ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Donald Trump: ರಷ್ಯಾದ ತೈಲವನ್ನು ಭಾರತ ಖರೀದಿಸುವುದಿಲ್ಲ-ಡೊನಾಲ್ಡ್ ಟ್ರಂಪ್ ಮತ್ತೆ ಅದೇ ರಾಗ... ಅದೇ ಹಾಡು!

Russian Oil Purchase: ಪ್ರಧಾನಿ ನರೇಂದ್ರ ಮೋದಿ ಅವರು ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಟ್ರಂಪ್‌ ಮತ್ತೇ ಹೇಳಿದ್ದು, ಈ ಹೇಳಿಕೆಯನ್ನು ಟ್ರಂಪ್ ಅವರು ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದಾಗ ನೀಡಿದ್ದಾರೆ.

ಟ್ರಂಪ್ - ಮೋದಿ

ವಾಷಿಂಗ್ಟನ್: ಭಾರತೀಯ ಸರಕುಗಳ ಮೇಲೆ ಹೆಚ್ಚುವರಿ ಶೇಕಡಾ 25ರಷ್ಟು ಸುಂಕಗಳನ್ನು ವಿಧಿಸಿ, ಭಾರತದ ವಿರುದ್ಧ ಸುಂಕ ಸಮರ ಘೋಷಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ (Donald Trump) ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ(PM Modi) ಹೇಳಿದ್ದಾರೆ ಎಂದು ಡೊನಾಲ್ಡ್ ಟ್ರಂಪ್‌ಗೆ ಕೆಲವು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಇಂತಹ ಮಾತುಕತೆ ನಡೆದೇ ಇಲ್ಲ ಎಂದು ಭಾರತ ಎಷ್ಟೇ ಹೇಳಿದರೂ ಇದೀಗ ಮತ್ತೆ ಟ್ರಂಪ್‌ ಅದೇ ರಾಗ... ಅದೇ ಹಾಡು ಹಾಡಿದ್ದಾರೆ.

ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಹಾಗೂ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಟ್ರಂಪ್‌ ಮತ್ತೆ ಅದೇ ಹೇಳಿಕೆಯನ್ನು ನೀಡಿದ್ದಾರೆ. ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುತ್ತದೆ ಎಂದು ಮತ್ತೆ ಪುನರುಚ್ಚರಿಸಿರುವ ಟ್ರಂಪ್, ನಾವು ವಿಧಿಸಿದ್ದ ಹೆಚ್ಚುವರಿ ಸುಂಕಕ್ಕೆ ಭಾರತ ಮಣಿದಿದ್ದು, ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ. ಈಗಾಗಲೇ ಭಾರತ, ಹಂತ ಹಂತವಾಗಿ ಆಮದು ಪ್ರಮಾಣವನ್ನು ಕಡಿಮೆ ಮಾಡುತ್ತಿದ್ದು, ಇದರಿಂದ ರಷ್ಯಾ ತನ್ನ ಅತೀ ದೊಡ್ಡ ತೈಲ ಗ್ರಾಹಕನನ್ನು ಕಳೆದುಕೊಂಡಿದೆ ಎಂದು ಹೇಳಿದೆ. ಭಾರತ ಸುಮಾರು ಶೇ.40ರಷ್ಟು ತೈಲವನ್ನು ಖರೀದಿಸುತ್ತಿತ್ತು. ಆದರೀಗ ಅಮೆರಿಕ ವಿಧಿಸಿದ ಹೆಚ್ಚುವರಿ ಸುಂಕ ಕಾರಣದಿಂದಾಗಿ ರಷ್ಯಾದೊಂದಿಗೆ ತೈಲ ವ್ಯವಹಾರವನ್ನು ಭಾರತ ನಿಲ್ಲಿಸಿದ್ದು, ಇದರಿಂದ ರಷ್ಯಾಕ್ಕೆ ಪ್ರಮುಖ ಆದಾಯ ಮೂಲವೇ ಮುಚ್ಚಿ ಹೋಗಿದೆ. ಅಲ್ಲದೇ ಭಾರತ ತೈಲ ಖರೀದಿ ನಿಲ್ಲಿಸಿದ್ದರೆ ರಷ್ಯಾದ ಆರ್ಥಿಕತೆಗೆ ಪೆಟ್ಟು ಬೀಳಲಿದೆ ಎಂದಿದ್ದಾರೆ.

