ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Israel-Iran Conflict: ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ; ಟೆಲ್‌ ಅವೀವ್‌ನಲ್ಲಿರುವ ಅಮೆರಿಕದ ರಾಯಭಾರಿ ಕೇಚೇರಿ ಧ್ವಂಸ

ಇಸ್ರೇಲ್ ಜೊತೆಗಿನ ಮಿಲಿಟರಿ ಸಂಘರ್ಷ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಟೆಲ್ ಅವೀವ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇಸ್ರೇಲ್‌ನಲ್ಲಿ ಅಮೆರಿಕದ ರಾಯಭಾರಿಯಾಗಿರುವ ಮೈಕ್ ಹಕಬೀ ಅವರು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಟೆಲ್‌ ಅವಿವ್‌: ಇಸ್ರೇಲ್ ಜೊತೆಗಿನ ಮಿಲಿಟರಿ ಸಂಘರ್ಷ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಟೆಲ್ ಅವೀವ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇಸ್ರೇಲ್‌ನಲ್ಲಿ ಅಮೆರಿಕದ ರಾಯಭಾರಿಯಾಗಿರುವ ಮೈಕ್ ಹಕಬೀ ಅವರು ಸಾಮಾಜಿಕ ಮಾಧ್ಯಮದಲ್ಲಿ, "ಇರಾನ್ ಹಾಕಿದ ಕ್ಷಿಪಣಿಯೊಂದು ಕಚೇರಿಯ ಸಮೀಪದಲ್ಲಿ ಅಪ್ಪಳಿಸಿದ ನಂತರ ಬಳಿ ಸಣ್ಣಪುಟ್ಟ ಹಾನಿ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಅಮೇರಿಕನ್ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಘಟನೆಯ ಬಳಿಕ ರಾಯಭಾರ ಕಚೇರಿ ಮತ್ತು ಅದರ ದೂತಾವಾಸವನ್ನು ಇಂದು ಮುಚ್ಚಲ್ಪಟ್ಟಿದೆ. ಇಸ್ರೇಲ್ ಮತ್ತು ಇರಾನ್ ಪರಸ್ಪರ ಭಾನುವಾರ ರಾತ್ರಿ ಮತ್ತು ಸೋಮವಾರ ಮುಂಜಾನೆ ಕೂಡ ಡ್ರೋನ್‌ ಹಾಗೂ ಕ್ಷಿಪಣಿಗಳ ಮೂಲಕ ದಾಳಿ ನಡೆಸುತ್ತಲೇ ಇವೆ. ಒಂದು ದಿನದ ಹಿಂದೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಅಮೆರಿಕದ ಯಾವುದೇ ಆಸ್ತಿಗಳ ಮೇಲೆ ದಾಳಿ ಮಾಡದಂತೆ ಎಚ್ಚರಿಕೆ ನೀಡಿದ್ದರು , ಹಾಗೆ ಮಾಡಿದರೆ ಇರಾನ್‌ನನ್ನು ಸಂಪೂರ್ಣ ನಾಶ ಪಡಿಸುವುದಾಗಿ ಹೇಳಿದ್ದರು.

ಇರಾನ್ ಮೇಲಿನ ದಾಳಿಗೂ ಅಮೆರಿಕಕ್ಕೂ ಯಾವುದೇ ಸಂಬಂಧವಿಲ್ಲ. ಇರಾನ್ ನಮ್ಮ ಮೇಲೆ ಯಾವುದೇ ರೀತಿಯಲ್ಲಿ, ರೂಪದಲ್ಲಿ ಅಥವಾ ಯಾವುದೇ ರೀತಿಯಲ್ಲಿ ದಾಳಿ ಮಾಡಿದರೆ, ಅಮೆರಿಕದ ಸಶಸ್ತ್ರ ಪಡೆಗಳ ಸಂಪೂರ್ಣ ಶಕ್ತಿ ಮತ್ತು ಬಲವು ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಮ್ಮ ಮೇಲೆ ದಾಳಿ ಮಾಡುತ್ತೇವೆ ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದರು. . ಆದಾಗ್ಯೂ, ನಾವು ಇರಾನ್ ಮತ್ತು ಇಸ್ರೇಲ್ ಸುಲಭವಾಗಿ ಕದನ ವಿರಾಮಕ್ಕೆ ಒಪ್ಪಿಕೊಳ್ಳಬಹುದು ಎಂದು ಟ್ರಂಪ್ ಶನಿವಾರ ಟ್ರೂತ್ ಸೋಶಿಯಲ್‌ ಮೀಡಿಯಾದಲ್ಲಿ ಹೇಳಿದ್ದರು.

ಈ ಸುದ್ದಿಯನ್ನೂ ಓದಿ: Israel-Iran Conflict: ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಉಡೀಸ್‌; ಇರಾನ್‌-ಇಸ್ರೇಲ್‌ ಡೆಡ್ಲಿ ಅಟ್ಯಾಕ್‌ ವಿಡಿಯೊ ವೈರಲ್‌

ಇಸ್ರೇಲ್ ಪರಮಾಣು ಕ್ಷಿಪಣಿಗಳನ್ನು ಬಳಸಿದರೆ, ನಾವು ಪರಮಾಣು ಶಸ್ತ್ರಾಸ್ತ್ರಗಳಿಂದ ದಾಳಿ ಮಾಡುತ್ತೇವೆ ಎಂದು ಪಾಕಿಸ್ತಾನ ನಮಗೆ ತಿಳಿಸಿದೆ" ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಜನರಲ್ ಮತ್ತು ಇರಾನಿನ ರಾಷ್ಟ್ರೀಯ ಭದ್ರತಾ ಮಂಡಳಿಯ ಸದಸ್ಯ ಮೊಹ್ಸೆನ್ ರೆಜೈ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಶುಕ್ರವಾರದಿಂದಲೂ ನಡೆಯುತ್ತಿರುವ ದಾಳಿಯಲ್ಲಿ ಈ ವರೆಗೂ 224 ಜನರು ಮೃತಪಟ್ಟಿದ್ದಾರೆ. ಇರಾನ್‌ನ ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಜೂನ್ 13 ರಂದು 'ಆಪರೇಷನ್ ರೈಸಿಂಗ್ ಲಯನ್' ಅನ್ನು ಪ್ರಾರಂಭಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಇರಾನ್ 'ಆಪರೇಷನ್ ಟ್ರೂ ಫ್ರೀಡಂ 3' ಎಂಬ ಸಂಕೇತನಾಮದೊಂದಿಗೆ ಪ್ರತಿದಾಳಿ ನಡೆಸಿತು.

Vishakha Bhat Heggar

View all posts by this author