Saturday, 23rd November 2024

ಇಬ್ಬರು ಅಫ್ಘಾನ್ ಮಹಿಳಾ ನ್ಯಾಯಮೂರ್ತಿಗಳ ಗುಂಡಿಕ್ಕಿ ಹತ್ಯೆ

ಕಾಬೂಲ್: ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಫಘಾನ್ ಮಹಿಳಾ ನ್ಯಾಯಮೂರ್ತಿಗಳನ್ನು ಬಂದೂಕು ಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ.

ತಾಲಿಬಾನ್ ಮತ್ತು ಸರ್ಕಾರದ ನಡುವೆ ಶಾಂತಿ ಮಾತುಕತೆ ನಡೆಯುತ್ತಿದ್ದರೂ ಇತ್ತೀ#Supreಚಿನ ತಿಂಗಳುಗಳಲ್ಲಿ ಅಫ್ಘಾನಿಸ್ತಾನ ದಾದ್ಯಂತ ಹಿಂಸಾಚಾರ ಹೆಚ್ಚಾಗಿದ್ದು, ಇದು ನ್ಯಾಯಮೂರ್ತಿಗಳನ್ನೇ ಹತ್ಯೆ ಮಾಡಲಾಗಿದೆ. ಬೆಳಗ್ಗೆ ಈ ಘಟನೆ ಸಂಭವಿಸಿದೆ.

ವಿಶೇಷವಾಗಿ ಕಾಬೂಲ್‌ನಲ್ಲಿ, ಉನ್ನತ ಮಟ್ಟದ ವ್ಯಕ್ತಿಗಳನ್ನು ಗುರಿಯಾಗಿಟ್ಟುಕೊಂಡು ಹತ್ಯೆ ಮಾಡುವ ಪ್ರವೃತ್ತಿ ಹೆಚ್ಚುತ್ತಿರು ವುದು ಆತಂಕಕ್ಕೆ ಕಾರಣವಾಗಿದೆ.

ನ್ಯಾಯಾಲಯದ ವಾಹನದಲ್ಲಿ ತಮ್ಮ ಕಚೇರಿಗೆ ಹೋಗುತ್ತಿದ್ದ ಸಮಯದಲ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ಬಂದೂಕುಧಾರಿ ಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ವಕ್ತಾರ ಅಹ್ಮದ್ ಫಾಹಿಮ್ ಖವೀಮ್ ಹೇಳಿದ್ದಾರೆ.

ಸುಪ್ರೀಂಕೋರ್ಟ್​ನಲ್ಲಿ ನ್ಯಾಯಮೂರ್ತಿಗಳು ಸೇರಿದಂತೆ ವಿವಿಧ ಉನ್ನತ ಹುದ್ದೆಗಳಿಗೆ 200ಕ್ಕೂ ಹೆಚ್ಚು ಮಹಿಳೆಯ ರನ್ನು ನೇಮಕ ಮಾಡಿಕೊಳ್ಳಲಾಗಿದೆ.

2017ರ ಫೆಬ್ರುವರಿಯಲ್ಲಿ ನ್ಯಾಯಾಲಯದ ನೌಕರರ ಗುಂಪಿನಲ್ಲಿ ಸೇರಿಕೊಂಡು ಆತ್ಮಾಹುತಿ ಬಾಂಬ್ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ 20ಕ್ಕೂ ಅಧಿಕ ನೌಕರರು ಮೃತಪಟ್ಟಿದ್ದರು. 50ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದವು.