ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Israel-Iran Conflict: ಇಸ್ರೇಲ್‌ -ಇರಾನ್‌ ಯುದ್ಧಕ್ಕೆ ಎಂಟ್ರಿ ಕೊಟ್ಟೇ ಬಿಡ್ತು ಅಮೆರಿಕ; ಇರಾನ್‌ನ 3 ಪರಮಾಣು ನೆಲೆಗಳ ಮೇಲೆ ದಾಳಿ

ಇಸ್ರೇಲ್-ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದೆ. ಅಮೆರಿಕ ನಿನ್ನೆ ತಡರಾತ್ರಿ ಇರಾನ್ ನ 3 ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ಕುರಿತು ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಪರಮಾಣು ತಾಣಗಳ ಮೇಲೆ ಅಮೆರಿಕದ ಪಡೆಗಳು ಸಂಘಟಿತ ವೈಮಾನಿಕ ದಾಳಿಗಳನ್ನು ನಡೆಸಿವೆ.

ಇಸ್ರೇಲ್-ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದೆ. ಅಮೆರಿಕ ನಿನ್ನೆ ತಡರಾತ್ರಿ ಇರಾನ್ ನ 3 ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ಕುರಿತು ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಪರಮಾಣು ತಾಣಗಳ ಮೇಲೆ ಅಮೆರಿಕದ ಪಡೆಗಳು ಸಂಘಟಿತ ವೈಮಾನಿಕ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮೂಲಕ ಕದನ ಮೈದಾನಕ್ಕೆ ಅಮೆರಿಕ ಧುಮುಕಿದೆ. ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆಗಳು ಮತ್ತು ಕ್ಷಿಪಣಿ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನೇತೃತ್ವದ ದಾಳಿಗಳು ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ನಂತರ, ಅಮೆರಿಕ ಈ ದಾಳಿಯನ್ನು ನಡೆಸಿದೆ.

ದಾಳಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರಂಪ್‌ ನಾವು ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ". "ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಇವೆ. ಬಾಂಬ್‌ಗಳ ಸಂಪೂರ್ಣ ಪೇಲೋಡ್ ಅನ್ನು ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಬೀಳಿಸಲಾಯಿತು. ನಮ್ಮ ಸೈನಿಕರ ಶೌರ್ಯಕ್ಕೆ ದೊಡ್ಡ ಸಲಾಂ. ಜಗತ್ತಿನಲ್ಲಿ ಬೇರೆ ಯಾವುದೇ ಸೈನ್ಯವು ಇದನ್ನು ಮಾಡಲು ಸಾಧ್ಯವಿಲ್ಲ. ಈಗ ಶಾಂತಿಯ ಸಮಯ ಎಂದು ಟ್ರಂಪ್‌ ಬರೆದಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಅವರು "ಇರಾನ್‌ನಲ್ಲಿ ನಮ್ಮ ಅತ್ಯಂತ ಯಶಸ್ವಿ ಮಿಲಿಟರಿ ಕಾರ್ಯಾಚರಣೆಯ ಕುರಿತು ನಾನು ರಾತ್ರಿ 10:00 ಗಂಟೆಗೆ ಶ್ವೇತಭವನದಲ್ಲಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತೇನೆ. ಇದು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ, ಇಸ್ರೇಲ್ ಮತ್ತು ಪ್ರಪಂಚಕ್ಕೆ ಒಂದು ಐತಿಹಾಸಿಕ ಕ್ಷಣವಾಗಿದೆ. ಇರಾನ್ ಈಗ ಈ ಯುದ್ಧವನ್ನು ಕೊನೆಗೊಳಿಸಲು ಒಪ್ಪಿಕೊಳ್ಳಬೇಕು. ಧನ್ಯವಾದಗಳು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Operation Sindhu: ಇರಾನ್‌ನಿಂದ ದಿಲ್ಲಿಗೆ ಬಂದಿಳಿದ 310 ಭಾರತೀಯರು; ಒಟ್ಟು 827 ಮಂದಿ ತಾಯ್ನಾಡಿಗೆ ವಾಪಸ್‌

ಪ್ರಾಥಮಿಕ ವರದಿಗಳ ಪ್ರಕಾರ, ದಾಳಿ ನಡೆಸಲು ಎರಡು ಬಿ2 ಬಾಂಬರ್ ವಿಮಾನಗಳನ್ನು ಬಳಸಲಾಗಿದೆ. ಇತ್ತೀಚಿನ ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಇರಾನ್ ವಿರುದ್ಧ ಅಮೆರಿಕ ಈ ಮದ್ದುಗುಂಡುಗಳನ್ನು ಬಳಸುತ್ತಿರುವುದು ಇದೇ ಮೊದಲು. ಕಾರ್ಯಾಚರಣೆಯ ಹಿಂದಿನ ರಾತ್ರಿ ದೂರವಾಣಿ ಕರೆಯ ಸಮಯದಲ್ಲಿ ಟ್ರಂಪ್ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಯೋಜಿತ ದಾಳಿಗಳ ಬಗ್ಗೆ ವೈಯಕ್ತಿಕವಾಗಿ ಮಾಹಿತಿ ನೀಡಿದರು ಎಂದು ಅಮೆರಿಕದ ಮಾಧ್ಯಮ ವರದಿಗಳು ತಿಳಿಸಿವೆ.