ಈ ಸುದ್ದಿಯನ್ನೂ ಓದಿ: Viral News: ಪರೀಕ್ಷೆ ನಿಲ್ಲಿಸಲು 'ಪ್ರಾಂಶುಪಾಲರು ಸತ್ತಿದ್ದಾರೆ' ಎಂಬ ನೊಟೀಸ್ ನೀಡಿದ ವಿದ್ಯಾರ್ಥಿಗಳು; ಮುಂದೇನಾಯ್ತು ಗೊತ್ತೆ?

ಮುಂದುವರಿದು ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುತ್ತದೆ ಎಂದು ಸ್ವತ: ಪ್ರಧಾನಿ ಮೋದಿಯವರೇ ಭರವಸೆ ನೀಡಿದ್ದಾರೆ. ಶೀಘ್ರವಾಗಿ ಈ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ . ಆದರೆ ಮುಂದಿನ ದಿನಗಳಲ್ಲಿ ಖಂಡಿತ ಈ ಕ್ರಮವನ್ನು ನಾವು ಅನುಸರಿಸುತ್ತೇವೆ ಎಂದಿದ್ದು, ಭಾರತದ ಈ ದಿಟ್ಟ ಹೆಜ್ಜೆ ಯುದ್ದವನ್ನು ನಿಲ್ಲಿಸುವಲ್ಲಿ ಸಹಕಾರಯಾಗಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಟ್ರಂಪ್ ಪ್ರಧಾನಿ ಮೋದಿಯನ್ನು ‘ಮಹಾನ್ ವ್ಯಕ್ತಿ’ ಹಾಗೂ ಭಾರತ ನಂಬಿಕಾರ್ಹವಾದ ರಾಷ್ಟ್ರ ಎಂದು ಹಾಡಿ ಹೊಗಳಿದ್ದಾರೆ.

ಆದರೆ, ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಭಾರತದ ಪ್ರಧಾನಿ ಮೋದಿ ನನಗೆ ಭರವಸೆ ನೀಡಿದ್ದರು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಂಧೀರ್ ಜೈಸ್ವಾಲ್ ಸ್ಫಷ್ಟನೆ ನೀಡಿದ್ದಾರೆ. ಭಾರತ ಸರ್ಕಾರ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಟ್ರಂಪ್ ಅವರ ಹೇಳಿಕೆ ಖಂಡನೀಯವಾಗಿದ್ದು, ಭಾರತದ ಪ್ರಧಾನಿ ಹಾಗೂ ಯುಸ್ ಅಧ್ಯಕ್ಷರ ನಡುವೆ ಯಾವುದೇ ದೂರವಾಣಿ ಸಂಭಾಷಣೆ ನಡೆದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಟ್ರಂಪ್ ಅವರ ಈ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು, ರಷ್ಯಾದೊಂದಿಗಿನ ವ್ಯಾಪಾರ - ವ್ಯವಹಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಾವು ನಮ್ಮ ನಿಲುವನ್ನು ತಿಳಿಸಿದ್ದೇವೆ," ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆಯೂ ಅಮೆರಿಕದ ಸುಂಕ ನೀತಿಯಿಂದಾಗಿ ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದರು. ಭಾರತ ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಹಣಕಾಸಿನ ನೆರವು ನೀಡುತ್ತಿದೆ ಎಂಬ ಹೇಳಿಕೆಯನ್ನು ನೀಡಿದ್ದ ಟ್ರಂಪ್‌, ರಷ್ಯಾದಿಂದ ಭಾರತ ತೈಲ ಖರೀದಿಸುವುದು ನಮಗೆ ಸರಿ ಕಾಣಿಸುವುದಿಲ್ಲ ಹಾಗೂ ಈ ವ್ಯವಹಾರಿಕ ನೀತಿ ತೃಪ್ತಿದಾಯಕವಲ್ಲ ಎಂದು ಅಭಿಪ್ರಾಯಪಟ್ಟಿದ್ದರು.ಅಲ್ಲದೇ ಅಮೆರಿಕದ ಕೆಲ ಅಧಿಕಾರಿಗಳೂ ಟ್ರಂಪ್‌ ಹೇಳಿಕೆಯನ್ನ ಉಲ್ಲೇಖಿಸಿ ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದ್ದರು. ಆದ್ರೆ ರಷ್ಯಾದ ಸಂಬಂಧ ಬಿಟ್ಟುಕೊಡದ ಭಾರತ ತೈಲ ಖರೀದಿ ಮುಂದುವರಿಸಿದೆ.