ವಾಷಿಂಗ್ಟನ್: ರೀಡ್ಸ್ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ವಧು ನಿದ್ರಿಸುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿ ಮೃತಪಟ್ಟಿದ್ದಾಳೆ.
ಪೈಜ್ ರಡ್ಡಿ (19) ವರ್ಷದ ಯುವತಿ ಈ ಘಟನೆಯಲ್ಲಿ ಮೃತಪಟ್ಟ ವಧು.
ಈ ಘಟನೆ ಅಮೇರಿಕಾದ ವಿಸ್ಕಾನ್ಸಿನ್ ನಲ್ಲಿ ಬೆಳಕಿಗೆ ಬಂದಿದೆ. ಎರಡನೇ ಮಹಡಿಯಲ್ಲಿ ನಿದ್ರಿಸುತ್ತಿದ್ದ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಹೊಗೆಯಿಂದಾಗಿ ಉಸಿರುಗಟ್ಟಿ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾಳೆ ಎಂದು ವರದಿಗಳು ತಿಳಿಸಿವೆ.