ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Kash Patel: ಅಮೆರಿಕದ FBI ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್‌ ಪಟೇಲ್‌ ನೇಮಕ

ಅಮೆರಿಕದ ತನಿಖಾ ಸಂಸ್ಥೆ ಫೆಡರಲ್‌ ಬ್ಯುರೋ ಆಫ್‌ ಇನ್‌ವೆಸ್ಟಿಗೇಷನ್‌ ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್‌ ಪಟೇಲ್‌ ನೇಮಕಗೊಂಡಿದ್ದಾರೆ. ಸೆನೆಟ್‌ನಲ್ಲಿ ನಿರ್ದೇಶಕರ ಪ್ರಕ್ರಿಯೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪಟೇಲ್‌ ಪರವಾಗಿ ಅವರ ನಾಮನಿರ್ದೇಶನದ ಪರವಾಗಿ 51 ಮತಗಳು ಬಂದರೆ, ವಿರೋಧವಾಗಿ 49 ಮತಗಳು ಚಲಾವಣೆಯಾಗಿವೆ.

ಅಮೆರಿಕದ FBI ನಿರ್ದೇಶಕರಾಗಿ ಕಾಶ್‌ ಪಟೇಲ್‌ ನೇಮಕ

ಕಾಶ್‌ ಪಟೇಲ್‌

Profile Vishakha Bhat Feb 21, 2025 8:22 AM

ವಾಷಿಂಗ್ಟನ್‌: ಅಮೆರಿಕದಲ್ಲಿ ಟ್ರಂಪ್‌ (Donald trump) ಅಧಿಕಾರ ವಹಿಸಿಕೊಂಡ ಬಳಿಕ ಸಂಪುಟದಲ್ಲಿ ಭಾರತೀಯರಿಗೆ ಹೆಚ್ಚಿನ ಸ್ಥಾನ ಲಭಿಸುತ್ತಿದೆ. ಇದೀಗ ಅಮೆರಿಕದ ತನಿಖಾ ಸಂಸ್ಥೆ ಫೆಡರಲ್‌ ಬ್ಯುರೋ ಆಫ್‌ ಇನ್‌ವೆಸ್ಟಿಗೇಷನ್‌ ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್‌ ಪಟೇಲ್‌ ನೇಮಕಗೊಂಡಿದ್ದಾರೆ. ಪಟೇಲ್‌ ಮೊದಲಿನಿಂದಲೂ ಟ್ರಂಪ್‌ ಅವರ ಜೊತೆ ಗುರುತಿಸಿಕೊಂಡಿದ್ದಾರೆ. ಸೆನೆಟ್‌ನಲ್ಲಿ ನಿರ್ದೇಶಕರ ಪ್ರಕ್ರಿಯೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪಟೇಲ್‌ ಅವರ ನಾಮನಿರ್ದೇಶನದ ಪರವಾಗಿ 51 ಮತಗಳು ಬಂದರೆ, ವಿರೋಧವಾಗಿ 49 ಮತಗಳು ಚಲಾವಣೆಯಾಗಿವೆ. ಎಫ್‌ಬಿಐನ 9 ನೇ ನಿರ್ದೇಶಕರಾಗಿ ಕಾಶ್‌ ಪಟೇಲ್‌ (Kash Patel) ಅವರನ್ನು ನೇಮಕಗೊಳಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದಾರೆ ಎಂದು ಅಮೆರಿಕ ಸೆನೆಟ್‌ ತಿಳಿಸಿದೆ.

ಕಾಶ್ ಪಟೇಲ್ ಅಮೆರಿಕದ ಪ್ರತಿಷ್ಠಿತ ಎಫ್‌ಬಿಐನ ಮೊದಲ ಭಾರತೀಯ ಮೂಲದ ನಿರ್ದೇಶಕ ಎಂದೆನಿಸಿಕೊಳ್ಳಲಿದ್ದಾರೆ. ಕ್ರಿಸ್ಟೋಫರ್ ವ್ರೇ ಅವರ ನಂತರ ಕಾಶ್ ಪಟೇಲ್ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಟ್ರಂಪ್‌ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಇವರು 2017 ರಲ್ಲಿ ಹೌಸ್ ಇಂಟೆಲಿಜೆನ್ಸ್ ಕಮಿಟಿಗೆ ಭಯೋತ್ಪಾದನಾ ನಿಗ್ರಹದ ಹಿರಿಯ ವಕೀಲರಾಗಿ ನೇಮಕಗೊಂಡಿದ್ದಾರೆ. 2016 ರ ಚುನಾವಣೆಯಲ್ಲಿ ರಷ್ಯಾದ ಹಸ್ತಕ್ಷೇಪದ ಬಗ್ಗೆ ರಿಪಬ್ಲಿಕನ್ ನೇತೃತ್ವದ ತನಿಖೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.



ಯಾರು ಕಾಶ್‌ ಪಟೇಲ್‌?

1980ರ ಫೆಬ್ರವರಿ 25ರಂದು ನ್ಯೂಯಾರ್ಕ್‌ಗೆ ಪೂರ್ವ ಆಫ್ರಿಕಾದಿಂದ ವಲಸೆ ಬಂದ ಗುಜರಾತ್ ನ ವಡೋದರ ಮೂಲದ ದಂಪತಿಯ ಮಗನಾಗಿ ಜನಿಸಿದ ಕಾಶ್ ಪಟೇಲ್ ಅವರ ಮೂಲ ಹೆಸರು ಕಶ್ಯಪ್‌ ಪಟೇಲ್‌. ರಿಚ್ಮಂಡ್ ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರ್ವ ಅಧ್ಯಯನವನ್ನು ಪೂರ್ಣಗೊಳಿಸಿದ ಅವರು ಯೂನಿವರ್ಸಿಟಿ ಕಾಲೇಜ್ ಲಂಡನ್ ನಲ್ಲಿ ಕಾನೂನು ಪದವಿಯನ್ನು ಪಡೆದರು.

ವೃತ್ತಿ ಜೀವನದ ಆರಂಭದಲ್ಲಿ ಉನ್ನತ ಕಾನೂನು ಸಂಸ್ಥೆಗಳಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸುವಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ ಕಾಶ್, ಸುಮಾರು ಒಂಬತ್ತು ವರ್ಷಗಳ ಕಾಲ ಮಿಯಾಮಿ ನ್ಯಾಯಾಲಯಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Modi US Visit : ಅಮೆರಿಕದಲ್ಲಿ ಮೋದಿ; ಡಿಎನ್‌ಐ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಜೊತೆ ಮಾತುಕತೆ

FBI ಎಂಬುದು ಗುಪ್ತಚರ-ಚಾಲಿತ ಮತ್ತು ಬೆದರಿಕೆ-ಕೇಂದ್ರಿತ ರಾಷ್ಟ್ರೀಯ ಭದ್ರತಾ ಸಂಸ್ಥೆಯಾಗಿದ್ದು, ಗುಪ್ತಚರ ಮತ್ತು ಕಾನೂನು ಜಾರಿ ಜವಾಬ್ದಾರಿಗಳನ್ನು ಹೊಂದಿದೆ. ಇದು ಅಮೆರಿಕ ನ್ಯಾಯ ಇಲಾಖೆಯ ಪ್ರಮುಖ ತನಿಖಾ ವಿಭಾಗವಾಗಿದೆ. FBI ಅದಕ್ಕೆ ನಿಯೋಜಿಸಲಾದ ನಿರ್ದಿಷ್ಟ ಅಪರಾಧಗಳನ್ನು ತನಿಖೆ ಮಾಡುವ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳಿಗೆ ಫಿಂಗರ್‌ಪ್ರಿಂಟ್ ಗುರುತಿಸುವಿಕೆ, ಪ್ರಯೋಗಾಲಯ ಪರೀಕ್ಷೆಗಳು ಮತ್ತು ತರಬೇತಿಯಂತಹ ಸಹಕಾರಿ ಸೇವೆಗಳನ್ನು ಒದಗಿಸುವ ಅಧಿಕಾರ ಮತ್ತು ಜವಾಬ್ದಾರಿಯನ್ನು ಹೊಂದಿದೆ.