Wednesday, 11th December 2024

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಪ್ರೊ.ಮೊಹಮ್ಮದ್ ಯೂನಸ್‌ ತಪ್ಪಿತಸ್ಥ

ಢಾಕಾ: ಬಾಂಗ್ಲಾದೇಶದ ಕಾರ್ಮಿಕ ಕಾನೂನು ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಮೊಹಮ್ಮದ್ ಯೂನಸ್‌ ಅವರನ್ನು ತಪ್ಪಿತಸ್ಥ ಎಂದು ಅಲ್ಲಿನ ನ್ಯಾಯಾಲಯ ಆದೇಶಿಸಿದೆ. ಆದರೆ ಇದು ರಾಜಕೀಯ ಪ್ರೇರಿತ ಎಂದು ಅವರ ಬೆಂಬಲಿಗರು ಆರೋಪಿಸಿದ್ದಾರೆ.

ಪ್ರೊ.ಯೂನಸ್ ಅವರೊಂದಿಗೆ ಗ್ರಾಮೀಣ್ ಟೆಲಿಕಾಮ್‌ನ ಮೂವರು ಸಹೋದ್ಯೋಗಿಗಳನ್ನೂ ಅಪರಾಧಿಗಳು ಎಂದು ನ್ಯಾಯಾಲಯ ಹೇಳಿದೆ. ನಾಲ್ಕೂ ಜನರಿಗೆ ಆರು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಲಾಗಿದೆ.

ಮೈಕ್ರೊ ಫೈನಾನ್ಸ್‌ ಪ್ರವರ್ತಕ 83 ವರ್ಷದ ಮೊಹಮ್ಮದ್ ಯೂನಸ್ ಸ್ಥಾಪಿಸಿದ ಬಾಂಗ್ಲಾದೇಶ ಕಂಪನಿಯ ಸಿಬ್ಬಂದಿಗೆ ಹಣ ಪಾವತಿಸದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.