Thursday, 12th December 2024

ಬಿಡೆನ್’ರ ಕೊರೋನಾ​ ರೆಸ್ಪಾನ್ಸ್ ಟೀಂಗೆ ವಿದುರ್​ ಶರ್ಮಾ ಆಯ್ಕೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ಕೊರೋನಾ​ ರೆಸ್ಪಾನ್ಸ್ ಟೀಂಗೆ ಭಾರತೀಯ ಮೂಲದ ವಿದುರ್​ ಶರ್ಮಾ ಅವರು ಆಯ್ಕೆಯಾಗಿದ್ದಾರೆ.

ವಿದುರ್​ ಶರ್ಮಾ ನೀತಿ ಸಲಹೆಗಾರರನ್ನಾಗಿ ನೇಮಕ ಮಾಡಿ ಶ್ವೇತ ಭವನದಿಂದ ಪ್ರಕಟಣೆ ಹೊರಡಿಸಲಾಗಿದೆ. ಒಬಾಮಾ ಆಡಳಿತದ ಅವಧಿಯಲ್ಲಿ ಶರ್ಮಾ ದೇಶಿಯ ನೀತಿ ಮಂಡಳಿಯಲ್ಲಿ ಆರೋಗ್ಯ ನೀತಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಇದರ ಜೊತೆಯಲ್ಲಿ ಪ್ರೊಟೆಕ್ಟ್​ ಅವರ್​ ಕೇರ್ ನಲ್ಲಿ ಉಪ ಸಂಶೋಧನಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಅಮೆರಿಕದಲ್ಲಿ ನಡೆಯುತ್ತಿರುವ ಕೊರೊನಾ ಲಸಿಕೆ ಕಾರ್ಯಕ್ರಮವನ್ನ ಮೇಲ್ವಿಚಾರಣೆ ಮಾಡುವ ಸಲುವಾಗಿ ಈ ರೆಸ್ಪಾನ್ಸ್ ತಂಡವನ್ನ ರಚನೆ ಮಾಡಲಾಗಿದೆ.

ಮಿನ್ನೆಸೋಟಾದಲ್ಲಿ ಬೆಳೆದ ಶರ್ಮಾ ಪೋಷಕರು ಭಾರತೀಯ ಮೂಲದವರಾಗಿದ್ದಾರೆ. ವಿದುರ್​ ಶರ್ಮಾ ಹಾರ್ವಡ್​ ಟಿ.ಹೆಚ್​. ಚಾನ್​ ಸ್ಕೂಲ್​ ಆಫ್​ ಪಬ್ಲಿಕ್​ ಹೆಲ್ತ್ ಹಾಗೂ ಲ್ಯೂಯಿಸ್​ ವಿಶ್ವ ವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ.