ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Train Hijack: ಪಾಕ್‌ ಎಕ್ಸ್‌ಪ್ರೆಸ್‌ ರೈಲು ಹೈಜಾಕ್‌ ; ಟ್ರೈನ್‌ ನಿಂತಿರುವ ಸುರಂಗದ ವಿಡಿಯೋ ಫುಲ್‌ ವೈರಲ್‌

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಮಂಗಳವಾರ 450ಕ್ಕೂ ಹೆಚ್ಚು ಪ್ರಯಾಣಿಕರಿದ್ದ ರೈಲನ್ನು ಉಗ್ರರು ಹೈಜಾಕ್‌ ಮಾಡಿದ್ದಾರೆ. ಇದೀಗ ಸುರಂಗದ ವೀಡಿಯೊವನ್ನು ಹಂಚಿಕೊಂಡಿರುವ ಸ್ಥಳೀಯ ಮಾಧ್ಯಮ, ಪಾಕಿಸ್ತಾನಿ ಹೆಲಿಕಾಪ್ಟರ್‌ಗಳು ಸುರಂಗ ಮಾರ್ಗದ ಮೇಲೆ ಹಾರಾಡುತ್ತಿರುವ ವಿಡಿಯೋವನ್ನು ಪೋಸ್ಟ್‌ ಮಾಡಿದೆ.

ಹೈಜಾಕ್‌ ಆದ ಪಾಕ್‌ ರೈಲಿನ ಡ್ರೋನ್‌ ವಿಡಿಯೋ ವೈರಲ್‌

ಡ್ರೋನ್‌ ಚಿತ್ರಣ

Profile Vishakha Bhat Mar 12, 2025 11:55 AM

ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಬಲೂಚಿಸ್ತಾನದಲ್ಲಿ ಮಂಗಳವಾರ 450ಕ್ಕೂ ಹೆಚ್ಚು ಪ್ರಯಾಣಿಕರಿದ್ದ ರೈಲನ್ನು (Train Hijack) ಅಪಹರಿಸಿರುವ ಪ್ರತ್ಯೇಕತಾವಾದಿ ಉಗ್ರರು, 182 ಮಂದಿ ಭದ್ರತಾ ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಒತ್ತೆಯಾಳುಗಳನ್ನು ರಕ್ಷಿಸುವಲ್ಲಿ ಪಾಕ್‌ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ 104 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ 16 ಬಂಡುಕೋರರು ಹತರಾಗಿದ್ದಾರೆ ಎಂದು ಪಾಕ್‌ ಸೇನೆ ತಿಳಿಸಿದೆ. ಇದೀಗ ಬಲೂಚ್ ಬಂದೂಕುಧಾರಿಗಳು ಗುಂಡು ಹಾರಿಸಿದ ಕೆಲವೇ ಗಂಟೆಗಳ ನಂತರ , ಬಲೂಚಿಸ್ತಾನದ ಮಾಧ್ಯಮವು ರೈಲು ಇದ್ದ ಸುರಂಗದ ವೀಡಿಯೊವನ್ನು ಹಂಚಿಕೊಂಡಿದೆ.

ಸುರಂಗದ ವೀಡಿಯೊವನ್ನು ಹಂಚಿಕೊಂಡಿರುವ ಸ್ಥಳೀಯ ಮಾಧ್ಯಮ, ಪಾಕಿಸ್ತಾನಿ ಹೆಲಿಕಾಪ್ಟರ್‌ಗಳು ಸುರಂಗ ಮಾರ್ಗದ ಮೇಲೆ ಹಾರಾಡುತ್ತಿರುವ ವಿಡಿಯೋವನ್ನು ಪೋಸ್ಟ್‌ ಮಾಡಿದೆ.

ಮಾಧ್ಯಮಗಳು ಪೋಸ್ಟ್‌ ಮಾಡಿದ ವಿಡಿಯೋ



ಎಕ್ಸ್ ಪೋಸ್ಟ್‌ನಲ್ಲಿ, ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ತನ್ನ ಪಡೆಗಳು ಪಾಕಿಸ್ತಾನಿ ಪಡೆಗಳನ್ನು ಹಿಮ್ಮೆಟ್ಟಿಸಿ 30 ಕ್ಕೂ ಹೆಚ್ಚು ಸೈನಿಕರನ್ನು ಕೊಂದಿವೆ ಎಂದು ಹೇಳಿಕೊಂಡಿದೆ ಎಂದು ಮಾಧ್ಯಮಗಳು ತಿಳಿಸಿವೆ. ಬಲೂಚ್ ಲಿಬರೇಶನ್ ಆರ್ಮಿ ಉಗ್ರರು ಕ್ವೆಟ್ಟಾದಿಂದ ಪೇಶಾವರಕ್ಕೆ ತೆರಳುತ್ತಿದ್ದ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮಂಗಳವಾರ ಗುಂಡಿನ ದಾಳಿ ನಡೆಸಿದ್ದಾರೆ. ಒತ್ತೆಯಾಳುಗಳನ್ನು ರಕ್ಷಿಸುವಲ್ಲಿ ಪಾಕ್‌ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ 104 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ 16 ಬಂಡುಕೋರರು ಹತರಾಗಿದ್ದಾರೆ ಎಂದು ಪಾಕ್‌ ಸೇನೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Train Hijack : ಪಾಕ್‌ ಎಕ್ಸ್‌ಪ್ರೆಸ್‌ ರೈಲು ಹೈಜಾಕ್‌; 104 ಒತ್ತೆಯಾಳುಗಳ ರಕ್ಷಣೆ, 16 ಬಂಡುಕೋರರ ಹತ್ಯೆ

ಪಾಕಿಸ್ತಾನ ವಿರೋಧಿ ಧೋರಣೆ ಹೊಂದಿರುವ ಬಲೂಚಿಸ್ತಾನದ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಉಗ್ರರು ಖೈಬರ್‌ ಕಣಿವೆಯ ಗುಡಾಲಾರ್ ಹಾಗೂ ಪಿರು ಕೊಣೇರಿ ನಡುವಿನ 8ನೇ ಸುರಂಗದ ಸನಿಹ ಸಾಗುತ್ತಿದ್ದ 9 ಕೋಚ್‌ಗಳಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ರೈಲು ಚಾಲಕ ಹಾಗೂ ಕೆಲವರು ಗಾಯಗೊಂಡಿದ್ದಾರೆ. ಬಳಿಕ ರೈಲನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಎಲ್ಲಾ ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಇದೀಗ 58 ಪುರುಷರು, 31 ಮಹಿಳೆಯರು ಮತ್ತು 15 ಮಕ್ಕಳು ಸೇರಿದಂತೆ 104 ಒತ್ತೆಯಾಳುಗಳನ್ನು ಭದ್ರತಾ ಪಡೆಗಳು ಯಶಸ್ವಿಯಾಗಿ ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಲೇ ಇದೆ.