ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

7 ನೇ ದಿನಕ್ಕೆ ಕಾಲಿಟ್ಟ ಇರಾನ್‌- ಇಸ್ರೇಲ್‌ ಯುದ್ಧ; ಅಬುಧಾಬಿ, ದುಬೈನಲ್ಲಿ ಭಾರೀ ಸ್ಫೋಟ

ಇರಾನ್ ವಿರುದ್ಧ ಅಮೆರಿಕ-ಇಸ್ರೇಲಿ ಯುದ್ಧವು 7 ನೇ ದಿನಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದ ಎರಡೂ ದೇಶಗಳ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಹೊಸ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಇಸ್ರೇಲಿ ಪಡೆಗಳು ಲೆಬನಾನ್‌ನಲ್ಲಿರುವ ಹೆಜ್ಬೊಲ್ಲಾ ಸ್ಥಳಗಳ ಮೇಲೆ ದಾಳಿ ನಡೆಸಿದವು.

ಸಂಗ್ರಹ ಚಿತ್ರ

ಟೆಹ್ರಾನ್:‌ ಇರಾನ್ ವಿರುದ್ಧ ಅಮೆರಿಕ-ಇಸ್ರೇಲಿ ಯುದ್ಧವು 7 ನೇ ದಿನಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದ ಎರಡೂ ದೇಶಗಳ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಹೊಸ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಇಸ್ರೇಲಿ (US-Israel Attacks on Iran) ಪಡೆಗಳು ಲೆಬನಾನ್‌ನಲ್ಲಿರುವ ಹೆಜ್ಬೊಲ್ಲಾ ಸ್ಥಳಗಳ ಮೇಲೆ ದಾಳಿ ನಡೆಸಿದವು. ಯುದ್ಧ ಆರಂಭವಾದಾಗಿನಿಂದ ಇರಾನ್‌ನಲ್ಲಿ 1,230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಲೆಬನಾನ್‌ನಲ್ಲಿ 70 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, ಇಸ್ರೇಲ್‌ನಲ್ಲಿ ಸುಮಾರು ಒಂದು ಡಜನ್ ಜನರು ಸಾವನ್ನಪ್ಪಿದ್ದಾರೆ ಮತ್ತು ಆರು ಅಮೇರಿಕನ್ ಸೈನಿಕರು ಸಹ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇರಾನ್‌ನ ಅಣು ಕಾರ್ಯಕ್ರಮ ಮತ್ತು ಮಧ್ಯಪ್ರಾಚ್ಯದಲ್ಲಿ ಅದರ ಪ್ರಭಾವವನ್ನು ತಡೆಯುವ ಉದ್ದೇಶದಿಂದ ಅಮೆರಿಕಾ ಮತ್ತು ಇಸ್ರೇಲ್ ಫೆಬ್ರವರಿ 28ರಂದು ದಾಳಿ ಆರಂಭಿಸಿತ್ತು. ಇರಾನ್ ಸುಪ್ರೀಮ್ ಲೀಡರ್ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಹಲವು ನಾಯಕರನ್ನು ಹತ್ಯೆ ಮಾಡಲಾಯಿತು. ಇರಾನ್‌ನ ಅಣು ಸೌಲಭ್ಯಗಳು, ಮಿಲಿಟರಿ ಬೇಸ್‌ಗಳು ಮತ್ತು ಕ್ಷಿಪಣಿ ವ್ಯವಸ್ಥೆಗಳನ್ನು ಧ್ವಂಸ ಮಾಡಲಾಯಿತು. ಇದಕ್ಕೆ ಪ್ರತಿಯಾಗಿ ಇರಾನ್ ಇಸ್ರೇಲ್ ಮತ್ತು ಅಮೆರಿಕಾ ಬೆಂಬಲಿತ ಗಲ್ಫ್ ದೇಶಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ತೀವ್ರಗೊಳಿಸಿದೆ.

ಶುಕ್ರವಾರ ಮುಂಜಾನೆ ಇಸ್ರೇಲ್ ಟೆಹ್ರಾನ್‌ನಲ್ಲಿ 'ಆಡಳಿತ ಮೂಲಸೌಕರ್ಯ'ಗಳ ಮೇಲೆ ದಾಳಿ ನಡೆಸಿದೆ. ಇದು ಇರಾನ್ ಸರ್ಕಾರವನ್ನು ದುರ್ಬಲಗೊಳಿಸುವ ಉದ್ದೇಶ ಹೊಂದಿದೆ. ನ್ಯಾಟೋ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣೆಯನ್ನು ಬಲಪಡಿಸಿದೆ. ಇರಾನ್‌ನಲ್ಲಿ ಸುಪ್ರೀಮ್ ಲೀಡರ್ ಸಾವಿನ ನಂತರ ಪ್ರತಿಭಟನೆಗಳು ಹೆಚ್ಚಾಗಿವೆ. ಗಲ್ಫ್ ರಾಷ್ಟ್ರಗಳ ಮೇಲೆ ಪ್ರತೀಕಾರದ ದಾಳಿಗಳು ಮುಂದುವರೆದಂತೆ, ದುಬೈ ಮತ್ತು ಬಹ್ರೇನ್‌ನ ರಾಜಧಾನಿ ಮನಾಮದಲ್ಲಿ ಸ್ಫೋಟಗಳು ಕೇಳಿಬಂದಿವೆ ಎಂದು ತಿಳಿದು ಬಂದಿದೆ. ಹ್ರೇನ್‌ನ ಆಂತರಿಕ ಸಚಿವಾಲಯವು ಎಚ್ಚರಿಕೆಯ ಸೈರನ್‌ಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಘೋಷಿಸಿತು ಮತ್ತು ನಾಗರಿಕರು ಮತ್ತು ನಿವಾಸಿಗಳು ಶಾಂತವಾಗಿರಲು, ಹತ್ತಿರದ ಸುರಕ್ಷಿತ ಸ್ಥಳಕ್ಕೆ ತೆರಳಲು ಒತ್ತಾಯಿಸಿದೆ.

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷ ಪರಿಹಾರವಲ್ಲ: ಇರಾನ್‌-ಇಸ್ರೇಲ್‌ ಯುದ್ಧದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಯುಎಇಯ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನಿನ ಡ್ರೋನ್ ಸ್ಫೋಟಗೊಂಡಿದ್ದು, ದುಬೈಗೆ ತೆರಳುತ್ತಿದ್ದ ಹಲವಾರು ವಿಮಾನಗಳನ್ನು ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ. ಇರಾನ್ ಕ್ಷಿಪಣಿ ಎಚ್ಚರಿಕೆಯ ನಂತರ ಇಸ್ರೇಲ್ ರಾಜಧಾನಿ ಜೆರುಸಲೆಮ್‌ನಲ್ಲಿ ಸ್ಫೋಟಗಳು ಸಂಭವಿಸಿವೆ ಎಂದು ವರದಿಯಾಗಿದೆ. ಪ್ರತಿದಾಳಿಯಾಗಿ ಇಸ್ರೇಲಿ ಪಡೆಗಳು ಶನಿವಾರ ಟೆಹ್ರಾನ್ ಮೇಲೆ ದಾಳಿ ಮಾಡಿದ್ದು, ರಾಜಧಾನಿಯ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಇತರ ಭಾಗಗಳಲ್ಲಿ ಸ್ಫೋಟಗಳು ಸಂಭವಿಸಿವೆ ಎಂದು ವರದಿಯಾಗಿದೆ.

Vishakha Bhat Heggar

View all posts by this author