ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Modi Trump Meeting: 'ನಾವು ನಿಮ್ಮನ್ನು ಮಿಸ್ ಮಾಡಿಕೊಂಡೆವು....ʼ ಮೋದಿಯನ್ನು ಕಂಡೊಡನೆ ಅಪ್ಪಿಕೊಂಡ ಟ್ರಂಪ್‌

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಮೋದಿ ಅಮೆರಿಕದಲ್ಲಿ ಬಂದಿಳಿಯುತ್ತಿದ್ದಂತೆ ಅನಿವಾಸಿ ಭಾರತೀಯರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಶ್ವೇತ ಭವನಕ್ಕೆ ತೆರಳಿದ ಪ್ರಧಾನಿಯನ್ನು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆತ್ಮೀಯವಾಗಿ ಬರಮಾಡಿಕೊಂಡರು.

ಶ್ವೇತ ಭವನದಲ್ಲಿ ಟ್ರಂಪ್‌ ಭೇಟಿ ಮಾಡಿದ ಮೋದಿ

ವಾಷಿಂಗ್ಟನ್:‌ ಪ್ರಧಾನ ಮಂತ್ರಿ ನರೇಂದ್ರ ಮೋದಿ(Narendra Modi) ಅವರು ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಮೋದಿ ಅಮೆರಿಕದಲ್ಲಿ ಬಂದಿಳಿಯುತ್ತಿದ್ದಂತೆ ಅನಿವಾಸಿ ಭಾರತೀಯರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಶ್ವೇತ ಭವನಕ್ಕೆ ತೆರಳಿದ ಪ್ರಧಾನಿಯನ್ನು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆತ್ಮೀಯವಾಗಿ ಬರಮಾಡಿಕೊಂಡರು. ಮೋದಿಯನ್ನು ಅಪ್ಪಿಕೊಂಡ ಟ್ರಂಪ್‌ ನಾವು ನಿಮ್ಮನ್ನು ಬಹಳ ಮಿಸ್‌ ಮಾಡಿಕೊಂಡೆವು ಎಂದು ಎರಡು ಬಾರಿ ಹೇಳಿದ್ದಾರೆ. ಟ್ರಂಪ್‌ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೋದಿ ಮೊದಲ ಬಾರಿಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

ಶ್ವೇತ ಭವನದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ ದೊರಕಿದೆ. ಅಪ್ಪುಗೆಯೊಂದಿಗೆ ಮೋದಿಯವರನ್ನು ಸ್ವಾಗತಿಸಿದ ಟ್ರಂಪ್ ನಿಮ್ಮನ್ನು ಬಹಳ ಮಿಸ್‌ ಮಾಡಿಕೊಂಡೆವು ಎಂದು ಹೇಳಿದ್ದಾರೆ. ಇದಕ್ಕೆ ನಗುತ್ತಾ ಪ್ರತಿಕ್ರಿಯಿಸಿದ ಮೋದಿ ನಿಮ್ಮನ್ನು ನೋಡಿ ಖುಷಿಯಾಯಿತು ಎಂದು ಹೇಳಿದ್ದಾರೆ. ಇವರಿಬ್ಬರ ಬಾಂಧ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮತ್ತೊಂದು ವಿಡಿಯೋದಲ್ಲಿ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಕುರ್ಚಿಯನ್ನು ಎಳೆಯುತ್ತಿರುವುದು ಕೂಡ ಕಂಡುಬಂದಿದೆ. ಟ್ರಂಪ್‌ ಮೋದಿಗೆ ತಾವು ಬರೆದಿರುವ ಪುಸ್ತಕ "ಅವರ್‌ ಜರ್ನಿ ಟುಗೆದರ್‌" ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಅದರ ಮೇಲೆ ನೀವು ಶ್ರೇಷ್ಠರು ಎಂದು ಬರೆಯಲಾಗಿದೆ.



ಗುರುವಾರ ವಾಷಿಂಗ್ಟನ್‌ನಲ್ಲಿ ನಡೆದ ಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶಸ್ತ್ರಾಸ್ತ್ರ ಮಾರಾಟ ಮತ್ತು ವ್ಯಾಪಾರ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ತಮ್ಮ ಬಹುಕಾಲದ ಗೆಳೆತನ ಬಗ್ಗೆ ಮಾತನಾಡಿದ್ದಾರೆ. ನನ್ನ ಸ್ನೇಹಿತ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ವೇತಭವನಕ್ಕೆ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ ಎಂದು ಮೋದಿ ಒಬ್ಬ ವಿಶೇಷ ವ್ಯಕ್ತಿ ಎಂದು ಹೇಳುತ್ತಾ ಟ್ರಂಪ್‌ ತಮ್ಮ ಭಾಷಣ ಪ್ರಾರಂಭಿಸಿದ್ದರು.



ಈ ಸುದ್ದಿಯನ್ನೂ ಓದಿ: Modi-Trump Meet: 5ನೇ ಜನರೇಷನ್‌ ಜೆಟ್‌, ಮಿಷನ್‌ 500, ಮುಂಬೈ ದಾಳಿ ರೂವಾರಿಯ ಗಡಿಪಾರು; ಟ್ರಂಪ್‌-ಮೋದಿ ಒಪ್ಪಂದಗಳ ಲಿಸ್ಟ್‌ ಇಲ್ಲಿದೆ

ಮೋದಿ ಹಾಗೂ ಟ್ರಂಪ್‌ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದು, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಅವರು 2030 ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು 500 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ಗುರಿಯನ್ನು ಹೊಂದಿದ್ದಾರೆ. ಈ ಬಗ್ಗೆ ಮಾತನಾಡಿದ ಮೋದಿ ಇಂದು, ನಮ್ಮ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ನಾವು ಹೊಂದಿದ್ದೇವೆ, 2030 ರ ವೇಳೆಗೆ 500 ಶತಕೋಟಿ ಡಾಲರ್ ತಲುಪುತ್ತೇವೆ ಎಂದು ಹೇಳಿದ್ದಾರೆ. ಭಾರತದ ಇಂಧನ ಭದ್ರತೆ ಮತ್ತು ಇಂಧನ ಮೂಲಸೌಕರ್ಯದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮಾತನಾಡಿದರು.