ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಫ್ಲೈದುಬೈ ಕಾಕ್‌ಪಿಟ್ ದಾಳಿ: ಪ್ರಯಾಣಿಕರ ಪ್ರಾಣ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ಯುಎಇ ಅತ್ಯುನ್ನತ ನಾಗರಿಕ ಗೌರವ

ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರವು ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ನಡೆದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಪ್ರತಿಮ ಸಾಹಸ ಪ್ರದರ್ಶಿಸಿದ ಭಾರತೀಯ ಮೂಲದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಮತ್ತು ಅವರ ಸಿಬ್ಬಂದಿ ವರ್ಗಕ್ಕೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ.

ಸಂಗ್ರಹ ಚಿತ್ರ

ರಿಯಾದ್‌: ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರವು ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ (Flydubai cockpit attack) ನಡೆದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಪ್ರತಿಮ ಸಾಹಸ ಪ್ರದರ್ಶಿಸಿದ ಭಾರತೀಯ ಮೂಲದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ (Captain Smit Machchhar) ಮತ್ತು ಅವರ ಸಿಬ್ಬಂದಿ ವರ್ಗಕ್ಕೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. ತೀವ್ರವಾಗಿ ಗಾಯಗೊಂಡಿದ್ದರೂ ಸಹ ಸಮಯಪ್ರಜ್ಞೆ ಮೆರೆದು ಪ್ರಯಾಣಿಕರ ಪ್ರಾಣ ಉಳಿಸಿದ ಕ್ಯಾಪ್ಟನ್ ಮಚ್ಚಾರ್ ಅವರ ಧೈರ್ಯಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಯುಎಇ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಮತ್ತು ಅವರ ಸಿಬ್ಬಂದಿಗೆ 'ಫಸ್ಟ್ ಕ್ಲಾಸ್ ಆರ್ಡರ್ ಆಫ್ ಜಾಯೆದ್ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ದುಬೈನ ಕ್ರೌನ್ ಪ್ರಿನ್ಸ್ ಹಾಗೂ ಯುಎಇ ರಕ್ಷಣಾ ಸಚಿವರಾದ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರು ಇದನ್ನು ಪ್ರದಾನ ಮಾಡಿದರು.



ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ದುಬೈ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಅವರು ವೈಯಕ್ತಿಕವಾಗಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. "ಮಾನವ ಜೀವಗಳ ರಕ್ಷಣೆಗಾಗಿ ಮಚ್ಚಾರ್ ಅವರು ತೋರಿದ ಜವಾಬ್ದಾರಿ ಮತ್ತು ಧೈರ್ಯ ಅತ್ಯಂತ ಶ್ರೇಷ್ಠವಾದುದು" ಎಂದು ಹಮ್ದಾನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

ಕಳೆದ ಸೆಪ್ಟೆಂಬರ್ 30 ರಂದು ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಭೀಕರ ದಾಳಿ ನಡೆದಿತ್ತು. ಈ ಘಟನೆಯಲ್ಲಿ ವಿಮಾನದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಆದಾಗ್ಯೂ, ಅದ್ಭುತ ಧೈರ್ಯ ತೋರಿದ ಅವರು ತೀವ್ರ ರಕ್ತಸ್ರಾವದ ನಡುವೆಯೂ ಕಾಕ್‌ಪಿಟ್‌ನ ಬಾಗಿಲನ್ನು ತೆರೆಯುವಲ್ಲಿ ಯಶಸ್ವಿಯಾದರು. ಇದರಿಂದಾಗಿ ವಿಮಾನದ ಇತರ ಸಿಬ್ಬಂದಿ ಮತ್ತು ಪ್ರಯಾಣಿಕರು ತಕ್ಷಣವೇ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಯಿತು.

ಇಸ್ರೇಲ್ ಸ್ವಾತಂತ್ರ್ಯೋತ್ಸವಕ್ಕೆ ನರೇಂದ್ರ ಮೋದಿ, ಕ್ಯಾಪ್ಟನ್‌ ಸ್ಮಿತ್‌ ಮಚ್ಚಾರ್‌ಗೆ ಆಹ್ವಾನ ನೀಡಿದ ಬೆಂಜಮಿನ್ ನೆತನ್ಯಾಹು

ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ಫ್ಲೈದುಬೈ ವಿಮಾನದಲ್ಲಿ ತೋರಿದ ಅಪ್ರತಿಮ ಸಾಹಸ ಮತ್ತು ಸಮಯಪ್ರಜ್ಞೆಯನ್ನು ಜಾಗತಿಕ ಮಟ್ಟದ ಪ್ರಮುಖ ನಾಯಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದರೂ ಸಹ ಪ್ರಯಾಣಿಕರ ಸುರಕ್ಷತೆಗಾಗಿ ಅವರು ತೋರಿದ ಧೈರ್ಯಕ್ಕೆ ಜಗತ್ತಿನಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಪೈಲಟ್ ಮಚ್ಚಾರ್ ಅವರ ಅಸಾಧಾರಣ ಧೈರ್ಯವನ್ನು ಶ್ಲಾಘಿಸಿದ್ದಾರೆ. ಇದರೊಂದಿಗೆ ಇಸ್ರೇಲ್ ಸರ್ಕಾರವು ಅವರಿಗೆ ವಿಶೇಷ ನಾಗರಿಕ ಶೌರ್ಯ ಪ್ರಶಸ್ತಿಯನ್ನು ಘೋಷಿಸಿದ್ದು, ಮಚ್ಚಾರ್ ಅವರು ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾದ ನಂತರ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದೆ.

Vishakha Bhat Heggar

View all posts by this author