trump) ಘೋಷಿಸಿದ್ದಾರೆ. 2008ರ 26/11 ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಶಿಕ್ಷೆಗೊಳಗಾಗಿರುವ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು. ಇದೀಗ ಪ್ರಧಾನಿ ಮೋದಿ ಅಮೆರಿಕ ಭೇಟಿ(Modi-Trump Meet) ವೇಳೆ ಟ್ರಂಪ್ ಈ ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಆಮೂಲಕ ರಾಣಾ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದಾನೆ.
"2008 ರ ಭೀಕರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ, ಸಂಚುಕೋರರಲ್ಲಿ ಒಬ್ಬ (ತಹವ್ವೂರ್ ರಾಣಾ) ಮತ್ತು ವಿಶ್ವದ ಅತ್ಯಂತ ದುಷ್ಟ ಜನರಲ್ಲಿ ಒಬ್ಬನನ್ನು ಭಾರತದಲ್ಲಿ ಕಾನೂನು ಕ್ರಮ ಎದುರಿಸುವಂತೆ ಹಸ್ತಾಂತರಿಸಲು ನನ್ನ ಆಡಳಿತವು ಅನುಮೋದನೆ ನೀಡಿದೆ. ಇದನ್ನು ಘೋಷಿಸಲು ನನಗೆ ಸಂತೋಷವಾಗಿದೆ.ಶೀಘ್ರವೇ ಆತ ಭಾರತಕ್ಕೆ ತೆರಳಲಿದ್ದಾನೆ. ಪ್ರಪಂಚದಾದ್ಯಂತದ ಮೂಲಭೂತವಾದಿ ಇಸ್ಲಾಮಿಕ್ ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸಲು ಭಾರತ ಮತ್ತು ಅಮೆರಿಕ ಹಿಂದೆಂದಿಗಿಂತಲೂ ಉತ್ತಮವಾಗಿ ಒಟ್ಟಾಗಿ ಕೆಲಸ ಮಾಡಲಿವೆ ಎಂದು ಟ್ರಂಪ್ ಹೇಳಿದರು.
Trump announces extradition of Mumbai blast Terrorist Tahawwur Rana to India.
— Kashmiri Hindu (@BattaKashmiri) February 14, 2025
Gurpatwant Panun is next in Line.
Islamists, Khalistanis and Liberals can start crying. pic.twitter.com/ubasqXEL6Z
ಪಾಕಿಸ್ತಾನಿ-ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಹಸ್ತಾಂತರ ಮಾಡಬೇಕು ಎಂದು ಭಾರತ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿತ್ತು. ಇದೀಗ ರಾಣಾ ಭಾರತಕ್ಕೆ ಆಗಮಿಸಲಿದ್ದಾನೆ. ಎನ್ಐಎ ತಂಡವು ಪ್ರಸ್ತುತ ಅಮೆರಿಕದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿದೆ. ವಿದೇಶಾಂಗ ಇಲಾಖೆಯಿಂದ ಅನುಮತಿ ಪತ್ರ ದೊರೆತ ಕೂಡಲೇ ಐಜಿ , ಡಿಐಜಿ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಅಮೆರಿಕಕ್ಕೆ ತೆರಳಲಿದ್ದಾರೆ. ಏತನ್ಮಧ್ಯೆ, ದೆಹಲಿ ಕಾರಾಗೃಹ ಇಲಾಖೆಯು ತಿಹಾರ್ ಜೈಲಿನಲ್ಲಿ ಆತನನ್ನು ಇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆತ ಇರುವ ಸೆಲ್‌ಗೆ ಹೆಚ್ಚಿನ ಭದ್ರತೆ ಒದಗಿ, ಸಿಸಿಟಿವಿಯನ್ನು ಅಳವಡಿಸಲಾಗುತ್ತದೆ. ಸದಾ ಆತನ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಸೆಲ್‌ನಲ್ಲಿಯೇ ಆತನಿಗೆ ಸಂಪೂರ್ಣ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ: PM Modi-Trump Meet: ಟ್ರಂಪ್ ಜೊತೆಗೆ ಔತಣಕೂಟದಲ್ಲಿ ಭಾಗಿಯಾಗಲಿರುವ ಮೋದಿ- ಸಂಜೆ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ
2024ರಲ್ಲಿಯೇ ಭಾರತಕ್ಕೆ ತಹವ್ವುರ್ ಹುಸೇನ್ ರಾಣಾನನ್ನು ಹಸ್ತಾಂತರ ಮಾಡಲಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ ಈ ಪ್ರಕ್ರಿಯೆಗಳನ್ನು ಕೈಗೊಳ್ಳಲು ಅಮೆರಿಕ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿರಲಿಲ್ಲ. ಸೆಪ್ಟೆಂಬರ್‌ನಲ್ಲಿ ಗಡಿಪಾರು ಮಾಡದಂತೆ ಕೋರಿ ತಹವ್ವುರ್ ಹುಸೇನ್ ರಾಣಾ ಸಲ್ಲಿಕೆ ಮಾಡಿದ್ದ ಮನವಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಹಸ್ತಾಂತರ ಮಾಡಲು ಅವಕಾಶವಿದೆ ಎಂದು ಹೇಳಿತ್ತು.
2008 ರಲ್ಲಿ ಮುಂಬೈನ ತಾಜ್ ಹೋಟೆಲ್ ಮೇಲೆ ನಡೆದ ದಾಳಿಯಲ್ಲಿ 166 ಜನ ಅಮಾಯಕರು ಜೀವ ಬಿಟ್ಟಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವನ್ನು ಹೊತ್ತಿದ್ದಾನೆ. ದಾಳಿಯ ಹಿಂದಿನ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬನಾಗಿದ್ದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.