ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Volodymyr Zelensky: ಟ್ರಂಪ್‌ ಸುಂಕ ಹೆಚ್ಚಳ ನೀತಿಗೆ ಜೈ ಎಂದ ಝೆಲೆನ್ಸ್ಕಿ

Zelensky supports Trump: ಸಂದರ್ಶನವೊಂದರಲ್ಲಿ ಮಾತನಾಡಿರುವ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ದೇಶಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರ ಸರಿಯಾಗಿದೆ ಎಂದು ಹೇಳಿದ್ದು, ಉಕ್ರೇನ್‌ನೊಂದಿಗೆ ನಡೆಯುತ್ತಿರುವ ಯುದ್ಧದ ಕಾಲದಲ್ಲಿ ಇದು ಸರಿಯಾದ ನಿರ್ಣಯ ಎಂದು ಹೇಳಿದ್ದಾರೆ.

ಸುಂಕ ಹೆಚ್ಚಳ: ಟ್ರಂಪ್ ನಿರ್ಧಾರ ಸರಿಯಾಗಿದೆ ಎಂದ ಝೆಲೆನ್ಸ್ಕಿ

-

ವಾಷಿಂಗ್ಟನ್: ಚೀನಾ (China) ಮತ್ತು ರಷ್ಯಾದೊಂದಿಗೆ (Russia) ಭಾರತದ ಮೈತ್ರಿ ಸಂಬಂಧಗಳು ಬಲವಾಗುತ್ತಿದ್ದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಅವರ ಪರವಾಗಿ ನಿಂತಿರುವ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Ukrainian President Volodymyr Zelensky), ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿರುವ ದೇಶಗಳ ಮೇಲೆ ಹೆಚ್ಚಿನ ಸುಂಕ ವಿಧಿಸುವುದು ಸರಿಯಾದ ಆಲೋಚನೆ ಎಂದು ಹೇಳಿದ್ದಾರೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಟ್ರಂಪ್ ಅವರು ಭಾರತ ಸೇರಿದಂತೆ ರಷ್ಯಾದೊಂದಿಗೆ ವ್ಯಾಪಾರ ವಹಿವಾಟು ನಡೆಸುತ್ತಿರುವ ದೇಶಗಳ ಮೇಲೆ ವಿಧಿಸಿರುವ ಹೆಚ್ಚುವರಿ ಸುಂಕವನ್ನು ಸಮರ್ಥಿಸಿಕೊಂಡರು.

ಇತ್ತೀಚೆಗಷ್ಟೇ ಚೀನಾದ ಬಂದರು ನಗರಿ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾರತವು ಚೀನಾ ಮತ್ತು ರಷ್ಯಾದೊಂದಿಗಿನ ವ್ಯಾಪಾರ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿತ್ತು. ರಷ್ಯಾದ ತೈಲ ಖರೀದಿಯನ್ನು ವಿರೋಧಿಸಿ ಭಾರತಕ್ಕೆ ಪದೇ ಪದೇ ಸುಂಕ ಬೆದರಿಕೆ ಒಡ್ಡುತ್ತಿರುವ ಅಮೆರಿಕ ಈಗ ತನ್ನ ನಿರ್ಧಾರದ ಬಗ್ಗೆ ಚಿಂತನೆ ನಡೆಸುತ್ತಿರುವಾಗಲೇ ವೊಲೊಡಿಮಿರ್ ಝೆಲೆನ್ಸ್ಕಿ ಈ ಮಾತು ಹೇಳಿದ್ದಾರೆ.

ಈಗಾಗಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಶೇ. 50ರಷ್ಟು ಸುಂಕ ವಿಧಿಸಿದ್ದಾರೆ. ಆದರೂ ಭಾರತ ಇದನ್ನು ಸ್ವೀಕರಿಸುವುದಾಗಿ ಹೇಳಿ ಅಮೆರಿಕದೊಂದಿಗೆ ಮಾತುಕತೆಯನ್ನು ಮುಂದುವರಿಸಿದೆ. ಆದರೆ ಈವರೆಗೆ ಯಾವುದೇ ಅಂತಿಮ ನಿರ್ಣಯ ಕೈಗೊಂಡಿಲ್ಲ. ಈ ನಡುವೆಯೇ ಜಪಾನ್, ಚೀನಾ ಸೇರಿದಂತೆ ಹಲವು ರಾಷ್ಟ್ರಗಳಿಗೆ ಭೇಟಿ ನೀಡಿ ಹಲವು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ನಾವು ಯಾವ ಬೆದರಿಕೆಗೂ ಬಗ್ಗುವುದಿಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ವಿಶ್ವಕ್ಕೆ ಸಾರಿದ್ದಾರೆ.

ಈ ನಡುವೆಯೇ ಸಂದರ್ಶನವೊಂದರಲ್ಲಿ ಮಾತನಾಡಿರುವ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಳ್ಳುವುದನ್ನು ಮುಂದುವರಿಸುವ ದೇಶಗಳ ಮೇಲೆ ಸುಂಕ ವಿಧಿಸುವುದಕ್ಕೆ ಟ್ರಂಪ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ನೊಂದಿಗೆ ನಡೆಯುತ್ತಿರುವ ಯುದ್ಧದ ಕಾಲದಲ್ಲಿ ಇದು ಸರಿಯಾದ ನಿರ್ಣಯ ಎಂದು ಹೇಳಿ ಅವರು ಟ್ರಂಪ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಬಡತನದಿಂದ ಬೇಸತ್ತು ಹೆತ್ತ ಮಗುವನ್ನೇ ಮಾರಾಟ ಮಾಡಿದ ದಂಪತಿ!

ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಳ್ಳುವುದನ್ನು ಮುಂದುವರಿಸುತ್ತಿರುವ ದೇಶದ ಮೇಲೆ ಸುಂಕ ವಿಧಿಸುವ ಕಲ್ಪನೆ ಸರಿಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಝೆಲೆನ್ಸ್ಕಿ ತಿಳಿಸಿದ್ದರು.